Rohit Sharma: ನಾವು ಚೆನ್ನಾಗಿ ಬ್ಯಾಟಿಂಗ್ ಮಾಡಿದ್ದೆವು… ಆದರೆ

India vs New Zealand Test: ಭಾರತ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಅಕ್ಟೋಬರ್ 24 ರಿಂದ ಶುರುವಾಗಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿಯನ್ನು ಸಮಬಲವಾಗಲಿದೆ. ಹೀಗಾಗಿ ಈ ಮ್ಯಾಚ್ ಭಾರತದ ಪಾಲಿಗೆ ನಿರ್ಣಾಯಕ ಎನ್ನಬಹುದು.

Rohit Sharma: ನಾವು ಚೆನ್ನಾಗಿ ಬ್ಯಾಟಿಂಗ್ ಮಾಡಿದ್ದೆವು... ಆದರೆ
Rohit Sharma
Follow us
| Updated By: ಝಾಹಿರ್ ಯೂಸುಫ್

Updated on: Oct 20, 2024 | 1:27 PM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಮಳೆಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 46 ರನ್ ಕಲೆಹಾಕಿದರೆ, ನ್ಯೂಝಿಲೆಂಡ್ 402 ರನ್​ಗಳಿಸಿತು. ಇದಾದ ಬಳಿಕ 356 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ 462 ರನ್​ ಪೇರಿಸುವಲ್ಲಿ ಯಶಸ್ವಿಯಾಯಿತು.

ಆದರೆ ಅತ್ತ ಮೊದಲ ಇನಿಂಗ್ಸ್​ನಲ್ಲಿನ ಮುನ್ನಡೆಯೊಂದಿಗೆ ನ್ಯೂಝಿಲೆಂಡ್ ತಂಡ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 107 ರನ್​ಗಳ ಗುರಿ ಪಡೆಯಿತು. ಈ ಗುರಿಯನ್ನು 27.4 ಓವರ್​ಗಳಲ್ಲಿ ಚೇಸ್ ಮಾಡಿ ನ್ಯೂಝಿಲೆಂಡ್ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಂಡದ ಒಟ್ಟಾರೆ ಪ್ರದರ್ಶನಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸೋಲಿಗೆ ಕಾರಣವಾಗಿದ್ದು ಮೊದಲ ಇನಿಂಗ್ಸ್​ನಲ್ಲಿನ ಕಳಪೆ ಬ್ಯಾಟಿಂಗ್ ಎಂದಿದ್ದಾರೆ.

ಎರಡನೇ ಇನ್ನಿಂಗ್ಸ್‌ನಲ್ಲಿ ನಾವು ಉತ್ತಮ ಬ್ಯಾಟಿಂಗ್ ಮಾಡಿದ್ದೆವು. ಆದರೆ ಮೊದಲ ಇನಿಂಗ್ಸ್​ನಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆಗಿದ್ದು ನಮ್ಮ ಪಾಲಿಗೆ ಮುಳುವಾಯಿತು. ಅಲ್ಲದೆ ನ್ಯೂಝಿಲೆಂಡ್ ತಂಡವು 350 ರನ್​ಗಳಿಂದ ಹೆಚ್ಚಿನ ಮುನ್ನಡೆ ಪಡೆದಿದ್ದರಿಂದ ಪಂದ್ಯದ ಫಲಿತಾಂಶ ಏನಾಗಲಿದೆ ಎಂದು ಸಹ ತಿಳಿದಿತ್ತು. ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ ನಮ್ಮ ಬ್ಯಾಟರ್​ಗಳು ಹೋರಾಟದ ಮನೋಭಾವ ತೋರಿದ್ದು ಉತ್ತಮ ಬೆಳವಣಿಗೆ ಎಂದು ರೋಹಿತ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.

ದ್ವಿತೀಯ ಇನಿಂಗ್ಸ್​ನಲ್ಲಿ ಸರ್ಫರಾಝ್ ಖಾನ್ ತೋರಿದ ಪ್ರಬುದ್ಧತೆಯ ಬ್ಯಾಟಿಂಗ್, ರಿಷಭ್ ಪಂತ್ ಅವರ ಹೋರಾಟ ನಮಗೆ ಹೊಸ ಭರವಸೆಯನ್ನು ಹುಟ್ಟುಹಾಕಿತ್ತು. ಆದರೆ ಆ ಬಳಿಕ ನಾವು ಮತ್ತೆ ವೈಫಲ್ಯ ಹೊಂದಿದ್ದವು. ಇದರ ಸಂಪೂರ್ಣ ಲಾಭ ಪಡೆದ ನ್ಯೂಝಿಲೆಂಡ್ ತಂಡ ಉತ್ತಮ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾದರು ಎಂದು ರೋಹಿತ್ ಶರ್ಮಾ ಹೇಳಿದರು.

ಇದನ್ನೂ ಓದಿ: RCB ಉಳಿಸಿಕೊಂಡ ಆರು ಆಟಗಾರರು ಯಾರೆಲ್ಲಾ ಗೊತ್ತಾ?

ಇದೀಗ ಒಂದು ಪಂದ್ಯ ಮಾತ್ರ ಮುಗಿದಿದೆ. ಇನ್ನೂ ಎರಡು ಮ್ಯಾಚ್​ಗಳಿವೆ. ಮೊದಲ ಪಂದ್ಯದಲ್ಲಿನ ಸಕಾರಾತ್ಮಕ ಅಂಶಗಳನ್ನು ತೆಗೆದುಕೊಂಡು ನಾವು ಮುಂದುವರಿಯುತ್ತೇವೆ. ಈ ಹಿಂದೆ ಕೂಡ ನಾವು ಇಂತಹ ಪರಿಸ್ಥಿತಿಯನ್ನು ಎದುರಿಸಿದ್ದೆವು. ಇಂಗ್ಲೆಂಡ್ ವಿರುದ್ಧದ ಟೆಸ್ಟ್​ನಲ್ಲಿ ಒಂದು ಪಂದ್ಯದಲ್ಲಿ ಸೋತು, ಉಳಿದ ನಾಲ್ಕು ಪಂದ್ಯಗಳನ್ನು ಗೆದ್ದಿದ್ದೇವೆ. ಹಾಗಾಗಿ ಸರಣಿ ಹಿನ್ನಡೆ ಎನ್ನುವುದು ನಮಗೆ ಹೊಸದೇನು ಅಲ್ಲ. ಅಲ್ಲದೆ ಮುಂದಿನ ಎರಡು ಟೆಸ್ಟ್ ಪಂದ್ಯಗಳ ಮೂಲಕ ನಾವು ಕಂಬ್ಯಾಕ್ ಮಾಡುತ್ತೇವೆ ಎಂದು ರೋಹಿತ್ ಶರ್ಮಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2ನೇ ಟೆಸ್ಟ್ ಪಂದ್ಯ ಯಾವಾಗ?

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಅಕ್ಟೋಬರ್ 24 ರಿಂದ ಶುರುವಾಗಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿಯನ್ನು ಸಮಬಲವಾಗಲಿದೆ. ಹಾಗೆಯೇ ಈ ಸರಣಿಯ ಮೂರನೇ ಪಂದ್ಯವು ನವೆಂಬರ್ 1 ರಿಂದ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?