AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಟಾಸ್​ ಗೆದ್ದವನೇ ಬಾಸ್; ರಾಯ್‌ಪುರದ ಪಿಚ್​ನಲ್ಲಿ ಮಿಂಚುವವರು ಯಾರು? ಇಲ್ಲಿದೆ ಪಿಚ್ ರಿಪೋರ್ಟ್

IND vs NZ: ಇಲ್ಲಿ ನಡೆದಿರುವ ಎಲ್ಲಾ ಐಪಿಎಲ್ ಪಂದ್ಯಗಳು ಮತ್ತು ದೇಶೀಯ ಪಂದ್ಯಗಳ ವರದಿಯನ್ನು ನೋಡಿದ ಬಳಿಕ, ಇಲ್ಲಿನ ಪಿಚ್ ಬ್ಯಾಟಿಂಗ್‌ಗೆ ಅನುಕೂಲಕರವಾಗಿರುವುದು ಕಂಡುಬಂದಿದೆ.

IND vs NZ: ಟಾಸ್​ ಗೆದ್ದವನೇ ಬಾಸ್; ರಾಯ್‌ಪುರದ ಪಿಚ್​ನಲ್ಲಿ ಮಿಂಚುವವರು ಯಾರು? ಇಲ್ಲಿದೆ ಪಿಚ್ ರಿಪೋರ್ಟ್
ರೋಹಿತ್ ಶರ್ಮಾ
TV9 Web
| Updated By: ಪೃಥ್ವಿಶಂಕರ|

Updated on:Jan 21, 2023 | 9:19 AM

Share

ಭಾರತ ಮತ್ತು ನ್ಯೂಜಿಲೆಂಡ್ (India Vs New Zealand) ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಇಂದು ರಾಯ್‌ಪುರದಲ್ಲಿ ನಡೆಯಲಿದೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಅಂತಾರಾಷ್ಟ್ರೀಯ ಪಂದ್ಯ ಇದಾಗಿದೆ. ಹೈದರಾಬಾದ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತ ಏಕದಿನ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಈಗ ರಾಯಪುರದಲ್ಲಿ ಸರಣಿಯನ್ನು ಸೀಲ್ ಮಾಡುವ ಪ್ರಯತ್ನ ಟೀಂ ಇಂಡಿಯಾ (Team India) ಪಾಳಯದಿಂದ ನಡೆಯಲಿದೆ. ಮತ್ತೊಂದೆಡೆ, ನ್ಯೂಜಿಲೆಂಡ್ ಕೂಡ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಲು ಪ್ರಯತ್ನಿಸಲಿದೆ. ಹೀಗಾಗಿ ಇಂದಿನ ಪಂದ್ಯ ರೋಚಕತೆಯಿಂದ ಕೂಡಿದ್ದು, ಎರಡೂ ತಂಡಗಳು ಗೆಲುವಿಗಾಗಿ ಹೋರಾಟ ನಸೆಸಬೇಕಾಗಿದೆ.

ರಾಯ್‌ಪುರದ ಪಿಚ್‌ ಬ್ಯಾಟಿಂಗ್‌ ಸ್ನೇಹಿ

ಇನ್ನು ರಾಯ್​ಪುರದ ಪಿಚ್​ ಬಗ್ಗೆ ಮಾತನಾಡುವುದಾದರೆ, ಈ ಮೈದಾನದಲ್ಲಿ ಇದುವರೆಗೆ ಯಾವುದೇ ಅಂತಾರಾಷ್ಟ್ರೀಯ ಪಂದ್ಯ ನಡೆದಿಲ್ಲ. ಆದರೆ ಇಲ್ಲಿ ನಡೆದಿರುವ ಎಲ್ಲಾ ಐಪಿಎಲ್ ಪಂದ್ಯಗಳು ಮತ್ತು ದೇಶೀಯ ಪಂದ್ಯಗಳ ವರದಿಯನ್ನು ನೋಡಿದ ಬಳಿಕ, ಇಲ್ಲಿನ ಪಿಚ್ ಬ್ಯಾಟಿಂಗ್‌ಗೆ ಅನುಕೂಲಕರವಾಗಿರುವುದು ಕಂಡುಬಂದಿದೆ. ಅಲ್ಲದೆ ಇಲ್ಲಿನ ಪಿಚ್​ನಲ್ಲಿ ವೇಗದ ಬೌಲರ್‌ಗಳು ಪರಿಣಾಮಕಾರಿಯಾಗುವುದು ಕಡಿಮೆ. ಆದರೂ ಚೆಂಡು ಹಳೆಯದಾಗುತ್ತಿದ್ದಂತೆ, ಸ್ಪಿನ್ನರ್‌ಗಳಿಗೆ ಪಿಚ್‌ ನೆರವಾಗುವ ಸಾಧ್ಯತೆ ಇದೆ.

IND vs NZ: ಇಂದಿನ ಪಂದ್ಯದಲ್ಲಿ ವಿಶೇಷ ದಾಖಲೆ ಬರೆಯಲಿದ್ದಾರೆ ಶಮಿ; ಸಿರಾಜ್​ಗೂ ಇದೆ ಅವಕಾಶ

ಟಾಸ್ ಗೆದ್ದವನೇ ಬಾಸ್

ಟಾಸ್ ಗೆದ್ದ ನಂತರ, ತಂಡಗಳು ಸಾಮಾನ್ಯವಾಗಿ ರಾಯ್‌ಪುರದಲ್ಲಿ ಮೊದಲು ಬೌಲಿಂಗ್ ಮಾಡುವುದು ವಾಡಿಕೆ. ಏಕೆಂದರೆ ನಂತರ ಬೌಲಿಂಗ್ ಮಾಡುವ ತಂಡ ತೊಂದರೆಗೀಡಾಗುವುದನ್ನು ಈ ಹಿಂದೆ ನಡೆದ ಪಂದ್ಯಗಳಲ್ಲಿ ನೋಡಲಾಗಿದೆ. ಐಪಿಎಲ್‌ನಲ್ಲಿ ಇಲ್ಲಿ 6 ಪಂದ್ಯಗಳು ನಡೆದಿದ್ದು, ಇದರಲ್ಲಿ 4 ಪಂದ್ಯಗಳಲ್ಲಿ ಮೊದಲು ಬೌಲಿಂಗ್ ಮಾಡಿದ ತಂಡ ಗೆದ್ದಿದ್ದರೆ, ಇನ್ನ 2 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ.

ಟೀಮ್ ಇಂಡಿಯಾ ಏಕದಿನ ತಂಡ:

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

ನ್ಯೂಜಿಲೆಂಡ್ ತಂಡ

ಟಾಮ್ ಲ್ಯಾಥಮ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್ನರ್

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:24 am, Sat, 21 January 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ