AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ 7.30ಕ್ಕೆ ಭಾರತ-ನ್ಯೂಜಿಲೆಂಡ್ ಕದನ; ಲೈವ್ ಪಂದ್ಯ ವೀಕ್ಷಿಸುವುದು ಹೇಗೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 5 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯ ನವೆಂಬರ್ 7ರ ಶನಿವಾರ ವೆಲ್ಲಿಂಗ್ಟನ್‌ನಲ್ಲಿ ನಡೆಯಲಿದೆ. ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಸಾಧಿಸಿರುವ ಭಾರತ ತಂಡ, ಎರಡನೇ ಪಂದ್ಯದಲ್ಲೂ ಗೆದ್ದು ಸರಣಿ ಮುನ್ನಡೆಯನ್ನು ಹೆಚ್ಚಿಸಿಕೊಳ್ಳಲು ಸಜ್ಜಾಗಿದೆ. ವಿರಾಟ್ ಕೊಹ್ಲಿ ಬ್ಯಾಟಿಂಗ್ ಹಾಗೂ ಯುವ ವೇಗಿಗಳ ಪ್ರದರ್ಶನ ಗಮನ ಸೆಳೆದಿತ್ತು. ಪಂದ್ಯದ ದಿನಾಂಕ, ಸಮಯ, ನೇರಪ್ರಸಾರ ಮತ್ತು ತಂಡಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಬೆಳಗ್ಗೆ 7.30ಕ್ಕೆ ಭಾರತ-ನ್ಯೂಜಿಲೆಂಡ್ ಕದನ; ಲೈವ್ ಪಂದ್ಯ ವೀಕ್ಷಿಸುವುದು ಹೇಗೆ?
ಭಾರತ Vs ನ್ಯೂಜಿಲೆಂಡ್
ಪೃಥ್ವಿಶಂಕರ
|

Updated on: Nov 06, 2026 | 7:14 PM

Share

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಐದು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ನವೆಂಬರ್ 7ರ ಶನಿವಾರ ವೆಲ್ಲಿಂಗ್ಟನ್‌ನ ಹೆನ್ರಿ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. ಮೊದಲ ಏಕದಿನ ಪಂದ್ಯದಲ್ಲಿ ಭಾರತದ ವೇಗದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದರು. ಯುವ ವೇಗಿಗಳು ನ್ಯೂಜಿಲೆಂಡ್ ಬ್ಯಾಟರ್‌ಗಳನ್ನು ಕಾಡಿ ಕೇವಲ 40.2 ಓವರ್‌ಗಳಲ್ಲಿ 185 ರನ್‌ಗಳಿಗೆ ಆಲೌಟ್ ಮಾಡಿದ್ದರು. ಮಳೆ ಅಡ್ಡಿಪಡಿಸಿದ ಕಾರಣ ಡಕ್‌ವರ್ತ್ ಲೂಯಿಸ್ ನಿಯಮದ ಪ್ರಕಾರ ಭಾರತಕ್ಕೆ 32 ಓವರ್‌ಗಳಲ್ಲಿ 143 ರನ್‌ಗಳ ಗುರಿ ನೀಡಲಾಗಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಭಾರತ ವಿರಾಟ್ ಕೊಹ್ಲಿ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ 22.4 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 143 ರನ್ ಗಳಿಸಿ ಗೆಲುವಿನ ನಗೆ ಬೀರಿತ್ತು. ಇದೀಗ ಎರಡನೇ ಪಂದ್ಯದಲ್ಲೂ ಗೆದ್ದು ಸರಣಿಯಲ್ಲಿ ಮುನ್ನಡೆಯನ್ನು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿ ಭಾರತ ತಂಡವಿದೆ. ಉಳಿದಂತೆ ಪಂದ್ಯದ ಬಗ್ಗೆಗಿನ ಪೂರ್ಣ ಮಾಹಿತಿ ಇಂತಿದೆ.

ಭಾರತ-ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ-ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ನವೆಂಬರ್ 7ರ ಶನಿವಾರ ನಡೆಯಲಿದೆ.

ಭಾರತ-ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ-ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿರುವ ಹೆನ್ರಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ-ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ಟಾಸ್ ಎಷ್ಟು ಗಂಟೆಗೆ?

ಭಾರತ-ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ಟಾಸ್ ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 7 ಗಂಟೆಗೆ ನಡೆಯಲಿದೆ.

ಭಾರತ-ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ನೇರಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ನೇರಪ್ರಸಾರವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಾಹಿನಿಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಪಂದ್ಯದ ಲೈವ್ ಸ್ಟ್ರೀಮಿಂಗ್ ಸೋನಿ ಲಿವ್ ಆ್ಯಪ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರಲಿದೆ.

ಭಾರತ- ನ್ಯೂಜಿಲೆಂಡ್ ನಡುವೆ 5 ಪಂದ್ಯಗಳ ಏಕದಿನ ಸರಣಿ; ಪೂರ್ಣ ವಿವರ ಇಲ್ಲಿದೆ

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ನಮನ್ ಧೀರ್, ಅಂಶುಲ್ ಕಂಬೋಜ್, ಆಕಿಬ್ ನಬಿ, ಗುರುನೂರ್ ಬ್ರಾರ್, ಅರ್ಷದೀಪ್ ಸಿಂಗ್, ರುತುರಾಜ್ ಗಾಯಕ್ವಾಡ್, ಮೊಹಮ್ಮದ್ ಸಿರಾಜ್, ಇಶಾನ್ ಕಿಶನ್, ಕುಲ್ದೀಪ್ ಯಾದವ್

ನ್ಯೂಜಿಲೆಂಡ್ ತಂಡ: ವಿಲ್ ಯಂಗ್, ಟಿಮ್ ಸೈಫರ್ಟ್, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಕೈಲ್ ಜೇಮಿಸನ್, ಜಾಕೋಬ್ ಡಫಿ, ಬ್ಲೇರ್ ಟಿಕ್ನರ್, ನಿಕ್ ಕೆಲ್ಲಿ, ಮ್ಯಾಥ್ಯೂ ಫಿಶರ್, ಮೈಕೆಲ್ ಬ್ರೇಸ್‌ವೆಲ್, ಮ್ಯಾಟ್ ಹೆನ್ರಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More