IND vs NZ: ಟೀಂ ಇಂಡಿಯಾಕ್ಕೆ ಆಘಾತ; ಗಾಯಗೊಂಡು ಮೈದಾನದಿಂದ ಹೊರನಡೆದ ಪಂತ್..!

Rishabh Pant Injury: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಟೀಂ ಇಂಡಿಯಾಗೆ ಇದೀಗ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಬ್ ಪಂತ್ ಗಾಯದ ಸಮಸ್ಯೆಯಿಂದ ಮೈದಾನದಿಂದ ಹೊರ ಹೋಗಿದ್ದಾರೆ.

IND vs NZ: ಟೀಂ ಇಂಡಿಯಾಕ್ಕೆ ಆಘಾತ; ಗಾಯಗೊಂಡು ಮೈದಾನದಿಂದ ಹೊರನಡೆದ ಪಂತ್..!
ರಿಷಬ್ ಪಂತ್
Follow us
ಪೃಥ್ವಿಶಂಕರ
|

Updated on:Oct 17, 2024 | 5:23 PM

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಟೀಂ ಇಂಡಿಯಾಗೆ ಇದೀಗ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಬ್ ಪಂತ್ ಗಾಯದ ಸಮಸ್ಯೆಯಿಂದ ಮೈದಾನದಿಂದ ಹೊರ ಹೋಗಿದ್ದಾರೆ. ವಾಸ್ತವವಾಗಿ, ವಿಕೆಟ್ ಕೀಪಿಂಗ್ ಮಾಡುವಾಗ ಪಂತ್ ಈ ಗಾಯಕ್ಕೆ ಒಳಗಾಗಿದ್ದು ಅವರ ಗಾಯದ ತೀವ್ರತೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದೀಗ ಪಂತ್ ಬದಲಿಗೆ ಧೃವ್ ಜುರೇಲ್ ವಿಕೆಟ್ ಕೀಪಿಂಗ್​ ಮಾಡುತ್ತಿದ್ದಾರೆ.

ಗಾಯಕ್ಕೆ ತುತ್ತಾದ ಪಂತ್

ವಾಸ್ತವವಾಗಿ ಈ ಘಟನೆ ನಡೆದಿದ್ದು 37ನೇ ಓವರ್‌ನ ಕೊನೆಯ ಎಸೆತದಲ್ಲಿ, ರವೀಂದ್ರ ಜಡೇಜಾ ಎಸೆದ ಚೆಂಡು ಪಂತ್ ಅವರ ಮೊಣಕಾಲಿಗೆ ಬಡಿಯಿತು.  ಹೀಗಾಗಿ ತೀವ್ರ ನೋವಿನಿಂದ ಪಂತ್ ಮೈದಾನದಲ್ಲೇ ನರಳಲಾರಂಭಿಸಿದರು. ಕೂಡಲೇ ಸ್ಥಳಕ್ಕೆ ಬಂದ ಫಿಸಿಯೋ, ಪಂತ್​ಗೆ ಪ್ರಥಮ ಚಿಕಿತ್ಸೆ ನೀಡಿದರು. ಆದಾಗ್ಯೂ ಪಂತ್​ಗೆ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರನ್ನು ಮೈದಾನದಿಂದ ಹೊರಗೆ ಕರೆದುಕೊಂಡ ಹೋಗಲಾಯಿತು. ಮೈದಾನದಿಂದ ಹೊರಹೋಗುವಾಗಲು ಪಂತ್​ ನೋವಿನಿಂದ ಕುಂಟುತ್ತಾ ಸಾಗಿದರು. ಹೀಗಾಗಿ ಪಂತ್ ಬದಲಿಗೆ ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ. ಪಂತ್ ಗಾಯಗೊಂಡಿರುವುದು ಇದೀಗ ಟೀಂ ಇಂಡಿಯಾದ ಟೆನ್ಶನ್ ಹೆಚ್ಚಿಸಿದೆ. ಏಕೆಂದರೆ ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 46 ರನ್ ಗಳಿಸಲು ಪಂತ್ ಅವರೇ ಕಾರಣ. ತಂಡದ ಪರ ಅತ್ಯಧಿಕ 20 ರನ್ ಬಾರಿಸಿದ್ದು ಇದೇ ಪಂತ್. ಹೀಗಾಗಿ ಪಂತ್ ಬೇಗನೇ ಚೇತರಿಸಿಕೊಳ್ಳಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

ಕಿವೀಸ್ ಮೇಲುಗೈ

ಬೆಂಗಳೂರು ಟೆಸ್ಟ್‌ನಲ್ಲಿ ನ್ಯೂಜಿಲೆಂಡ್ ತಂಡ ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಭಾರತವನ್ನು ಕೇವಲ 46 ರನ್‌ಗಳಿಗೆ ಆಲೌಟ್ ಮಾಡಿದ ನ್ಯೂಜಿಲೆಂಡ್ ತಂಡ, ತನ್ನ ಮೊದಲ ಇನ್ನಿಂಗ್ಸ್​ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದೆ. ಸದ್ಯ ಕಿವೀಸ್ ತಂಡ ಈ ಸುದ್ದಿ ಬರೆಯುವ ವೇಳೆಗೆ 3 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿದೆ. ಈ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ 134 ರನ್​ಗಳ ಮುನ್ನಡೆ ಸಾಧಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:05 pm, Thu, 17 October 24

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ