ಭಾರತ ಮತ್ತು ನ್ಯೂಜಿಲೆಂಡ್ (India Vs New Zealand) ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಇಂದು ರಾಯ್‌ಪುರದಲ್ಲಿ ನಡೆಯಲಿದೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಅಂತಾರಾಷ್ಟ್ರೀಯ ಪಂದ್ಯ ಇದಾಗಿದೆ. ಹೈದರಾಬಾದ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತ ಏಕದಿನ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಈಗ ರಾಯಪುರದಲ್ಲಿ ಸರಣಿಯನ್ನು ಸೀಲ್ ಮಾಡುವ ಪ್ರಯತ್ನ ಟೀಂ ಇಂಡಿಯಾ (Team India) ಪಾಳಯದಿಂದ ನಡೆಯಲಿದೆ. ಮತ್ತೊಂದೆಡೆ, ನ್ಯೂಜಿಲೆಂಡ್ ಕೂಡ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಲು ಪ್ರಯತ್ನಿಸಲಿದೆ. ಹೀಗಾಗಿ ಇಂದಿನ ಪಂದ್ಯ ರೋಚಕತೆಯಿಂದ ಕೂಡಿದ್ದು, ಎರಡೂ ತಂಡಗಳು ಗೆಲುವಿಗಾಗಿ ಹೋರಾಟ ನಸೆಸಬೇಕಾಗಿದೆ.
ಇನ್ನು ರಾಯ್‌ಪುರದ ಪಿಚ್ ಬಗ್ಗೆ ಮಾತನಾಡುವುದಾದರೆ, ಈ ಮೈದಾನದಲ್ಲಿ ಇದುವರೆಗೆ ಯಾವುದೇ ಅಂತಾರಾಷ್ಟ್ರೀಯ ಪಂದ್ಯ ನಡೆದಿಲ್ಲ. ಆದರೆ ಇಲ್ಲಿ ನಡೆದಿರುವ ಎಲ್ಲಾ ಐಪಿಎಲ್ ಪಂದ್ಯಗಳು ಮತ್ತು ದೇಶೀಯ ಪಂದ್ಯಗಳ ವರದಿಯನ್ನು ನೋಡಿದ ಬಳಿಕ, ಇಲ್ಲಿನ ಪಿಚ್ ಬ್ಯಾಟಿಂಗ್‌ಗೆ ಅನುಕೂಲಕರವಾಗಿರುವುದು ಕಂಡುಬಂದಿದೆ. ಅಲ್ಲದೆ ಇಲ್ಲಿನ ಪಿಚ್ನಲ್ಲಿ ವೇಗದ ಬೌಲರ್‌ಗಳು ಪರಿಣಾಮಕಾರಿಯಾಗುವುದು ಕಡಿಮೆ. ಆದರೂ ಚೆಂಡು ಹಳೆಯದಾಗುತ್ತಿದ್ದಂತೆ, ಸ್ಪಿನ್ನರ್‌ಗಳಿಗೆ ಪಿಚ್ ನೆರವಾಗುವ ಸಾಧ್ಯತೆ ಇದೆ.
IND vs NZ: ಇಂದಿನ ಪಂದ್ಯದಲ್ಲಿ ವಿಶೇಷ ದಾಖಲೆ ಬರೆಯಲಿದ್ದಾರೆ ಶಮಿ; ಸಿರಾಜ್ಗೂ ಇದೆ ಅವಕಾಶ
ಟಾಸ್ ಗೆದ್ದ ನಂತರ, ತಂಡಗಳು ಸಾಮಾನ್ಯವಾಗಿ ರಾಯ್‌ಪುರದಲ್ಲಿ ಮೊದಲು ಬೌಲಿಂಗ್ ಮಾಡುವುದು ವಾಡಿಕೆ. ಏಕೆಂದರೆ ನಂತರ ಬೌಲಿಂಗ್ ಮಾಡುವ ತಂಡ ತೊಂದರೆಗೀಡಾಗುವುದನ್ನು ಈ ಹಿಂದೆ ನಡೆದ ಪಂದ್ಯಗಳಲ್ಲಿ ನೋಡಲಾಗಿದೆ. ಐಪಿಎಲ್‌ನಲ್ಲಿ ಇಲ್ಲಿ 6 ಪಂದ್ಯಗಳು ನಡೆದಿದ್ದು, ಇದರಲ್ಲಿ 4 ಪಂದ್ಯಗಳಲ್ಲಿ ಮೊದಲು ಬೌಲಿಂಗ್ ಮಾಡಿದ ತಂಡ ಗೆದ್ದಿದ್ದರೆ, ಇನ್ನ 2 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ.
ಟೀಮ್ ಇಂಡಿಯಾ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
ಟಾಮ್ ಲ್ಯಾಥಮ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್ನರ್
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:24 am, Sat, 21 January 23