ಟಿ20 ವಿಶ್ವಕಪ್‌ನಲ್ಲಿ (T20 World Cup 2024) ಮೊದಲ ಪಂದ್ಯವನ್ನಾಡಲು ಟೀಂ ಇಂಡಿಯಾ ಸಜ್ಜಾಗಿದೆ. ಭಾರತ ಮತ್ತು ಐರ್ಲೆಂಡ್ (India vs Ireland) ನಡುವಿನ ಪಂದ್ಯ ಬುಧವಾರ ನ್ಯೂಯಾರ್ಕ್‌ನ ನಸ್ಸೌ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈಗಾಗಲೇ ಈ ಪಂದ್ಯದ ಟಾಸ್ ಮುಗಿದಿದ್ದು, ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಐರ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಟಾಸ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಹೊರಬಿದ್ದಿದ್ದು, ಎರಡೂ ತಂಡಗಳಲ್ಲೂ ಸಾಕಷ್ಟು ಬದಲಾವಣೆಗಳಾಗಿವೆ. ಅದರಂತೆ ಟೀಂ ಇಂಡಿಯಾದಲ್ಲಿ ಯಶಸ್ವಿ ಜೈಸ್ವಾಲ್ , ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್ ಮತ್ತು ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆದಿಲ್ಲ.
ಪ್ಲೇಯಿಂಗ್ 11 ಜೊತೆಗೆ ತಂಡದಲ್ಲಿ ಆರಂಭಿಕರೂ ಸಹ ಬದಲಾಗಿದ್ದಾರೆ. ವಾಸ್ತವವಾಗಿ ಈ ಮೊದಲು ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದರು. ಆದರೆ ಇಂದಿನ ಪಂದ್ಯದಲ್ಲಿ ನಾಯಕ ರೋಹಿತ್ ಜೊತೆ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಕೊಹ್ಲಿಯ ಬಡ್ತಿಯಿಂದಾಗಿ ಇತ್ತ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ಗೂ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಸಿಕ್ಕಿದ್ದು, ಈ ಹಿಂದೆ ಕೊಹ್ಲಿ ಬ್ಯಾಟ್ ಬೀಸುತ್ತಿದ್ದ ಮೂರನೇ ಕ್ರಮಾಂಕದಲ್ಲಿ ಪಂತ್ ಆಡಲಿದ್ದಾರೆ.
IND vs IRE T20 WC Live Score: ಐರ್ಲೆಂಡ್ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
WT20 2024.India Playing XI: R. Sharma (c), V. Kohli, R. Pant (wk), S. Yadav, S. Dube, H. Pandya, R. Jadeja, A. Patel, M. Siraj, J. Bumrah, A. Singh. https://t.co/Yam05lIxPl #T20WorldCup #INDvIRE
— BCCI (@BCCI) June 5, 2024
ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್, ಬೆಂಜಮಿನ್ ವೈಟ್.
WT20 2024. Ireland Playing XI: A. Balbirnie, P. Stirling (c), L. Tucker (wk), H. Tector, C. Campher, G. Dockrell, G. Delany, M. Adair, B. McCarthy, B. White, J. Little. https://t.co/Yam05lIxPl #T20WorldCup #INDvIRE
— BCCI (@BCCI) June 5, 2024
ಇನ್ನು ಉಭಯ ತಂಡಗಳ ನಡುವಿನ ಮುಖಾಮುಖಿ ವರದಿಯ ಬಗ್ಗೆ ಹೇಳುವುದಾದರೆ, ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾ ಯಾವಾಗಲೂ ಮೇಲುಗೈ ಸಾಧಿಸಿದೆ. ಭಾರತ ಮತ್ತು ಐರ್ಲೆಂಡ್ ನಡುವೆ ಇದುವರೆಗೆ 7 ಪಂದ್ಯಗಳು ನಡೆದಿವೆ. ಇದರಲ್ಲಿ ಟೀಂ ಇಂಡಿಯಾ ಪ್ರತಿ ಬಾರಿ ಗೆದ್ದಿದೆ. ಈ ಪಂದ್ಯದಲ್ಲಿ ಭಾರತ ತಂಡ ಯಾವ ರೀತಿ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:53 pm, Wed, 5 June 24