
ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಏಕದಿನ ಸರಣಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಎದುರು ನೋಡುತ್ತಿದೆ. ಮಾತ್ರವಲ್ಲದೆ 2026 ರ ಟಿ20 ವಿಶ್ವಕಪ್‌ಗೆ (2026 T20 World Cup) ಸಿದ್ಧತೆ ನಡೆಸುವತ್ತಲೂ ತನ್ನ ಗಮನಹರಿಸಲಿದೆ. ಟೀಂ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದರೆ, ಮಿಚೆಲ್ ಸ್ಯಾಂಟ್ನರ್ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.
ಟಾಸ್ ಸೋತ ಬಳಿಕ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್ ನಾವು ಕೂಡ ಟಾಸ್ ಗೆದ್ದಿದ್ದರೆ ಮೊದಲು ಬ್ಯಾಟಿಂಗ್ ಮಾಡುತ್ತಿದ್ದೇವು. ಏಕೆಂದರೆ ಕಳೆದೆರಡು ದಿನಗಳಿಂದ ನಾವಿಲ್ಲಿ ಅಭ್ಯಾಸ ನಡೆಸಿದ್ದು, ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗಲಿದೆ ಎಂದಿದ್ದಾರೆ. ಇನ್ನು ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊದರ ಬಳಗವೂ ಹೊರಬಿದ್ದಿದೆ.
🚨 Toss 🚨#TeamIndia have been asked to bat first in Nagpur.
Updates ▶️ https://t.co/ItzV352OVv#INDvNZ | @IDFCFIRSTBank pic.twitter.com/7iRUCUyYeQ
— BCCI (@BCCI) January 21, 2026
ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇದುವರೆಗೆ ಒಟ್ಟು 25 ಟಿ20 ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ, ಟೀಂ ಇಂಡಿಯಾ 14 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ 10 ಪಂದ್ಯಗಳನ್ನು ಗೆದ್ದಿದೆ, ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. 11 ಟಿ20 ಪಂದ್ಯಗಳಲ್ಲಿ ಏಳರಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿರುವ ಟೀಂ ಇಂಡಿಯಾ ಭಾರತದಲ್ಲಿಯೂ ಮೇಲುಗೈ ಸಾಧಿಸಿದೆ. ಮತ್ತೊಂದೆಡೆ, ಕಿವೀಸ್ ಭಾರತದಲ್ಲಿ ಕೇವಲ ನಾಲ್ಕು ಟಿ20 ಪಂದ್ಯಗಳನ್ನು ಗೆದ್ದಿದೆ.
ಕಳೆದ 14 ವರ್ಷಗಳಲ್ಲಿ ನ್ಯೂಜಿಲೆಂಡ್ ಭಾರತದಲ್ಲಿ ಭಾರತದ ವಿರುದ್ಧ ಟಿ20 ಸರಣಿಯನ್ನು ಗೆದ್ದಿಲ್ಲ. 2012 ರಲ್ಲಿ, ನ್ಯೂಜಿಲೆಂಡ್ ಭಾರತದ ವಿರುದ್ಧ ತವರಿನಲ್ಲಿ ತನ್ನ ಏಕೈಕ ಟಿ20 ಸರಣಿಯನ್ನು ಗೆದ್ದಿತು. ಆ ಸಮಯದಲ್ಲಿ ಭಾರತ 0-1 ಅಂತರದಲ್ಲಿ ಸರಣಿ ಸೋತಿತ್ತು.
ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ನ್ಯೂಜಿಲೆಂಡ್ ತಂಡ: ಟಿಮ್ ರಾಬಿನ್ಸನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜೇಮಿಸನ್, ಇಶ್ ಸೋಧಿ ಮತ್ತು ಜಾಕೋಬ್ ಡಫಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:41 pm, Wed, 21 January 26