
ವೆಲ್ಲಿಂಗ್ಟನ್‌ನ ಹೆನ್ರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ ಕೇವಲ 134 ರನ್‌ಗಳಿಗೆ ಆಲೌಟ್ ಆಗಿದೆ. ಮಳೆಯ ಕಾರಣ 47 ಓವರ್‌ಗಳಿಗೆ ಸೀಮಿತವಾಗಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಝಿಲೆಂಡ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಆಟಗಾರರಾದ ಟಿಮ್ ಸೈಫರ್ಟ್ (0) ಹಾಗೂ ವಿಲ್ ಯಂಗ್ (6) ಅವರ ವಿಕೆಟ್ ಕಬಳಿಸುವ ಮೂಲಕ ಆಖಿಬ್ ನಬಿ ಆರಂಭಿಕ ಆಘಾತ ನೀಡಿದರು. ಇದರ ಬೆನ್ನಲ್ಲೇ ಹೆನ್ರಿ ನಿಕೋಲ್ಸ್ (11) ಕೂಡ ವಿಕೆಟ್ ಒಪ್ಪಿಸಿ ಹೊರನಡೆದರು.
ಆ ಬಳಿಕ ಬಂದ ಡ್ಯಾರಿಲ್ ಮಿಚೆಲ್ 55 ರನ್ ಬಾರಿಸಿ ತಂಡಕ್ಕೆ ಆಸರೆಯಾದರು. ಆದರೆ ಮಿಚೆಲ್ ವಿಕೆಟ್ ಪತನವಾಗುತ್ತಿದ್ದಂತೆ ನ್ಯೂಝಿಲೆಂಡ್ ಮತ್ತೆ ಕುಸಿತಕ್ಕೊಳಗಾಯಿತು. ಟಾಮ್ ಲ್ಯಾಥಮ್ (7) ಮತ್ತು ಗ್ಲೆನ್ ಫಿಲಿಪ್ಸ್ (0) ಸಲ್ಪ ಸಮಯದಲ್ಲೇ ವಿಕೆಟ್ ಒಪ್ಪಿಸಿದರು. ಈ ಕಠಿಣ ಹಂತದಲ್ಲಿ ಮಿಚೆಲ್ ಸ್ಯಾಂಟ್ನರ್ 31 ರನ್ಗಳ ಉಪಯುಕ್ತ ಕೊಡುಗೆ ನೀಡಿದರು. ಪರಿಣಾಮ ನ್ಯೂಝಿಲೆಂಡ್ ತಂಡದ ಸ್ಕೋರ್ 100ರ ಗಡಿದಾಟಿತು.
ಇನ್ನು ಮಿಚೆಲ್ ಸ್ಯಾಂಟ್ನರ್ ಬಳಿಕ ಬಂದ ನಾಥನ್ ಸ್ಮಿತ್ 3 ರನ್ಗಳಿಸಿದರೆ, ಕೈಲ್ ಜೇಮಿಸನ್ 7 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ನ್ಯೂಝಿಲೆಂಡ್ ತಂಡ 41 ಓವರ್ಗಳಲ್ಲಿ 134 ರನ್‌ಗಳಿಗೆ ಸರ್ವಪತನ ಕಂಡಿದೆ.
ಟೀಮ್ ಇಂಡಿಯಾ ಪರ ಕರಾರುವಾಕ್ ದಾಳಿ ಸಂಘಟಿಸಿದ ಗುರ್ನೂರ್ ಬ್ರಾರ್ 10 ಓವರ್ಗಳಲ್ಲಿ 30 ರನ್ ನೀಡಿ 4 ವಿಕೆಟ್ ಪಡೆದರೆ, ಆಖಿಬ್ ನಬಿ, ಅನ್ಶುಲ್ ಕಂಬೋಜ್ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಕಬಳಿಸಿದರು.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ನಮನ್ ಧೀರ್, ಅನ್ಶುಲ್ ಕಂಬೋಜ್, ಆಕಿಬ್ ನಬಿ, ಗುರ್ನೂರ್ ಬ್ರಾರ್, ಅರ್ಷದೀಪ್ ಸಿಂಗ್.
ಇದನ್ನೂ ಓದಿ: ಭಾರತ vs ಪಾಕಿಸ್ತಾನ್ ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ
ನ್ಯೂಝಿಲೆಂಡ್ (ಪ್ಲೇಯಿಂಗ್ XI): ವಿಲ್ ಯಂಗ್, ಟಿಮ್ ಸೈಫರ್ಟ್, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಯಕ), ನಾಥನ್ ಸ್ಮಿತ್, ಕೈಲ್ ಜೇಮಿಸನ್, ಜೇಕಬ್ ಡಫಿ, ಬ್ಲೇರ್ ಟಿಕ್ನರ್.