Deepak Hooda-Sanju Samson: ರೋಹಿತ್-ರಾಹುಲ್ ದಾಖಲೆ ಮುರಿದ ಹೂಡಾ-ಸ್ಯಾಮ್ಸನ್

| Updated By: ಝಾಹಿರ್ ಯೂಸುಫ್

Updated on: Jun 29, 2022 | 12:33 PM

IND vs IRE: ಟೀಮ್ ಇಂಡಿಯಾ ನೀಡಿದ 225 ರನ್​ಗಳ ಬೃಹತ್ ಗುರಿ ಬೆನ್ನತ್ತಿದ ಐರ್ಲೆಂಡ್ ತಂಡಕ್ಕೆ ಆರಂಭಿಕ ಆಟಗಾರ ಪಾಲ್ ಸ್ಟೀರ್ಲಿಂಗ್ ಸ್ಪೋಟಕ ಆರಂಭ ಒದಗಿಸಿದ್ದರು.

Deepak Hooda-Sanju Samson: ರೋಹಿತ್-ರಾಹುಲ್ ದಾಖಲೆ ಮುರಿದ ಹೂಡಾ-ಸ್ಯಾಮ್ಸನ್
Sanju Samson-Deepak Hooda
Follow us on

ಐರ್ಲೆಂಡ್ ವಿರುದ್ಧದ ಟಿ20 ಸರಣಿಯ 2 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ (Team India) ಸರಣಿಯನ್ನು ವಶಪಡಿಸಿಕೊಂಡಿದೆ. ವಿಶೇಷ ಎಂದರೆ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ 4 ರನ್​ಗಳ ರೋಚಕ ಜಯ ಸಾಧಿಸಿತ್ತು. ಡಬ್ಲಿನ್​ನ ದಿ ವಿಲೇಜ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿತ್ತು. ಯುವ ಓಪನರ್​ ಇಶಾನ್ ಕಿಶನ್ (3) ಬೇಗನೆ ಔಟಾದರೂ, ಆರಂಭಿಕನಾಗಿ ಕಾಣಿಸಿಕೊಂಡ ಸಂಜು ಸ್ಯಾಮ್ಸನ್​ ಸ್ಪೋಟಕ ಆರಂಭ ಒದಗಿಸಿದ್ದರು. ಅಲ್ಲದೆ ಈ ಬಾರಿ ಮೂರನೇ ಕ್ರಮಾಂಕದಲ್ಲಿ ಆಡಿದ ದೀಪಕ್ ಹೂಡಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಪರಿಣಾಮ 2ನೇ ವಿಕೆಟ್​ಗೆ 176 ರನ್​ಗಳ ಜೊತೆಯಾಟ ಮೂಡಿಬಂತು. ಒಂದೆಡೆ ಸಂಜು ಸ್ಯಾಮ್ಸನ್​ 42 ಎಸೆತಗಳಲ್ಲಿ 4 ಸಿಕ್ಸ್​ ಹಾಗೂ 9 ಫೋರ್​ಗಳೊಂದಿಗೆ 77 ರನ್​ ಬಾರಿಸಿದರೆ, ದೀಪಕ್ ಹೂಡಾ ಭರ್ಜರಿ ಶತಕ ಸಿಡಿಸಿದ್ದರು. ಸ್ಪೋಟಕ ಇನಿಂಗ್ಸ್ ಆಡಿದ ಹೂಡಾ 57 ಎಸೆತಗಳಲ್ಲಿ 6 ಸಿಕ್ಸ್​ ಹಾಗೂ 9 ಫೋರ್​ನೊಂದಿಗೆ 104 ರನ್ ಬಾರಿಸಿ ಅಬ್ಬರಿಸಿದರು. ಈ ಭರ್ಜರಿ ಶತಕದ ನೆರವಿನಿಂದ ಟೀಮ್ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗಳ ನಷ್ಟಕ್ಕೆ 225 ರನ್​ ಕಲೆಹಾಕಿತು.

ಇನ್ನು ಈ ಪಂದ್ಯದಲ್ಲಿ ಭರ್ಜರಿ ಜೊತೆಯಾಟ ಪ್ರದರ್ಶಿಸಿದ ದೀಪಕ್ ಹೂಡಾ ಹಾಗೂ ಸಂಜು ಸ್ಯಾಮ್ಸನ್ ಹೊಸ ದಾಖಲೆ ಬರೆದಿದ್ದು ವಿಶೇಷ. 2ನೇ ವಿಕೆಟ್​ಗೆ 176 ರನ್​ಗಳ ಜೊತೆಯಾಟವಾಡುವ ಮೂಲಕ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಜೊತೆಯಾಟವಾಡಿದ ಜೋಡಿ ಎನಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಹೆಸರಿನಲ್ಲಿತ್ತು.

ಇದನ್ನೂ ಓದಿ
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್

2017 ರಲ್ಲಿ ಶ್ರೀಲಂಕಾ ವಿರುದ್ಧ ರಾಹುಲ್ ಮತ್ತು ರೋಹಿತ್ 165 ರನ್‌ಗಳ ಜೊತೆಯಾಟವಾಡಿದ್ದರು. ಇದೀಗ ಹೂಡಾ ಮತ್ತು ಸ್ಯಾಮ್ಸನ್ 176 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾ ಪರ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ ಇದು ಟಿ20 ಕ್ರಿಕೆಟ್‌ನಲ್ಲಿ 9ನೇ ಅತಿದೊಡ್ಡ ಪಾಲುದಾರಿಕೆಯಾಗಿದೆ.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 225 ರನ್​ಗಳ ಬೃಹತ್ ಗುರಿ ಬೆನ್ನತ್ತಿದ ಐರ್ಲೆಂಡ್ ತಂಡಕ್ಕೆ ಆರಂಭಿಕ ಆಟಗಾರ ಪಾಲ್ ಸ್ಟೀರ್ಲಿಂಗ್ ಸ್ಪೋಟಕ ಆರಂಭ ಒದಗಿಸಿದ್ದರು. ಕೇವಲ 18 ಎಸೆತಗಳಲ್ಲಿ 40 ರನ್​​ ಬಾರಿಸುವ ಮೂಲಕ ಟೀಮ್ ಇಂಡಿಯಾ ಬೌಲರ್​ಗಳನ್ನು ನಡುಗಿಸಿದ್ದರು. ಇನ್ನೊಂದು ತುದಿಯಲ್ಲಿ ನಾಯಕ ಆಂಡ್ರ್ಯೂ ಬಾಲ್ಬಿರ್ನಿ 37 ಎಸೆತಗಳಲ್ಲಿ 60 ರನ್​ ಬಾರಿಸಿ ಮಿಂಚಿದ್ದರು.

ಇನ್ನು ಹ್ಯಾರಿ ಟೆಕ್ಟರ್ 28 ಎಸೆತಗಳಲ್ಲಿ 39 ರನ್ ಬಾರಿಸಿದರೆ, ಜಾರ್ಜ್​ ಡಾಕ್ರೆಲ್ 16 ಎಸೆತಗಳಲ್ಲಿ 34 ರನ್ ಸಿಡಿಸಿದ್ದರು. ಅಂತಿಮ ಹಂತದಲ್ಲಿ ಮಾರ್ಕ್ ಅಡೇರ್ 12 ಎಸೆತಗಳಲ್ಲಿ 23 ರನ್​ ಬಾರಿಸಿದರು. ಇದಾಗ್ಯೂ ಗುರಿ ಮುಟ್ಟಲಾಗಲಿಲ್ಲ. ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 221 ರನ್​ಗಳಿಸುವ ಕೇವಲ 4 ರನ್​ಗಳಿಂದ ಐರ್ಲೆಂಡ್ ತಂಡವು ವಿರೋಚಿತವಾಗಿ ಸೋಲೊಪ್ಪಿಕೊಂಡಿತು.