ಸಮಯದಲ್ಲಿ ಬದಲಾವಣೆ: ಭಾರತ-ನ್ಯೂಝಿಲೆಂಡ್ ನಡುವಣ ಪಂದ್ಯ ಇಂದು ಶುರುವಾಗುವ ನಿರೀಕ್ಷೆ

India vs New Zealand Test: ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಈವರೆಗೆ 62 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 22 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 13 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನುಳಿದ 27 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ 63ನೇ ಮುಖಾಮುಖಿಗೆ ಉಭಯ ತಂಡಗಳು ಸಜ್ಜಾಗಿದೆ.

ಸಮಯದಲ್ಲಿ ಬದಲಾವಣೆ: ಭಾರತ-ನ್ಯೂಝಿಲೆಂಡ್ ನಡುವಣ ಪಂದ್ಯ ಇಂದು ಶುರುವಾಗುವ ನಿರೀಕ್ಷೆ
IND vs NZ
Follow us
|

Updated on: Oct 17, 2024 | 7:11 AM

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ಇಂದು ಶುರುವಾಗುವ ನಿರೀಕ್ಷೆಯಿದೆ. ಬುಧವಾರದಿಂದ (ಅ.16) ಆರಂಭವಾಗಬೇಕಿದ್ದ ಪಂದ್ಯದ ಮೊದಲ ದಿನದಾಟವು ಮಳೆಗೆ ಆಹುತಿಯಾಗಿತ್ತು. ಗುರುವಾರ ಬೆಂಗಳೂರಿನಾದ್ಯಂತ ಮಳೆ ಕುಂಠಿತವಾಗಿದ್ದು, ಹೀಗಾಗಿ ಇಂದು ಪಂದ್ಯ ಶುರುವಾಗುವ ನಿರೀಕ್ಷೆಯಿದೆ.

ಇನ್ನು ಮೊದಲ ದಿನದಾಟ ರದ್ದಾಗಿರುವ ಕಾರಣ ಉಳಿದ ದಿನದಾಟಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅದರಂತೆ ಬೆಳಿಗ್ಗೆ 9.30 ರಿಂದ ಶುರುವಾಗಬೇಕಿರುವ ಪಂದ್ಯವನ್ನು 9.15 ಕ್ಕೆ ಆರಂಭಿಸಲು ನಿರ್ಧರಿಸಲಾಗಿದೆ. ಈ ಮೂಲಕ ಮೊದಲ ದಿನದಾಟದ ಸಮಯವನ್ನು ಸರಿದೂಗಿಸಲು ಪ್ಲ್ಯಾನ್ ರೂಪಿಸಲಾಗಿದೆ.

ದಿನದಾಟಗಳ ಸೆಷನ್ ಸಮಯ:

  • ಬೆಳಗಿನ ಅವಧಿ: 9:15 -11:30
  • ಮಧ್ಯಾಹ್ನದ ಅವಧಿ: 12:10 – 2:25
  • ಸಂಜೆ ಅವಧಿ: 2:45 – 4:45

ಉಭಯ ತಂಡಗಳು:

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025: RCB ತಂಡದಿಂದ ಗ್ರೀನ್​ಗೆ ಗೇಟ್​ ಪಾಸ್..!

ನ್ಯೂಝಿಲೆಂಡ್ ಟೆಸ್ಟ್ ತಂಡ: ಟಾಮ್ ಲ್ಯಾಥಮ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ವಿಲ್ ಓ’ರೂರ್ಕ್, ಅಜಾಝ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಕೇನ್ ವಿಲಿಯಮ್ಸನ್ (ಮೊದಲ ಪಂದ್ಯಕ್ಕೆ ಅಲಭ್ಯ), ಜೇಕೊಬ್ ಡಫಿ, ವಿಲ್ ಯಂಗ್, ಮೈಕೆಲ್ ಬ್ರೇಸ್‌ವೆಲ್ (ಮೊದಲನೇ ಟೆಸ್ಟ್​ಗೆ ಮಾತ್ರ), ಇಶ್ ಸೋಧಿ (ಮೊದಲ ಪಂದ್ಯಕ್ಕೆ ಅಲಭ್ಯ).

ಯಾವ ಚಾನೆಲ್‌ನಲ್ಲಿ ನೇರ ಪ್ರಸಾರ?

ಭಾರತ – ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳು ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಇನ್ನು ಜಿಯೋ ಸಿನಿಮಾ ಆ್ಯಪ್ ನಲ್ಲಿ ಉಚಿತವಾಗಿ ಲೈವ್ ವೀಕ್ಷಿಸಬಹುದು.

ಭಾರತ vs ನ್ಯೂಝಿಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:

  • ಮೊದಲ ಟೆಸ್ಟ್ – ಅಕ್ಟೋಬರ್ 16 ರಿಂದ 20 (ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು)
  • ಎರಡನೇ ಟೆಸ್ಟ್ – 24 ರಿಂದ 28 ಅಕ್ಟೋಬರ್ (ಎಂಸಿಎ ಸ್ಟೇಡಿಯಂ, ಪುಣೆ)
  • ಮೂರನೇ ಟೆಸ್ಟ್ – ನವೆಂಬರ್ 1 ರಿಂದ 5 (ವಾಂಖೆಡೆ ಸ್ಟೇಡಿಯಂ, ಮುಂಬೈ)
Nithya Bhavishya: ಈ ರಾಶಿಯವರಿಗೆ ಇಂದು ಧನಯೋಗ, ಆರು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಧನಯೋಗ, ಆರು ಗ್ರಹಗಳ ಶುಭ ಫಲವಿದೆ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು