IND vs NZ: 402 ರನ್​ಗಳಿಗೆ ನ್ಯೂಜಿಲೆಂಡ್ ಆಲೌಟ್; ಭಾರತಕ್ಕೆ 356 ರನ್​ಗಳ ಹಿನ್ನಡೆ

IND vs NZ: ಬೆಂಗಳೂರಿನಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 402 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ 356 ರನ್​ಗಳ ಮುನ್ನಡೆ ಕಾಯ್ದುಕೊಂಡಿದೆ.

IND vs NZ: 402 ರನ್​ಗಳಿಗೆ ನ್ಯೂಜಿಲೆಂಡ್ ಆಲೌಟ್; ಭಾರತಕ್ಕೆ 356 ರನ್​ಗಳ ಹಿನ್ನಡೆ
ಟೀಂ ಇಂಡಿಯಾ
Follow us
|

Updated on:Oct 18, 2024 | 1:29 PM

ಬೆಂಗಳೂರಿನಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 402 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ 356 ರನ್​ಗಳ ಮುನ್ನಡೆ ಕಾಯ್ದುಕೊಂಡಿದೆ. ನಿನ್ನೆಯಿಂದ ಅಂದರೆ ಅಕ್ಟೋಬರ್ 17 ರಿಂದ ಆರಂಭವಾಗಿರುವ ಮೊದಲ ಟೆಸ್ಟ್‌ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ ಕೇವಲ 46 ರನ್​​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಆ ಬಳಿಕ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ನ್ಯೂಜಿಲೆಂಡ್ ತಂಡ ಪಂದ್ಯದ ಮೂರನೇ ದಿನದಾಟದ ಎರಡನೇ ಸೆಷನ್‌ನಲ್ಲಿ ತನ್ನ ಇನ್ನಿಂಗ್ಸ್​ಗೆ ಅಂತ್ಯ ಹಾಡಿತು. ಕಿವೀಸ್ ಪರ ರಚಿನ್ ರವೀಂದ್ರ 134 ರನ್​ಗಳ ಅತ್ಯಧಿಕ ಇನ್ನಿಂಗ್ಸ್ ಆಡಿದರೆ, ಡೆವೋನ್ ಕಾನ್ವೇ 91 ರನ್​ಗಳ ಕಾಣಿಕೆ ನೀಡಿದರು. ಕೊನೆಯಲ್ಲಿ ವೇಗಿ ಟಿಮ್ ಸೌಥಿ 65 ರನ್ ಬಾರಿಸಿದರು. ಟೀಂ ಇಂಡಿಯಾ ಪರ ಕುಲ್ದೀಪ್ ಹಾಗೂ ಜಡೇಜಾ ತಲಾ 3 ವಿಕೆಟ್ ಪಡೆದರೆ, ಸಿರಾಜ್ 2, ಬುಮ್ರಾ ಹಾಗೂ ಅಶ್ವಿನ್ ತಲಾ 1 ವಿಕೆಟ್ ಪಡೆದರು.

ಕಿವೀಸ್​ಗೆ ಆರಂಭಿಕ ಆಘಾತ

ಪಂದ್ಯದ ಎರಡನೇ ದಿನ ಟೀಂ ಇಂಡಿಯಾವನ್ನು 46 ರನ್​ಗಳಿಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ನ್ಯೂಜಿಲೆಂಡ್ ತಂಡ ದಿನದಾಟದಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿತ್ತು. ಇಲ್ಲಿಂದ ಮೂರನೇ ದಿನದಾಟವನ್ನು ಆರಂಭಿಸಿದ ಕಿವೀಸ್ ಪಡೆ, ಮೂರನೇ ದಿನದ ಎರಡನೇ ಸೆಷನ್​ನಲ್ಲಿ ಉಳಿದ 7 ವಿಕೆಟ್​ಗಳನ್ನು ಕಳೆದುಕೊಂಡು 222 ರನ್ ಕಲೆಹಾಕಿತು. ಮೂರನೇ ದಿನ ಡ್ಯಾರಿಲ್ ಮಿಚೆಲ್ (18), ಟಾಮ್ ಬ್ಲಂಡೆಲ್ (5), ಗ್ಲೆನ್ ಫಿಲಿಪ್ಸ್ (14) ಮತ್ತು ಮ್ಯಾಟ್ ಹೆನ್ರಿ (8) ಬೇಗನೇ ಪೆವಿಲಿಯನ್ ಸೇರಿಕೊಂಡರು.

ರಚಿನ್- ಸೌಥಿ ಶತಕದ ಜೊತೆಯಾಟ

ಆದರೆ  ಇದಾದ ಬಳಿಕ ಟಿಮ್ ಸೌಥಿ ಜತೆಗೂಡಿ ಎಂಟನೇ ವಿಕೆಟ್‌ಗೆ ರಚಿನ್ 137 ರನ್‌ಗಳ ಜೊತೆಯಾಟ ನೀಡಿದರು. ಇದೇ ವೇಳೆ ರಚಿನ್ ತಮ್ಮ ಟೆಸ್ಟ್ ವೃತ್ತಿಜೀವನದ ಎರಡನೇ ಶತಕವನ್ನು ಪೂರ್ಣಗೊಳಿಸಿದರು. ಇತ್ತ ಹಿರಿಯ ವೇಗಿ ಟಿಮ್ ಸೌಥಿ ಕೂಡ ತಮ್ಮ ಟೆಸ್ಟ್ ವೃತ್ತಿಜೀವನದ ಏಳನೇ ಅರ್ಧಶತಕವನ್ನು ದಾಖಲಿಸಿದರು. ಅಂತಿಮವಾಗಿ ಸೌಥಿ 73 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳ ನೆರವಿನಿಂದ 65 ರನ್ ಗಳಿಸಿ ಸಿರಾಜ್​ಗೆ ಬಲಿಯಾದರು. ಇಜಾಜ್ ಪಟೇಲ್ ನಾಲ್ಕು ರನ್ ಗಳಿಗೆ ಇನ್ನಿಂಗ್ಸ್ ಮುಗಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Fri, 18 October 24

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ