IND Vs NED Probable Playing XI: ಗೆದ್ದರೆ ಸೆಮೀಸ್ ಹಾದಿ ಸುಗಮ; ತಂಡದಲ್ಲಿ ಬದಲಾವಣೆ ಮಾಡುತ್ತಾ ಭಾರತ?

IND Vs NED Probable Playing XI: ಈ ಪಂದ್ಯದಲ್ಲಿ ಏಕಪಕ್ಷೀಯ ಗೆಲುವು ಸಾಧಿಸಲು ಟೀಂ ಇಂಡಿಯಾ ಪ್ರಯತ್ನಿಸಲಿದ್ದು, ಮುಂಬರುವ ಪಂದ್ಯಗಳಿಗೆ ತನ್ನ ಹಾದಿಯನ್ನು ಸುಲಭವಾಗಿಸಿಕೊಳ್ಳಲು ಪ್ರಯತ್ನಿಸಲಿದೆ.

IND Vs NED Probable Playing XI: ಗೆದ್ದರೆ ಸೆಮೀಸ್ ಹಾದಿ ಸುಗಮ; ತಂಡದಲ್ಲಿ ಬದಲಾವಣೆ ಮಾಡುತ್ತಾ ಭಾರತ?
ಟೀಂ ಇಂಡಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on:Oct 26, 2022 | 5:57 PM

ಟಿ20 ವಿಶ್ವಕಪ್​ನ (T20 World Cup) ಮುಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ನೆದರ್ಲೆಂಡ್ಸ್ (India Vs Netherlands) ತಂಡವನ್ನು ಎದುರಿಸುತ್ತಿದೆ. ಈ ಮೊದಲು ನಡೆದ ರೋಚಕ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ರೋಹಿತ್ ಪಡೆ ಚುಟುಕು ಸಮರಕ್ಕೆ ಎಂಟ್ರಿಕೊಟ್ಟಿತ್ತು. ಹೀಗಾಗಿ 2ನೇ ಪಂದ್ಯವನ್ನು ಗೆಲ್ಲುವ ಮೂಲಕ ಸೆಮಿಫೈನಲ್ ಹಾದಿಯನ್ನು ಇನ್ನಷ್ಟು ಸುಗಮಗೊಳಿಸಿವುದು ಟೀಂ ಇಂಡಿಯಾದ ಉದ್ದೇಶವಾಗಿದೆ. ನೆದರ್ಲೆಂಡ್ಸ್ ವಿರುದ್ಧ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ (Sydney Cricket Ground) ಕಣಕ್ಕಿಳಿಯಲ್ಲಿರುವ ಟೀಂ ಇಂಡಿಯಾಕ್ಕೆ ಈ ಪಂದ್ಯ ಸುಲಭದ ತುತ್ತಲ್ಲ. ಏಕೆಂದರೆ ಈ ಬಾರಿಯ ವಿಶ್ವಕಪ್‌ನಲ್ಲಿ ಇದುವರೆಗೆ ಹಲವು ಅಚ್ಚರಿಯ ಪಲಿತಾಂಶಗಳು ಹೊರಬಿದ್ದಿರುವುದರಿಂದ ರೋಹಿತ್ ಪಡೆ ಕ್ರಿಕೆಟ್​ ಶಿಶುಗಳನ್ನು ಲಘುವಾಗಿ ಪರಿಗಣಿಸುವ ತಪ್ಪನ್ನು ಮಾಡಬಾರದು.

ಈ ಪಂದ್ಯದಲ್ಲಿ ಏಕಪಕ್ಷೀಯ ಗೆಲುವು ಸಾಧಿಸಲು ಟೀಂ ಇಂಡಿಯಾ ಪ್ರಯತ್ನಿಸಲಿದ್ದು, ಮುಂಬರುವ ಪಂದ್ಯಗಳಿಗೆ ತನ್ನ ಹಾದಿಯನ್ನು ಸುಲಭವಾಗಿಸಿಕೊಳ್ಳಲು ಪ್ರಯತ್ನಿಸಲಿದೆ. ಮತ್ತೊಂದೆಡೆ, ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶದೆದುರು ಸೋತಿರುವ ನೆದರ್ಲೆಂಡ್ಸ್ ತಂಡವು ಸಹ ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸಲಿದೆ.

ಇದನ್ನೂ ಓದಿ: ICC rankings: ಪಾಕ್ ವಿರುದ್ಧ ಅಬ್ಬರಿಸಿದ ಕಿಂಗ್ ಕೊಹ್ಲಿಗೆ ರ‍್ಯಾಂಕಿಂಗ್​ನಲ್ಲೂ ಮುಂಬಡ್ತಿ! ಟಾಪ್ 9ರಲ್ಲಿ ವಿರಾಟ್

ಟೀಂ ಇಂಡಿಯಾದಲ್ಲಿ ಬದಲಾವಣೆಯಾಗಲಿದೆಯೇ?

ಈಗ ಪ್ರಶ್ನೆ ಏನೆಂದರೆ, ಟೀಂ ಇಂಡಿಯಾ ನೆದರ್ಲೆಂಡ್ಸ್ ವಿರುದ್ಧದ ಪಂದ್ಯಕ್ಕೆ ತನ್ನ ಆಡುವ 11 ರಲ್ಲಿ ಯಾವುದಾದರೂ ಬದಲಾವಣೆಗಳನ್ನು ಮಾಡುತ್ತದೆಯೇ? ಎಂಬುದಾಗಿದೆ. ಉಳಿದ ತಂಡಗಳಿಗೆ ಹೊಲಿಸಿದರೆ ನೆದರ್ಲೆಂಡ್ಸ್ ತಂಡ ಅಷ್ಟು ಬಲಿಷ್ಠವಲ್ಲ. ಹೀಗಿರುವಾಗ ಈ ಪಂದ್ಯದಲ್ಲಿ ಟೀಂ ಇಂಡಿಯಾ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ಬೆಂಚ್ ಮೇಲೆ ಕುಳಿತ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಆದರೆ ಈ ಎಲ್ಲಾ ಊಹಾಪೋಹಗಳಿಗು ತೆರೆ ಎಳೆದಿರುವ ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ, ಟೀಂ ಇಂಡಿಯಾ ಭಾನುವಾರ ಪಾಕಿಸ್ತಾನದ ವಿರುದ್ಧ ಆಡಿದ ಅದೇ ತಂಡದೊಂದಿಗೆ ನೆದರ್ಲ್ಯಾಂಡ್ಸ್ ವಿರುದ್ಧ ಆಡಲಿದೆ ಎಂದು ಬುಧವಾರ ಖಚಿತಪಡಿಸಿದ್ದಾರೆ. ನಾವು ಯಾರಿಗೂ ವಿಶ್ರಾಂತಿ ನೀಡುತ್ತಿಲ್ಲ ಎಂದು ಬೌಲಿಂಗ್ ಕೋಚ್ ಪಂದ್ಯದ ಮುನ್ನಾ ದಿನ ಹೇಳಿದ್ದು, ತಂಡ ಗೆಲುವಿನ ಟ್ರ್ಯಾಕ್​ನಲ್ಲಿದ್ದಾಗ ಅದರ ಆಡುವ ಇಲೆವೆನ್​ನಲ್ಲಿ ಬದಲಾವಣೆ ತರುವುದು ಸರಿಯಲ್ಲ ಎಂದಿದ್ದಾರೆ.

ಬೌಲಿಂಗ್ ಕೋಚ್ ಹೇಳಿಕೆ ಬಳಿಕ ನಾಯಕ ರೋಹಿತ್ ಶರ್ಮಾ ತಮ್ಮ ಪ್ಲೇಯಿಂಗ್-11ರಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಒಂದು ವೇಳೆ ಆಟ ಆರಂಭಕ್ಕೂ ಮುನ್ನ ತಂಡದ 11 ರ ಬಳಗದಲ್ಲಿ ಯಾರಾದರೂ ಇಂಜುರಿಗೊಂಡರೆ ಮಾತ್ರ ಆ ಆಟಗಾರನ ಬದಲು ಮತ್ತೊಬ್ಬ ಆಟಗಾರ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇರಲಿದೆ.

ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:55 pm, Wed, 26 October 22

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ