IND vs IRE: ಪದಾರ್ಪಣೆ ಪಂದ್ಯದ ಮೊದಲ ಓವರ್​ನಲ್ಲೇ ಮಿಂಚಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

Prasidh Krishna: ಭಾರತ ಮತ್ತು ಐರ್ಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಚೊಚ್ಚಲ ಟಿ20 ಪಂದ್ಯವನ್ನಾಡಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ, ಆಡಿದ ಮೊದಲ ಪಂದ್ಯದಲ್ಲಿ 2 ವಿಕೆಟ್ ಉರುಳಿಸಿ, ಟಿ20 ತಂಡಕ್ಕೆ ಭರ್ಜರಿ ಎಂಟ್ರಿಕೊಟ್ಟಿದ್ದಾರೆ.

IND vs IRE: ಪದಾರ್ಪಣೆ ಪಂದ್ಯದ ಮೊದಲ ಓವರ್​ನಲ್ಲೇ ಮಿಂಚಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಪ್ರಸಿದ್ಧ್ ಕೃಷ್ಣ
Follow us
ಪೃಥ್ವಿಶಂಕರ
|

Updated on: Aug 19, 2023 | 11:46 AM

ಭಾರತ ಮತ್ತು ಐರ್ಲೆಂಡ್ (India vs Ireland) ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಪರ ಚೊಚ್ಚಲ ಟಿ20 ಪಂದ್ಯವನ್ನಾಡಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh Krishna ), ಆಡಿದ ಮೊದಲ ಪಂದ್ಯದಲ್ಲಿ 2 ವಿಕೆಟ್ ಉರುಳಿಸಿ, ಟಿ20 ತಂಡಕ್ಕೆ ಭರ್ಜರಿ ಎಂಟ್ರಿಕೊಟ್ಟಿದ್ದಾರೆ. ವಾಸ್ತವವಾಗಿ ಬಹಳ ಹಿಂದೆಯೇ ಭಾರತ ಏಕದಿನ ತಂಡಕ್ಕೆ ಪದಾರ್ಪಣೆ ಮಾಡಿದ್ದ ಪ್ರಸಿದ್ಧ್ ಕೃಷ್ಣ, ಇಂಜುರಿಯಿಂದಾಗಿ ವರ್ಷದಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದರು. ಇದೀಗ ನಾಯಕ ಜಸ್ಪ್ರೀತ್ ಬುಮ್ರಾ (Jasprit Bumrah) ಜೊತೆಗೆ ಭರ್ಜರಿ ಕಂಬ್ಯಾಕ್ ಮಾಡಿರುವ ಪ್ರಸಿದ್ಧ್ ಕೃಷ್ಣ, ನಾನು ಕೂಡ ಏಷ್ಯಾಕಪ್ ಹಾಗೂ ವಿಶ್ವಕಪ್​ಗೆ ತಂಡದಲ್ಲಿ ಸ್ಥಾನ ಪಡೆಯಲು ಸ್ಪರ್ಧಿ ಎಂಬ ಸುಳಿವನ್ನು ಆಯ್ಕೆ ಮಂಡಳಿಗೆ ನೀಡಿದ್ದಾರೆ.

ವಾಸ್ತವವಾಗಿ ಈ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರರು ಆಡುತ್ತಿಲ್ಲ. ಹೀಗಾಗಿ ತಂಡದಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆಗಳು ಹೆಚ್ಚಿವೆ. ಅದಕ್ಕೆ ಪೂರಕವಾಗಿ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಪರ ಇಬ್ಬರು ಯುವ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಲಾಯಿತು. ಅವರಲ್ಲಿ ರಿಂಕು ಸಿಂಗ್ ಹಾಗೂ ಪ್ರಸಿದ್ಧ್ ಕೃಷ್ಣ ಸೇರಿದ್ದರು. ಒಂದೆಡೆ ಬೌಲಿಂಗ್​ನಲ್ಲಿ ಪ್ರಸಿದ್ಧ್ ಕೃಷ್ಣ ಮಿಂಚಿದರೆ, ರಿಂಕು ಸಿಂಗ್​ಗೆ ಮೊದಲ ಪಂದ್ಯದಲ್ಲಿ ಆಡುವ ಅವಕಾಶ ಸಿಗಲಿಲ್ಲ.

Prasidh Krishna: ಇಂಜುರಿ ಬಗ್ಗೆ ಬಿಗ್​ ಅಪ್​ಡೇಟ್ ನೀಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ; ಮತ್ತೆ ತಂಡಕ್ಕೆ ರೀ ಎಂಟ್ರಿ ಯಾವಾಗ?

2 ವಿಕೆಟ್ ಉರುಳಿಸಿದ ಪ್ರಸಿದ್ಧ್

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಬುಮ್ರಾ ಮೊದಲು ಬೌಲಿಂಗ್ ಮಾಡುವ ನಿರ್ಧರಿಸಿದರು. ಹೀಗಾಗಿ ಬೌಲಿಂಗ್ ಮಾಡುವ ಅವಕಾಶ ಪಡೆದ ಪ್ರಸಿದ್ಧ್ ಕೃಷ್ಣ 2 ವಿಕೆಟ್ ಉರುಳಿಸಿ ಆಯ್ಕೆ ಮಂಡಳಿಯ ನಂಬಿಕೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಐರ್ಲೆಂಡ್ ಇನ್ನಿಂಗ್ಸ್​ನ ಐದನೇ ಓವರ್‌ನಲ್ಲಿ ಪ್ರಸಿದ್ಧ್ ಬೌಲಿಂಗ್‌ಗೆ ಬಂದರು. ಕಳೆದ ವರ್ಷ ಆಗಸ್ಟ್‌ನಲ್ಲಿ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯ ನಂತರ ಮೊದಲ ಓವರ್ ಬೌಲ್ ಮಾಡಿದ್ದ ಪ್ರಸಿದ್ಧ್ ಕೃಷ್ಣ ತಮ್ಮ ಓವರ್​ನ ಕೊನೆಯ ಎಸೆತದಲ್ಲಿ ಹ್ಯಾರಿ ಟೆಕ್ಟರ್ ಅವರ ವಿಕೆಟ್ ಪಡೆದರು.

ಕೊನೆಯ ಓವರ್​ನಲ್ಲಿ ದುಬಾರಿ

ಮುಂದಿನ ಓವರ್‌ನಲ್ಲಿ ತಂಡಕ್ಕೆ ಮತ್ತೊಂದು ಯಶಸ್ಸನ್ನು ತಂದುಕೊಟ್ಟ ಪ್ರಸಿದ್ಧ್ ಕೃಷ್ಣ, ಈ ಬಾರಿ ಅನುಭವಿ ಆಲ್‌ರೌಂಡರ್ ಜಾರ್ಜ್ ಡಾಕ್ರೆಲ್ ಅವರ ವಿಕೆಟ್ ಪಡೆದರು. ಏಳನೇ ಓವರ್‌ನ ಮೂರನೇ ಎಸೆತದಲ್ಲಿ ಪ್ರಸಿದ್ಧ್ ಕೃಷ್ಣ , ಡಾಕ್ರೆಲ್ ವಿಕೆಟ್ ಉರುಳಿಸಿದರು. ಈ ಮೂಲಕ ಐರ್ಲೆಂಡ್‌ನ ಮಧ್ಯಮ ಕ್ರಮಾಂಕವನ್ನು ಕೆಡವುವಲ್ಲಿ ಪ್ರಸಿದ್ಧ್ ಪ್ರಮುಖ ಪಾತ್ರ ವಹಿಸಿದರು. ಈ ಪಂದ್ಯದಲ್ಲಿ ಪ್ರಸಿದ್ಧ್ ಕೃಷ್ಣ 2 ವಿಕೆಟ್ ಉರುಳಿಸಿದರಾದರೂ, ಕೊನೆಯ ಓವರ್​ನಲ್ಲಿ ಕೊಂಚ ದುಬಾರಿಯಾದರು. ಒಟ್ಟಾರೆಯಾಗಿ ತಮ್ಮ ಖೋಟಾದ 4 ಓವರ್‌ಗಳಲ್ಲಿ 32 ರನ್‌ ನೀಡಿದ ಪ್ರಸಿದ್ಧ್ 2 ವಿಕೆಟ್‌ ಪಡೆದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ