IND vs NZ, 2nd ODI, Live Streaming: ಗೆಲ್ಲಲೇಬೇಕಾದ ಒತ್ತಡದಲ್ಲಿ ಭಾರತ; ಪಂದ್ಯ ಆರಂಭ ಎಷ್ಟು ಗಂಟೆಗೆ?

India Vs New Zealand, 2nd ODI, Live Streaming: ಕಳೆದ ಪ್ರವಾದಲ್ಲೂ ಕಿವೀಸ್ ವಿರುದ್ಧದ ಏಕದಿನ ಸರಣಿಯಲ್ಲಿ 3-0 ಅಂತರದ ಸೋಲನುಭವಿಸಿದ್ದ ಟೀಂ ಇಂಡಿಯಾ ಬರಿಗೈಯಲ್ಲೇ ತವರಿಗೆ ಮರಳಿತ್ತು. ಹೀಗಾಗಿ ಈಗ ಟಿ20 ಸರಣಿಯನ್ನ ತನ್ನ ತೆಕ್ಕೆಗೆ ಹಾಕಿಕೊಂಡಿರುವ ಭಾರತ ತಂಡ ಏಕದಿನ ಸರಣಿಯನ್ನೂ ತನ್ನದಾಗಿಸಿಕೊಳ್ಳಲು ಹೋರಾಡಬೇಕಿದೆ.

IND vs NZ, 2nd ODI, Live Streaming: ಗೆಲ್ಲಲೇಬೇಕಾದ ಒತ್ತಡದಲ್ಲಿ ಭಾರತ; ಪಂದ್ಯ ಆರಂಭ ಎಷ್ಟು ಗಂಟೆಗೆ?
IND vs NZ
Follow us
TV9 Web
| Updated By: ಪೃಥ್ವಿಶಂಕರ

Updated on:Nov 26, 2022 | 4:40 PM

ಮೂರು ಪಂದ್ಯಗಳ ಏಕದಿನ ಸರಣಿಯನ್ನು ಸೋಲಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾಕ್ಕೆ (India Vs New Zealand) ಇದೀಗ ಅಗ್ನಿ ಪರೀಕ್ಷೆ ಎದುರಾಗಿದೆ. ಸರಣಿ ಗೆಲ್ಲಬೇಕೆಂದರೆ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿರುವ ಧವನ್ (Shikhar Dhawan) ಪಡೆಗೆ ಸೋಲಿನ ಶಾಕ್ ನೀಡಲು ನ್ಯೂಜಿಲೆಂಡ್ ತಂಡ ಭರ್ಜರಿ ತಯಾರಿ ನಡೆಸಿದೆ. ಎರಡನೇ ಏಕದಿನ ಪಂದ್ಯಕ್ಕಾಗಿ ಈಗಾಗಲೇ ಹ್ಯಾಮಿಲ್ಟನ್ ತಲುಪಿರುವ ಟೀಂ ಇಂಡಿಯಾ (Team India) ಅಭ್ಯಾಸದಲ್ಲಿ ನಿರತವಾಗಿದೆ. ಆಡಿದ ಮೊದಲ ಪಂದ್ಯದಲ್ಲಿ ಬೃಹತ್ ಟಾರ್ಗೆಟ್ ನಡುವೆಯೂ ಟೀಂ ಇಂಡಿಯಾ ಕಿವೀಸ್ ಎದುರು ಹೀನಾಯ ಸೋಲನನುಭವಿಸಿತ್ತು. ಟಿ20 ಸರಣಿ ಸೋಲಿನ ಸೇಡನ್ನು ಮೊದಲ ಏಕದಿನ ಪಂದ್ಯದಲ್ಲಿ ತೀರಿಸಿಕೊಂಡಿದ್ದ ನಾಯಕ ಕೇನ್ ವಿಲಿಯಮ್ಸನ್ (Kane Williamson), ಟಾಮ್ ಲೇಥಮ್ ಜೊತೆಗೂಡಿ ದಾಖಲೆಯ ಇನ್ನಿಂಗ್ಸ್ ಕಟ್ಟುವುದರೊಂದಿಗೆ ತಂಡಕ್ಕೆ ಗೆಲುವಿನ ಕಾಣಿಕೆ ನೀಡಿದ್ದರು. ಇದೀಗ ಎರಡನೇ ಏಕದಿನ ಪಂದ್ಯದಲ್ಲೂ ಅದೇ ಪ್ರದರ್ಶನ ನೀಡಲು ಕಿವೀಸ್ ಕಾತುರದಲ್ಲಿದೆ.

ದುರ್ಬಲ ಬೌಲಿಂಗ್ ವಿಭಾಗ

ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಮೂರು ಅರ್ಧಶತಕಗಳು ಸಿಡಿದಿದ್ದವು. ನಾಯಕ ಧವನ್, ಆರಂಭಿಕ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ತಲಾ ಅರ್ಧಶತಕ ಸಿಡಿಸಿ ತಂಡವನ್ನು 300 ರ ಗಡಿ ದಾಟಿಸಿದ್ದರು. ಆದರೆ ಅನಾನುಭವಿಗಳಿಂದ ಕೂಡಿದ್ದ ಟೀಂ ಇಂಡಿಯಾದ ಬೌಲಿಂಗ್ ವಿಭಾಗ ಕಿವೀಸ್ ಬ್ಯಾಟರ್​ಗಳ ಮುಂದೆ ಮಂಕಾಗಿತ್ತು. ದುರ್ಬಲ ಬೌಲಿಂಗ್ ವಿಭಾಗವನ್ನು ಪುಡಿಗಟ್ಟಿದ ಕಿವೀಸ್ ಬ್ಯಾಟರ್​ಗಳು ನೀರು ಕುಡಿದಷ್ಟು ಸುಲಭವಾಗಿ ಗುರಿ ಬೆನ್ನಟ್ಟಿದ್ದರು. ಹೀಗಾಗಿ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಧವನ್ ಪಡೆ ಬೌಲಿಂಗ್ ವಿಭಾಗದ ನ್ಯೂನತೆಯನ್ನು ಸರಿಪಡಿಸಿಕೊಳ್ಳಬೇಕಿದೆ. ಹಾಗೆಯೇ ತಂಡದ ಸೋಲಿಗೆ ಇನ್ನೊಂದು ಪ್ರಮುಖ ಕಾರಣವೆಂದರೆ ಅದು ಬೌಲಿಂಗ್​ನಲ್ಲಿ 6ನೇ ಆಯ್ಕೆ ಇಲ್ಲದಿರುವುದು. ಹೀಗಾಗಿ ಮುಂದಿನ ಪಂದ್ಯದಲ್ಲಿ ನಾಯಕ ಧವನ್ ಯಾವ ರೀತಿಯ ತಂಡವನ್ನು ಕಣಕ್ಕಿಳಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಭಾರತ ಗೆಲ್ಲಲೇಬೇಕಿದೆ

ಕಳೆದ ಪ್ರವಾದಲ್ಲೂ ಕಿವೀಸ್ ವಿರುದ್ಧದ ಏಕದಿನ ಸರಣಿಯಲ್ಲಿ 3-0 ಅಂತರದ ಸೋಲನುಭವಿಸಿದ್ದ ಟೀಂ ಇಂಡಿಯಾ ಬರಿಗೈಯಲ್ಲೇ ತವರಿಗೆ ಮರಳಿತ್ತು. ಹೀಗಾಗಿ ಈಗ ಟಿ20 ಸರಣಿಯನ್ನ ತನ್ನ ತೆಕ್ಕೆಗೆ ಹಾಕಿಕೊಂಡಿರುವ ಭಾರತ ತಂಡ ಏಕದಿನ ಸರಣಿಯನ್ನೂ ತನ್ನದಾಗಿಸಿಕೊಳ್ಳಲು ಹೋರಾಡಬೇಕಿದೆ. ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಬಹುದು ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ಖಚಿತಪಡಿಸಿರುವುದರಿಂದ ಟೀಂ ಇಂಡಿಯಾಕ್ಕೆ ಕೊಂಚ ಹಿನ್ನಡೆಯುಂಟಾಗಿದೆ. ಒಂದು ವೇಳೆ ಪಂದ್ಯ ನಡೆದರೆ ಕೊನೆಯ ಪಂದ್ಯದವರೆಗೂ ಸರಣಿಯನ್ನು ಜೀವಂತವಾಗಿರಿಸಬೇಕೆಂದರೆ ಧವನ್ ಪಡೆ ಈ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ನವೆಂಬರ್ 26, ಭಾನುವಾರ ನಡೆಯಲಿದೆ.

ಭಾರತ-ನ್ಯೂಜಿಲೆಂಡ್ 2ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯ ಯಾವಾಗ ಆರಂಭವಾಗುತ್ತದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದ್ದು, ಟಾಸ್ 06:30ಕ್ಕೆ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್​ನಲ್ಲಿ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ನೇರ ಪ್ರಸಾರ ದೂರದರ್ಶನದಲ್ಲಿರಲಿದೆ (ಡಿಟಿಹೆಚ್ ಚೆಂದದಾರರಿಗೆ ಮಾತ್ರ).

ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಅಮೇಜಾನ್ ಪ್ರೈಂನಲ್ಲಿ ನೋಡಬಹುದು.

Published On - 4:34 pm, Sat, 26 November 22

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!