India vs Netherlands Live Streaming: ಭಾರತ- ನೆದರ್ಲೆಂಡ್ಸ್ ಮುಖಾಮುಖಿ; ಪಂದ್ಯ ಆರಂಭ ಎಷ್ಟು ಗಂಟೆಗೆ?

| Updated By: ಪೃಥ್ವಿಶಂಕರ

Updated on: Oct 26, 2022 | 3:57 PM

India vs Netherlands Live Streaming: ಇನ್ನು ಪಾಯಿಂಟ್ ಪಟ್ಟಿಯಲ್ಲಿ ಒಂದು ಗೆಲುವಿನೊಂದಿಗೆ 2ನೇ ಸ್ಥಾನದಲ್ಲಿರುವ ಟೀಂ ಇಂಡಿಯಾ ನೆದರ್ಲೆಂಡ್ಸ್ ವಿರುದ್ಧ ಗೆಲುವು ಸಾಧಿಸಿದರೆ 2ನೇ ಗುಂಪಿನಲ್ಲಿ ಮೊದಲನೇ ಸ್ಥಾನಕ್ಕೇರುವ ಅವಕಾಶ ಹೊಂದಿದೆ.

India vs Netherlands Live Streaming: ಭಾರತ- ನೆದರ್ಲೆಂಡ್ಸ್ ಮುಖಾಮುಖಿ; ಪಂದ್ಯ ಆರಂಭ ಎಷ್ಟು ಗಂಟೆಗೆ?
ಟೀಂ ಇಂಡಿಯಾ
Follow us on

ಟಿ20 ವಿಶ್ವಕಪ್​ನಲ್ಲಿ (T20 World Cup 2022) ಶುಭಾರಂಭ ಮಾಡಿರುವ ಟೀಂ ಇಂಡಿಯಾಕ್ಕೆ (Team India) ಮುಂದಿನ ಎದುರಾಳಿ ನೆದರ್ಲೆಂಡ್ಸ್. ಅರ್ಹತಾ ಸುತ್ತಿನಲ್ಲಿ ಪ್ರಬಲ ಪ್ರದರ್ಶನ ನೀಡಿ ಸೂಪರ್ 12 ಸುತ್ತಿಗೆ ಎಂಟ್ರಿಕೊಟ್ಟಿದ ನೆದರ್ಲೆಂಡ್ಸ್ (Netherlands) ತಂಡ ತನ್ನ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ವೀರಾವೇಶದ ಸೋಲುಂಡಿತ್ತು. ಹೀಗಾಗಿ ಕ್ರಿಕೆಟ್ ಶಿಶುಗಳನ್ನು ರೋಹಿತ್ ಪಡೆ ಕಡೆಗಣಿಸುವಂತಿಲ್ಲ. ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಉಭಯ ತಂಡಗಳು ಇದೇ ಮೊದಲನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಹೀಗಾಗಿ ಎರಡು ತಂಡಗಳ ಆಟಗಾರರಿಗೆ ಪರಸ್ಪರ ಆಡಿದ ಅನುಭವವಿಲ್ಲ. ಹಾಗೆಯೇ ಈ ಪಂದ್ಯ ಟಿ20 ವಿಶ್ವಕಪ್‌ನಲ್ಲಿ ಈ ಎರಡು ತಂಡಗಳ ನಡುವಿನ ಎರಡನೇ ಪಂದ್ಯವಾಗಿದೆ. ಇದಕ್ಕೂ ಮೊದಲು, ಟೀಂ ಇಂಡಿಯಾ ಪಾಕ್ ತಂಡವನ್ನು ಎದುರಿಸಿದ್ದರೆ, ನೆದರ್ಲೆಂಡ್ಸ್ ತಂಡ ಬಾಂಗ್ಲಾದೇಶವನ್ನು ಎದುರಿಸಿತ್ತು.

ಇನ್ನು ಪಾಯಿಂಟ್ ಪಟ್ಟಿಯಲ್ಲಿ ಒಂದು ಗೆಲುವಿನೊಂದಿಗೆ 2ನೇ ಸ್ಥಾನದಲ್ಲಿರುವ ಟೀಂ ಇಂಡಿಯಾ ನೆದರ್ಲೆಂಡ್ಸ್ ವಿರುದ್ಧ ಗೆಲುವು ಸಾಧಿಸಿದರೆ 2ನೇ ಗುಂಪಿನಲ್ಲಿ ಮೊದಲನೇ ಸ್ಥಾನಕ್ಕೇರುವ ಅವಕಾಶ ಹೊಂದಿದೆ. ಆಡಿರುವ ಒಂದು ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಸೋಲುಂಡ ನೆದರ್ಲೆಂಡ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ರೋಹಿತ್ ಪಡೆಯ ವಿರುದ್ಧ ಗೆಲುವು ಸಾಧಿಸುವುದರೊಂದಿಗೆ ಪಟ್ಟಿಯಲ್ಲಿ ಸುಧಾರಣೆ ತರಲು ಪ್ರಯತ್ನಿಸಲಿದೆ. ಹಾಗೆಯೇ 2ನೇ ಗುಂಪಿನಲ್ಲಿ ಮೊದಲ ಸ್ಥಾನದಲ್ಲಿರುವ ಬಾಂಗ್ಲಾ ಕೂಡ ಒಂದೇ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಆದರೆ ಅದರ ನೆಟ್ ರನ್​ ರೇಟ್ ಟೀಂ ಇಂಡಿಯಾಕ್ಕಿಂತ ಉತ್ತಮವಾಗಿರುವುದರಿಂದ ಮೊದಲ ಸ್ಥಾನ ಪಡೆದುಕೊಂಡಿದೆ. ಹೀಗಾಗಿ ಈ ಪಂದ್ಯದಲ್ಲಿ ರೋಹಿತ್ ಪಡೆ ಗೆದ್ದರೆ ಮೊದಲ ಸ್ಥಾನಕ್ಕೇರುವುದು ಖಚಿತ.

ಇದನ್ನೂ ಓದಿ: T20 World Cup 2022: ಐರ್ಲೆಂಡ್ ಎದುರು 5 ರನ್​ಗಳಿಂದ ಸೋತ ಬಲಿಷ್ಠ ಇಂಗ್ಲೆಂಡ್..!

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ

ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯವು ಅಕ್ಟೋಬರ್ 27 ಗುರುವಾರ ನಡೆಯಲಿದೆ.

ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?

ಮೆಲ್ಬೋರ್ನ್‌ನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯ ನಡೆಯಲಿದೆ.

ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯ ಯಾವಾಗ ಆರಂಭವಾಗುತ್ತದೆ?

ಭಾರತ ಮತ್ತು ನೆದರ್ಲೆಂಡ್ ನಡುವಿನ ಪಂದ್ಯ ಮಧ್ಯಾಹ್ನ 12:30ಕ್ಕೆ ಆರಂಭವಾಗಲಿದೆ. ಅಂದರೆ ಮಧ್ಯಾಹ್ನ 12 ಗಂಟೆಗೆ ಟಾಸ್ ನಡೆಯಲಿದೆ.

ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್​ನಲ್ಲಿ?

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯದ ನೇರ ಪ್ರಸಾರವಾಗಲಿದೆ.

ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ನೆದರ್ಲೆಂಡ್ ನಡುವಿನ ಪಂದ್ಯದ ನೇರ ಪ್ರಸಾರವು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಇರುತ್ತದೆ. ಹಾಗೆಯೇ TV9Kannada.com ನಲ್ಲಿ ಈ ಪಂದ್ಯದ ಲೈವ್ ನವೀಕರಣಗಳನ್ನು ಸಹ ಓದಬಹುದು.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ