ಏಕದಿನದಲ್ಲಿ 4284 ದಿನಗಳ ನಂತರ ವಿಕೆಟ್ ಪಡೆದ ಹಿಟ್‌ಮ್ಯಾನ್ ರೋಹಿತ್..! ವಿಡಿಯೋ ನೋಡಿ

Rohit Sharma, ICC World Cup 2023: ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ನೆದರ್ಲೆಂಡ್ಸ್ ತಂಡದ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರ ವಿಕೆಟ್ ಪಡೆದರೆ, ರೋಹಿತ್ ಶರ್ಮಾ ಅರ್ಧಶತಕ ಸಿಡಿಸಿದ್ದ ತೇಜ ನಿಡಮನೂರು ಅವರ ವಿಕೆಟ್ ಪಡೆಯುವ ಮೂಲಕ ನೆದರ್ಲೆಂಡ್ಸ್ ಇನ್ನಿಂಗ್ಸ್​ಗೆ ವಿದಾಯ ಹಾಡಿದರು.

ಏಕದಿನದಲ್ಲಿ 4284 ದಿನಗಳ ನಂತರ ವಿಕೆಟ್ ಪಡೆದ ಹಿಟ್‌ಮ್ಯಾನ್ ರೋಹಿತ್..! ವಿಡಿಯೋ ನೋಡಿ
ರೋಹಿತ್ ಶರ್ಮಾ
Follow us
ಪೃಥ್ವಿಶಂಕರ
|

Updated on:Nov 13, 2023 | 7:14 AM

ವಿಶ್ವಕಪ್-2023 ರ (ICC ODI World Cup 2023) ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡವನ್ನು 160 ರನ್‌ಗಳಿಂದ ಸೋಲಿಸಿದ ಟೀಂ ಇಂಡಿಯಾ (India Vs Netherlands) ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಇದು ಈ ಬಾರಿಯ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಸತತ 9ನೇ ಜಯವಾಗಿದ್ದು, 18 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನ ಕೂಡ ಪಡೆದುಕೊಂಡಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 410 ರನ್ ಗಳಿಸಿತು. ಇದಕ್ಕುತ್ತರವಾಗಿ ನೆದರ್ಲೆಂಡ್ಸ್ ತಂಡ ಕೇವಲ 250 ರನ್ ಗಳಿಸಲಷ್ಟೇ ಶಕ್ತವಾಯಿತು. ನಾಯಕ ರೋಹಿತ್ ಶರ್ಮಾ Rohit Sharma ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಸೇರಿದಂತೆ ಒಟ್ಟು 9 ಬೌಲರ್​ಗಳನ್ನು ಬಳಸಿದ್ದು, ಈ ಪಂದ್ಯದ ವಿಶೇಷವಾಗಿತ್ತು. ಅದರಲ್ಲೂ ನಾಯಕ ಹಾಗೂ ಮಾಜಿ ನಾಯಕ ಒಂದೇ ಪಂದ್ಯದಲ್ಲಿ ತಲಾ ಒಂದೊಂದು ವಿಕೆಟ್ ಪಡೆದಿದ್ದು, ಅಭಿಮಾನಿಗಳು ಹುಚ್ಚೆದು ಕುಣಿಯುವಂತೆ ಮಾಡಿದೆ.

4284 ದಿನಗಳ ನಂತರ ವಿಕೆಟ್

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ನೆದರ್ಲೆಂಡ್ಸ್ ತಂಡದ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರ ವಿಕೆಟ್ ಪಡೆದರೆ, ರೋಹಿತ್ ಶರ್ಮಾ ಅರ್ಧಶತಕ ಸಿಡಿಸಿದ್ದ ತೇಜ ನಿಡಮನೂರು ಅವರ ವಿಕೆಟ್ ಪಡೆಯುವ ಮೂಲಕ ನೆದರ್ಲೆಂಡ್ಸ್ ಇನ್ನಿಂಗ್ಸ್​ಗೆ ವಿದಾಯ ಹಾಡಿದರು. ಇದರೊಂದಿಗೆ ಏಕದಿನದಲ್ಲಿ 4284 ದಿನಗಳ ನಂತರ ರೋಹಿತ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ರೋಹಿತ್ ಶರ್ಮಾ ಏಕದಿನದಲ್ಲಿ ಕೊನೆಯ ಬಾರಿಗೆ 2012 ರಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ ವಿಕೆಟ್ ಪಡೆದಿದ್ದರು.

ವಿಶ್ವಕಪ್​ನಲ್ಲಿ ಮೊದಲ ವಿಕೆಟ್ ಪಡೆದ ಕೊಹ್ಲಿ! ಹುಚ್ಚೆದು ಕುಣಿದ ಫ್ಯಾನ್ಸ್, ಅನುಷ್ಕಾ; ವಿಡಿಯೋ ನೋಡಿ

ಆರಂಭದಲ್ಲಿ ಅರೆಕಾಲಿಕ ಸ್ಪಿನ್ನರ್

ವಾಸ್ತವವಾಗಿ ರೋಹಿತ್ ಶರ್ಮಾ ತಮ್ಮ ವೃತ್ತಿಜೀವನದ ಆರಂಭದಲ್ಲಿ ಆಫ್ ಸ್ಪಿನ್ನರ್ ಆಗಿದ್ದರು. ಆದರೆ ಕೋಚ್ ಸಲಹೆ ಮೇರೆಗೆ ಬ್ಯಾಟಿಂಗ್​ನತ್ತ ಹೆಚ್ಚು ಗಮನ ಹರಿಸತೊಡಗಿದರು. ರೋಹಿತ್​ ಟೀಂ ಇಂಡಿಯಾಕ್ಕೆ ಕಾಲಿಟ್ಟ ಆರಂಭದ ದಿನಗಳಲ್ಲಿ ಅರೆಕಾಲಿಕ ಆಫ್ ಸ್ಪಿನ್ನರ್ ಆಗಿ ಕಾಣಿಸಿಕೊಂಡಿದ್ದು ನಿಜ. ಅವರು ಏಕದಿನದಲ್ಲಿ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರಂತಹ ಬ್ಯಾಟ್ಸ್‌ಮನ್‌ಗಳ ವಿಕೆಟ್‌ಗಳನ್ನು ಸಹ ಕಬಳಿಸಿದ್ದಾರೆ. ಐಪಿಎಲ್‌ನಲ್ಲೂ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಆದರೆ ಬೆರಳಿನ ಗಾಯದ ನಂತರ ರೋಹಿತ್ ಬೌಲಿಂಗ್ ತ್ಯಜಿಸಿದರು. ಆದರೆ ರೋಹಿತ್ ಅಂತಿಮವಾಗಿ 2023 ರ ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡುವುದನ್ನು ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ.

ಕೇವಲ ನಾಲ್ಕು ಎಸೆತಗಳಲ್ಲಿ ವಿಕೆಟ್

ನೆದರ್ಲೆಂಡ್ಸ್ ಇನ್ನಿಂಗ್ಸ್‌ನ 48ನೇ ಓವರ್ ಬೌಲ್ ಮಾಡಿದ ರೋಹಿತ್, ಮೊದಲ ಮೂರು ಎಸೆತಗಳಲ್ಲಿ ಒಂದು ರನ್ ನೀಡಿದರು. ರೋಹಿತ್ ಅವರ ನಾಲ್ಕನೇ ಎಸೆತವನ್ನು ತೇಜ ನಿಡಮನೂರು ಸಿಕ್ಸರ್ ಬಾರಿಸಿದರು. ಆದರೆ ಮುಂದಿನ ಎಸೆತದಲ್ಲಿ ರೋಹಿತ್ ತೇಜ ಅವರ ವಿಕೆಟ್ ಪಡೆದರು. ರೋಹಿತ್ ಎಸೆದ ಐದನೇ ಎಸೆತವನ್ನು ತೇಜ ಸಿಕ್ಸರ್​ಗಟ್ಟಲು ಯತ್ನಿಸಿದರು. ಆದರೆ ನಿಧಾನಗತಿಯ ಚೆಂಡು ಅವರ ಬ್ಯಾಟ್‌ನ ಕೆಳಭಾಗಕ್ಕೆ ಬಡಿದು ಮೊಹಮ್ಮದ್ ಶಮಿ ಕೈ ಸೇರಿತು.

9 ಬೌಲರ್‌ಗಳ ಬಳಕೆ

ಈ ಪಂದ್ಯದಲ್ಲಿ, ಭಾರತ ತಂಡವು ಕೇವಲ 5 ಪ್ರಮುಖ ಬೌಲರ್‌ಗಳೊಂದಿಗೆ ಕಣಕ್ಕಿಳಿದಿತ್ತು. ಆದರೆ ನಾಯಕ ರೋಹಿತ್ ಶರ್ಮಾ 9 ಬೌಲರ್‌ಗಳನ್ನು ಬಳಕೆ ಮಾಡಿದರು. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು. ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ಕೂಡ ತಲಾ ಒಂದೊಂದು ವಿಕೆಟ್ ಪಡೆದರು. ಆದರೆ ಮೊಹಮ್ಮದ್ ಶಮಿ, ಶುಭ್​ಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ಯಾವುದೇ ವಿಕೆಟ್ ಪಡೆಯಲಿಲ್ಲ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:11 am, Mon, 13 November 23

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ