IND vs NAM Playing XI: ಟಾಸ್ ಗೆದ್ದ ನಮೀಬಿಯಾ; ಭಾರತ ತಂಡದಲ್ಲಿ 2 ಬದಲಾವಣೆ

ICC T20 World Cup India vs Namibia in kannada Playing XI: 2026ರ ಟಿ20 ವಿಶ್ವಕಪ್‌ನಲ್ಲಿ ಹಾಲಿ ಚಾಂಪಿಯನ್ ಭಾರತ, ನಮೀಬಿಯಾವನ್ನು ಎದುರಿಸುತ್ತಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುವ ಈ ಪಂದ್ಯ ಭಾರತಕ್ಕೆ ಸೂಪರ್ 8 ಸ್ಥಾನ ಖಚಿತಪಡಿಸಿಕೊಳ್ಳಲು ನಿರ್ಣಾಯಕವಾಗಿದೆ. ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ಕೆ ಮಾಡಿದೆ. ಭಾರತ ತಂಡದಲ್ಲಿ ಸಂಜು ಸ್ಯಾಮ್ಸನ್ ಮತ್ತು ಜಸ್ಪ್ರೀತ್ ಬುಮ್ರಾ ಸ್ಥಾನ ಪಡೆದಿದ್ದಾರೆ. ಈ ಹಿಂದಿನ ಮುಖಾಮುಖಿಯಲ್ಲಿ ಭಾರತವೇ ಗೆದ್ದಿತ್ತು.

IND vs NAM Playing XI: ಟಾಸ್ ಗೆದ್ದ ನಮೀಬಿಯಾ; ಭಾರತ ತಂಡದಲ್ಲಿ 2 ಬದಲಾವಣೆ
Ind Vs Nam Toss

Updated on: Feb 12, 2026 | 7:03 PM

2026 ರ ಟಿ20 ವಿಶ್ವಕಪ್​ನ (T20 World Cup 2026) 18 ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಟೀಂ ಇಂಡಿಯಾ ಗ್ರೂಪ್ ಎ ನಲ್ಲಿ ನಮೀಬಿಯಾ (India vs Namibia) ತಂಡವವನ್ನು ಎದುರಿಸುತ್ತಿದೆ. ಈ ಟೂರ್ನಿಯಲ್ಲಿ ಉಭಯ ತಂಡಗಳ ನಡುವಿನ ಎರಡನೇ ಪಂದ್ಯ ಇದಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಟೀಂ ಇಂಡಿಯಾ ಯುಎಸ್ಎ ತಂಡವನ್ನು ಸೋಲಿಸುವ ಮೂಲಕ ತನ್ನ ಅಭಿಯಾನವನ್ನು ಪ್ರಾರಂಭಿಸಿದರೆ, ತನ್ನ ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಸೋತಿರುವ ನಮೀಬಿಯಾ ಬಲಿಷ್ಠ ಟೀಂ ಇಂಡಿಯಾಗೆ ಸವಾಲು ನೀಡಲು ಸಜ್ಜಾಗಿದೆ. ಈ ಪಂದ್ಯದಲ್ಲಿ ಭಾರತ, ನಮೀಬಿಯಾವನ್ನು ಸೋಲಿಸಿದರೆ, ಸೂಪರ್ 8 ಸುತ್ತಿನಲ್ಲಿ ಅದರ ಸ್ಥಾನ ಖಚಿತವಾಗಲಿದೆ. ಹೀಗಾಗಿ ಸೂರ್ಯಕುಮಾರ್ ಪಡೆ ಯಾವುದೇ ಒತ್ತಡವಿಲ್ಲದೆ ಮುಂದಿನ ಸುತ್ತಿಗೆ ಅರ್ಹತೆ ಪಡೆಯಲು ನೋಡುತ್ತಿದೆ.

ಟಾಸ್ ಗೆದ್ದ ನಮೀಬಿಯಾ

ಟಾಸ್ ಗೆದ್ದ ನಮೀಬಿಯಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಎರಡೂ ತಂಡಗಳಲ್ಲಿ ತಲಾ ಎರಡೆರಡು ಬದಲಾವಣೆಗಳನ್ನು ಮಾಡಲಾಗಿದೆ. ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದ್ದು, ಅನಾರೋಗ್ಯದಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ ಇನ್ನು ಗುಣಮುಖರಾಗಿಲ್ಲ ಆದ್ದರಿಂದ ಅವರ ಸ್ಥಾನದಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲಾಗಿದೆ. ಹಾಗೆಯೇ ಮೊಹಮ್ಮದ್ ಸಿರಾಜ್ ಬದಲಿಗೆ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ ಎಂದು ಸೂರ್ಯಕುಮಾರ್ ಮಾಹಿತಿ ನೀಡಿದರು.

ಮುಖಾಮುಖಿ ದಾಖಲೆ

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಮತ್ತು ನಮೀಬಿಯಾ ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು, 2021 ರ ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದಾಗ ಟೀಂ ಇಂಡಿಯಾ, ನಮೀಬಿಯಾವನ್ನು ಸೋಲಿಸಿತ್ತು. ದುಬೈನಲ್ಲಿ ನಡೆದ ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ 9 ವಿಕೆಟ್​ಗಳ ಏಕಪಕ್ಷೀಯ ಗೆಲುವು ಸಾಧಿಸಿತ್ತು.

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಸರ್ ಪಟೇಲ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ.

ನಮೀಬಿಯಾ ತಂಡ: ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಲಾರೆಂಟ್ ಸ್ಟೀನ್‌ಲ್ಯಾಂಪ್, ಜಾನ್ ಫ್ರಿಲಿಂಕ್, ಜಾನ್ ನಿಕೋಲ್ ಲಾಫ್ಟಿ-ಈಥನ್, ಜೆಜೆ ಸ್ಮಿಟ್, ಜೇನ್ ಗ್ರೀನ್ (ವಿಕೆಟ್ ಕೀಪರ್), ರೂಬೆನ್ ಟ್ರಂಪೆಲ್‌ಮನ್, ಮಲನ್ ಕ್ರುಗರ್, ಬರ್ನಾರ್ಡ್ ಸ್ಕೋಲ್ಟ್ಜ್, ಬೆನ್ ಶಿಕೊಂಗೊ ಮತ್ತು ಮ್ಯಾಕ್ಸ್ ಹಿಂಗೋ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:44 pm, Thu, 12 February 26