AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: 2ನೇ ಟಿ20 ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ? ಇಲ್ಲಿದೆ ಭಾರತ ಸಂಭಾವ್ಯ ತಂಡ

IND vs IRE: ಎರಡನೇ ಪಂದ್ಯಕ್ಕೆ ಉಭಯ ತಂಡಗಳಲ್ಲಿ ಯಾವುದಾದರೂ ಬದಲಾವಣೆಗಳಾಗುತ್ತಾ ಎಂಬುದನ್ನು ನೋಡುವುದಾದರೆ.. ಮೊದಲ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ತನ್ನ ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳು ತೀರ ಕಡಿಮೆ ಇವೆ. ಏಕೆಂದರೆ ಮೊದಲ ಪಂದ್ಯದಲ್ಲಿ ತಂಡದ ಎಲ್ಲಾ ವಿಭಾಗವೂ ಅಚ್ಚುಕಟ್ಟಾಗಿ ತಮ್ಮ ತಮ್ಮ ಜವಬ್ದಾರಿಯನ್ನು ನಿಭಾಯಿಸಿತ್ತು.

IND vs IRE: 2ನೇ ಟಿ20 ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ? ಇಲ್ಲಿದೆ ಭಾರತ ಸಂಭಾವ್ಯ ತಂಡ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Aug 20, 2023 | 7:29 AM

Share

ಐರ್ಲೆಂಡ್ ಪ್ರವಾಸವನ್ನು ಟೀಂ ಇಂಡಿಯಾ (India vs Ireland) ಗೆಲುವಿನೊಂದಿಗೆ ಆರಂಭಿಸಿದೆ. ಡಬ್ಲಿನ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ 2 ರನ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಟಿ20 ಪಂದ್ಯ ಗೆದ್ದರೆ ಸರಣಿ ಭಾರತದ ಜೇಬಿಗೆ ಬೀಳಲಿದೆ. ಹೀಗಾಗಿ ಎರಡನೇ ಪಂದ್ಯದ ಮೇಲೆ ಕ್ರೀಡಾ ಪ್ರೇಮಿಗಳ ಕಣ್ಣು ನೆಟ್ಟಿದೆ. ಇನ್ನು ಎರಡನೇ ಪಂದ್ಯಕ್ಕೆ ಉಭಯ ತಂಡಗಳಲ್ಲಿ ಯಾವುದಾದರೂ ಬದಲಾವಣೆಗಳಾಗುತ್ತಾ ಎಂಬುದನ್ನು ನೋಡುವುದಾದರೆ.. ಮೊದಲ ಪಂದ್ಯ ಗೆದ್ದಿರುವ ಟೀಂ ಇಂಡಿಯಾ (Team India) ತನ್ನ ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳು ತೀರ ಕಡಿಮೆ ಇವೆ. ಏಕೆಂದರೆ ಮೊದಲ ಪಂದ್ಯದಲ್ಲಿ ತಂಡದ ಎಲ್ಲಾ ವಿಭಾಗವೂ ಅಚ್ಚುಕಟ್ಟಾಗಿ ತಮ್ಮ ತಮ್ಮ ಜವಬ್ದಾರಿಯನ್ನು ನಿಭಾಯಿಸಿತ್ತು. ಹೀಗಾಗಿ ನಾಯಕ ಬುಮ್ರಾ (Jasprit Bumrah) ಗೆಲುವಿನ ಸಂಯೋಜನೆಯನ್ನು ಬದಲಿಸುವ ಗೋಜಿಗೆ ಹೋಗುವ ಸಾಧ್ಯತೆ ಕಡಿಮೆ.

ಪಿಚ್ ವರದಿ

ಮೂರು ಪಂದ್ಯಗಳ ಟಿ20 ಸರಣಿ ಇದೇ ಮೈದಾನದಲ್ಲಿ ನಡೆಯಲ್ಲಿದೆ. ಹಾಗಾಗಿ ಪಿಚ್​ನಲ್ಲಿ ದಿನದಿಂದ ದಿನಕ್ಕೆ ಒಂದಷ್ಟು ಬದಲಾವಣೆಗಳಾಗುವುದರಲ್ಲಿ ಸಂಶಯವಿಲ್ಲ. ಆರಂಭದಲ್ಲಿ ಬ್ಯಾಟ್ಸ್‌ಮನ್‌ಗಳಿಗೆ ನೆರವಾಗುವ ಪಿಚ್, ಆ ಬಳಿಕ ಬೌಲರ್‌ಗಳ ಪರವಾಗಿ ವಾಲುತ್ತದೆ. ಏಕೆಂದರೆ ತಂಪಾದ ವಾತಾವರಣ ಮತ್ತು ಮಳೆಯಿಂದಾಗಿ ಪಿಚ್‌ನಲ್ಲಿ ಬ್ಯಾಟಿಂಗ್ ಮಾಡುವುದು ಅಂದುಕೊಂಡಷ್ಟು ಸುಲಭವಲ್ಲ. ಆದ್ದರಿಂದ ಟಾಸ್ ಗೆದ್ದ ನಂತರ ಮೊದಲು ಬೌಲಿಂಗ್ ಮಾಡಲು ನಾಯಕ ಆದ್ಯತೆ ನೀಡುತ್ತಾರೆ. ವೇಗದ ಬೌಲರ್‌ಗಳ ಜೊತೆಗೆ ಸ್ಪಿನ್ನರ್‌ಗಳು ಮೈದಾನದಲ್ಲಿ ಪ್ರಾಬಲ್ಯ ಸಾಧಿಸುತ್ತಾರೆ. ರನ್ ಚೇಸ್ ಮಾಡುವ ತಂಡಗಳ ಗೆಲುವಿನ ಶೇಕಡಾವಾರು ಶೇಕಡಾ 60 ರಷ್ಟಿದೆ.

IND vs IRE: ಮೊದಲ ಪಂದ್ಯದಂತೆ ಎರಡನೇ ಪಂದ್ಯಕ್ಕೂ ಅಡ್ಡಿಯಾಗುತ್ತಾ ಮಳೆ? ಇಲ್ಲಿದೆ ಡಬ್ಲಿನ್ ಹವಾಮಾನ ವರದಿ

ಟೀಂ ಇಂಡಿಯಾದಲ್ಲಿ ಬದಲಾವಣೆ?

ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಅನ್ನು ಬದಲಾಯಿಸುವುದು ಕಷ್ಟ. ಏಕೆಂದರೆ ಆಯ್ಕೆಯಾದ ಆಟಗಾರರಿಗೆ ನಿರೀಕ್ಷಿತ ಪ್ರದರ್ಶನ ನೀಡುವ ಅವಕಾಶ ಸಿಕ್ಕಿಲ್ಲ. ಆದ್ದರಿಂದ ಜಸ್ಪ್ರೀತ್ ಬುಮ್ರಾ ಅದೇ ಆಡುವ ಹನ್ನೊಂದರ ಬಳಗದೊಂದಿಗೆ ಫೀಲ್ಡಿಂಗ್ ಮಾಡಲಿದ್ದಾರೆ. ಮೂವರು ವೇಗದ ಬೌಲರ್‌ಗಳು ಮತ್ತು ಇಬ್ಬರು ಸ್ಪಿನ್ನರ್‌ಗಳೊಂದಿಗೆ ತಂಡ ಆಡಲಿದೆ. ಇನ್ನು ಮೊದಲ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಯಶಸ್ವಿ ಜೈಸ್ವಾಲ್ ಹಾಗೂ ರುತುರಾಜ್ ಗಾಯಕ್ವಾಡ್ ತಂಡಕ್ಕೆ ವೇಗದ ಆರಂಭ ನೀಡಲು ಸಾಧ್ಯವಾಗದಿದ್ದರೂ, ಆರಂಭದಲ್ಲೇ ವಿಕೆಟ್ ಕಳೆದುಕೊಳ್ಳದೆ ತಂಡಕ್ಕೆ 47 ರನ್​ಗಳ ಜೊತೆಯಾಟ ತಂದುಕೊಟ್ಟರು ಹೀಗಾಗಿ ಆರಂಭಿಕರ ಬದಲಾವಣೆಯಾಗುವುದು ಅನುಮಾನ.

ಹಾಗೆಯೇ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ತಿಲಕ್ ವರ್ಮಾ, ಐರ್ಲೆಂಡ್ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಕೇವಲ ಒಂದು ಎಸೆತವನ್ನು ಎದುರಿಸಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಆದರೆ ತಿಲಕ್​ ಅವರ ಹಿಂದಿನ ಪ್ರದರ್ಶನದ ಆಧಾರದ ಮೇಲೆ ಅವರಿಗೆ ಮತ್ತೊಂದು ಅವಕಾಶ ಸಿಗುವುದು ಖಚಿತವಾಗಿದೆ. ಇನ್ನುಳಿದಂತೆ ತಂಡದ ಇತರ ಆಟಗಾರರಿಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಗದಿರುವ ಕಾರಣ ಅವರನ್ನು ಈ ಪಂದ್ಯದಲ್ಲೂ ಕಣಕ್ಕಿಳಿಸುವುದು ಪಕ್ಕಾ.

ಭಾರತ ಸಂಭಾವ್ಯ ತಂಡ

ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಜಸ್ಪ್ರೀತ್ ಬುಮ್ರಾ (ನಾಯಕ), ರವಿ ಬಿಷ್ಣೋಯ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ