IND vs IRE: ಮುಖ್ಯ ಕೋಚ್ ಇಲ್ಲದೆ ಐರ್ಲೆಂಡ್ ಪ್ರವಾಸ ಮಾಡಲಿದೆ ಟೀಂ ಇಂಡಿಯಾ..!

IND vs IRE: ಮೂರು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ ಐರ್ಲೆಂಡ್ ಪ್ರವಾಸ ಮಾಡಲಿದೆ. ಈ ಪ್ರವಾಸಕ್ಕೆ ಈಗಾಗಲೇ ಟೀಂ ಇಂಡಿಯಾವನ್ನು ಆಯ್ಕೆ ಕೂಡ ಮಾಡಲಾಗಿದೆ. ಈ ಮೊದಲು ಈ ಯುವ ತಂಡದೊಂದಿಗೆ ಎನ್​ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ (VSS Laxman) ಮುಖ್ಯ ಕೋಚ್ ಆಗಿ ಐರ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಇದೀಗ ಲಕ್ಷ್ಮಣ್ ಈ ಪ್ರವಾಸದ ಭಾಗವಾಗಿಲ್ಲ ಎಂದು ವರದಿಯಾಗಿದೆ.

IND vs IRE: ಮುಖ್ಯ ಕೋಚ್ ಇಲ್ಲದೆ ಐರ್ಲೆಂಡ್ ಪ್ರವಾಸ ಮಾಡಲಿದೆ ಟೀಂ ಇಂಡಿಯಾ..!
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Aug 12, 2023 | 7:43 AM

ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯಲ್ಲಿ ನಿರತವಾಗಿರುವ ಟೀಂ ಇಂಡಿಯಾ (India vs West Indies) ಇನ್ನೇರಡು ಪಂದ್ಯಗಳನ್ನು ಆಡಿ ಮುಗಿಸುವುದರೊಂದಿಗೆ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ವಿದಾಯ ಹೇಳಲಿದೆ. ಆ ಬಳಿಕ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸವನ್ನು (India vs Ireland) ಮಾಡಲಿದೆ. ಈ ಪ್ರವಾಸಕ್ಕೆ ಈಗಾಗಲೇ ಟೀಂ ಇಂಡಿಯಾವನ್ನು (Team India) ಆಯ್ಕೆ ಮಾಡಲಾಗಿದ್ದು, ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾಗೆ (Jasprit Bumrah) ತಂಡದ ನಾಯಕತ್ವ ನೀಡಲಾಗಿದೆ. ಹಾಗೆಯೇ ಕೆಲವೇ ದಿನಗಳಲ್ಲಿ ಏಷ್ಯಾಕಪ್ (Asia Cup) ಹಾಗೂ ವಿಶ್ವಕಪ್ (World Cup) ನಡೆಯುವುದರಿಂದ ಈ ಪ್ರವಾಸದಿಂದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಈ ಮೊದಲು ಈ ಯುವ ತಂಡದೊಂದಿಗೆ ಎನ್​ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ (VSS Laxman) ಮುಖ್ಯ ಕೋಚ್ ಆಗಿ ಐರ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಇದೀಗ ಲಕ್ಷ್ಮಣ್ ಈ ಪ್ರವಾಸದ ಭಾಗವಾಗಿಲ್ಲ ಎಂದು ವರದಿಯಾಗಿದೆ.

ಕೆಲವೇ ದಿನಗಳಲ್ಲಿ ಪ್ರಮುಖ ಪಂದ್ಯಾವಳಿಗಳು ಆರಂಭವಾಗುವುದರಿಂದ ಟೀಂ ಇಂಡಿಯಾದ ಹಿರಿಯ ಆಟಗಾರರ ಜೊತೆಗೆ ಕೋಚಿಂಗ್ ಸಿಬ್ಬಂದಿಗೂ ಐರ್ಲೆಂಡ್ ಪ್ರವಾಸದಿಂದ ವಿಶ್ರಾಂತಿ ನೀಡಲಾಗುತ್ತಿದೆ. ಹೀಗಾಗಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬದಲಾಗಿ ವಿವಿಎಸ್ ಲಕ್ಷ್ಮಣ್ ಅವರನ್ನು ಹಂಗಾಮಿ ಕೋಚ್ ಆಗಿ ಈ ಸರಣಿಗೆ ಆಯ್ಕೆ ಮಾಡಲಾಗವುದು ಎಂದು ವರದಿಯಾಗಿತ್ತು. ಆದರೆ ಇದೀಗ ಕ್ರಿಕ್‌ಬಜ್ ವರದಿ ಮಾಡಿರುವ ಪ್ರಕಾರ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ಮತ್ತು ಮಾಜಿ ಅನುಭವಿ ಬ್ಯಾಟ್ಸ್‌ಮನ್ ಲಕ್ಷ್ಮಣ್ ಈ ಪ್ರವಾಸಕ್ಕೆ ಭಾರತ ತಂಡದೊಂದಿಗೆ ಹೋಗುವುದಿಲ್ಲ ಎಂದು ವರದಿಯಲ್ಲಿ ತಿಳಿಸಿದೆ.

IND vs WI: ಚಾಹಲ್, ಬುಮ್ರಾ ದಾಖಲೆ ಉಡೀಸ್; 3 ವಿಕೆಟ್ ಪಡೆದು ಇತಿಹಾಸ ಸೃಷ್ಟಿಸಿದ ಕುಲ್ದೀಪ್ ಯಾದವ್..!

ಲಕ್ಷ್ಮಣ್ ತಂಡದೊಂದಿಗೆ ಇರುವುದಿಲ್ಲ

ಕಳೆದ ವರ್ಷವೂ ಟೀಂ ಇಂಡಿಯಾ ಐರ್ಲೆಂಡ್ ಪ್ರವಾಸ ಕೈಗೊಂಡಾಗ ದ್ರಾವಿಡ್ ಸೇರಿದಂತೆ ಸಹಾಯಕ ಸಿಬ್ಬಂದಿಗೆ ವಿಶ್ರಾಂತಿ ನೀಡಲಾಗಿತ್ತು. ಆ ಸಮಯದಲ್ಲಿ ಲಕ್ಷ್ಮಣ್ ತಂಡದ ಜವಾಬ್ದಾರಿ ವಹಿಸಿಕೊಂಡಿದ್ದರು. ಈ ಬಾರಿಯೂ ಆರಂಭಿಕ ವರದಿಗಳಲ್ಲಿ ಅದೇ ರೀತಿಯ ಮಾತು ಕೇಳಿ ಬಂದಿತ್ತು. ಆದರೆ ಈಗ ಲಕ್ಷ್ಮಣ್ ತಂಡದೊಂದಿಗೆ ಇರುವುದಿಲ್ಲ ಎಂಬ ಸುದ್ದಿ ಹೊರಬಂದಿದೆ. ಅವರ ಜಾಗದಲ್ಲಿ ಇತರ ಎನ್‌ಸಿಎ ತರಬೇತುದಾರರಾದ ಸಿತಾಂಶು ಕೊಟಕ್ ಮತ್ತು ಸಾಯಿರಾಜ್ ಬಹುತುಲೆ ತಂಡದೊಂದಿಗೆ ಇರಲಿದ್ದಾರೆ ಎಂದು ವರದಿಯಾಗಿದೆ.

ಬುಮ್ರಾ ವಾಪಸಾತಿ ಮೇಲೆ ಕಣ್ಣು

ಭಾರತ ಮತ್ತು ಐರ್ಲೆಂಡ್ ನಡುವೆ ಮೂರು ಪಂದ್ಯಗಳ ಟಿ20 ಸರಣಿಯು ಆಗಸ್ಟ್ 18 ರಿಂದ ಆರಂಭವಾಗಲಿದೆ. ಮೇಲೆ ಹೇಳಿದಂತೆ ಈ ಸರಣಿಯಲ್ಲಿ ಹೆಚ್ಚಿನ ಯುವ ಆಟಗಾರರಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ಈ ಸರಣಿಯಲ್ಲಿ ಭಾರತಕ್ಕೆ ಪ್ರಮುಖ ವಿಷಯವೆಂದರೆ ಜಸ್ಪ್ರೀತ್ ಬುಮ್ರಾ ವಾಪಸ್ಸಾತಿ. ಭಾರತದ ಸ್ಟಾರ್ ವೇಗದ ಬೌಲರ್ ಒಂದು ವರ್ಷದ ನಂತರ ಈ ಸರಣಿಯಿಂದ ಕ್ರಿಕೆಟ್ ಮೈದಾನಕ್ಕೆ ಮರಳುತ್ತಿರುವುದು ಮಾತ್ರವಲ್ಲದೆ ತಂಡದ ನಾಯಕ ಕೂಡ ಆಗಿದ್ದಾರೆ. ಅವರ ನಾಯಕತ್ವಕ್ಕಿಂತ ಹೆಚ್ಚಾಗಿ, ಎಲ್ಲಾ ಕಣ್ಣುಗಳು ಅವರ ಫಿಟ್ನೆಸ್ ಮತ್ತು ಬೌಲಿಂಗ್ ಮೇಲೆ ಇರುತ್ತದೆ. ಏಕೆಂದರೆ ಏಷ್ಯಾಕಪ್ ಮತ್ತು ನಂತರ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದ ಯಶಸ್ಸು ಹೆಚ್ಚಾಗಿ ಬುಮ್ರಾ ಅವರ ಫಿಟ್ನೆಸ್ ಮತ್ತು ಫಾರ್ಮ್ ಅನ್ನು ಅವಲಂಬಿಸಿರುತ್ತದೆ.

ಹೊಸ ಆಟಗಾರರಿಗೆ ಅವಕಾಶ

ಈ ಪ್ರವಾಸಕ್ಕಾಗಿ ಟೀಂ ಇಂಡಿಯಾ ಆಗಸ್ಟ್ 15 ರಂದು ಭಾರತದಿಂದ ಹೊರಟು ಡಬ್ಲಿನ್ ತಲುಪಲಿದೆ. ಮತ್ತು ಕೆಲವು ಆಟಗಾರರು ಫ್ಲೋರಿಡಾದಿಂದ ಇಲ್ಲಿಗೆ ತಲುಪುತ್ತಾರೆ. ಸರಣಿಯ ಎಲ್ಲಾ ಪಂದ್ಯಗಳು ಮಲಾಹಿಡೆಯಲ್ಲಿ ನಡೆಯಲಿವೆ. ಈ ಪಂದ್ಯಗಳು ಆಗಸ್ಟ್ 18, 20 ಮತ್ತು 23 ರಂದು ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 7.30ಕ್ಕೆ ಆರಂಭವಾಗಲಿದೆ. ಈ ಸರಣಿಯೊಂದಿಗೆ ರಿಂಕು ಸಿಂಗ್ ಮತ್ತು ಜಿತೇಶ್ ಶರ್ಮಾ ಕೂಡ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಆಡುವ ಅವಕಾಶವನ್ನು ಪಡೆಯುವ ನಿರೀಕ್ಷೆಯಿದೆ.

ಐರ್ಲೆಂಡ್ ಸರಣಿಗೆ ಭಾರತ ತಂಡ

ಜಸ್ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ