IND vs NED, ICC World Cup: ಭಾರತದ ಮುಂದಿನ ಪಂದ್ಯ ಬೆಂಗಳೂರಿನಲ್ಲಿ: ಕೊನೆಯ ಮ್ಯಾಚ್ ಯಾವಾಗ?, ಯಾರ ವಿರುದ್ಧ?
India vs Netherlands, ICC ODI World Cup 2023: ಐಸಿಸಿ ಏಕದಿನ ವಿಶ್ವಕಪ್ 2023 ಸೆಮಿ ಫೈನಲ್ಗು ಮುನ್ನ ಭಾರತ ತನ್ನ ಕೊನೆಯ ಪಂದ್ಯವನ್ನು ಆಡಲು ಸಜ್ಜಾಗಿದೆ. ಹಾಗಾದರೆ, ಟೀಮ್ ಇಂಡಿಯಾ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?, ಎಲ್ಲಿ?. ಇಲ್ಲಿದೆ ನೋಡಿ ಮಾಹಿತಿ.
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ (ICC ODI World Cup) ಭಾರತ ಕ್ರಿಕೆಟ್ ತಂಡದ ಅದ್ಭುತ ಪ್ರದರ್ಶನ ಮುಂದುವರೆದಿದೆ. ಭಾನುವಾರ ಈಡನ್ ಗಾರ್ಡನ್ಸ್ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 243 ರನ್ಗಳ ಅಮೋಘ ಗೆಲುವು ಕಂಡಿತು. ಇದರೊಂದಿಗೆ ರೋಹಿತ್ ಶರ್ಮಾ ಆಡಿದ ಎಲ್ಲ ಎಂಟು ಪಂದ್ಯ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡಿದೆ. ಇದೀಗ ಸೆಮಿ ಫೈನಲ್ಗು ಮುನ್ನ ಭಾರತ ತನ್ನ ಕೊನೆಯ ಪಂದ್ಯವನ್ನು ಆಡಲು ಸಜ್ಜಾಗಬೇಕಿದೆ. ಹಾಗಾದರೆ, ಟೀಮ್ ಇಂಡಿಯಾ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?, ಎಲ್ಲಿ?. ಇಲ್ಲಿದೆ ನೋಡಿ ಮಾಹಿತಿ.
ವಿಶ್ವಕಪ್ನಲ್ಲಿ ಭಾರತದ ಮುಂದಿನ ಎದುರಾಳಿ ಯಾರು?
ವಿಶ್ವಕಪ್ನಲ್ಲಿ ಭಾರತ ಮುಂದಿನ ಪಂದ್ಯವನ್ನು ನೆದರ್ಲೆಂಡ್ಸ್ ವಿರುದ್ಧ ಆಡಲಿದೆ.
ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ ಪಂದ್ಯ ನವೆಂಬರ್ 12 ರಂದು (ಭಾನುವಾರ) ನಡೆಯಲಿದೆ.
Virat Kohli: 49ನೇ ಏಕದಿನ ಶತಕ ಸಿಡಿಸಿದ ಕೊಹ್ಲಿಗೆ ‘ಸ್ವಾರ್ಥಿ’ ಎಂಬ ಹಣೆಪಟ್ಟಿ ಕಟ್ಟಿದ ನೆಟ್ಟಿಗರು..!
ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ನೆದರ್ಲೆಂಡ್ಸ್ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ ಪಂದ್ಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.
ನೆದರ್ಲೆಂಡ್ಸ್ ತಂಡ: ವಿಕ್ರಂಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಸೈಬ್ರಾಂಡ್ ಎಂಗೆಲ್ಬ್ರೆಕ್ಟ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ರಿಯಾನ್ ಕ್ಲೈನ್, ಆರ್ಯನ್ ದತ್, ಪಾಲ್ ವಾನ್ ಮೀಕೆರೆನ್, ವೆಸ್ಲಿ ಬೀಕ್, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ