IND vs NZ: ಭಾರತ- ನ್ಯೂಜಿಲೆಂಡ್ ನಡುವೆ ಎರಡನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ?

India vs New Zealand 2nd T20: ಭಾರತ-ನ್ಯೂಜಿಲೆಂಡ್ ಎರಡನೇ ಟಿ20 ಪಂದ್ಯಕ್ಕೆ ಸಿದ್ಧತೆ ಜೋರಾಗಿದೆ. ಮೊದಲ ಪಂದ್ಯ ಗೆದ್ದ ಭಾರತ ಸರಣಿ ಮುನ್ನಡೆಸಲು ಕಾತರಿಸುತ್ತಿದೆ. ರಾಯ್‌ಪುರದಲ್ಲಿ ನಡೆಯುವ ಈ ಮಹತ್ವದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಉತ್ತಮ ಪ್ರದರ್ಶನ ನೀಡುವ ಒತ್ತಡದಲ್ಲಿದ್ದಾರೆ. ಜನವರಿ 23 ರಂದು ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರ ಲಭ್ಯ.

IND vs NZ: ಭಾರತ- ನ್ಯೂಜಿಲೆಂಡ್ ನಡುವೆ ಎರಡನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ?
Ind Vs Nz

Updated on: Jan 22, 2026 | 11:05 PM

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಟಿ20 ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ ಗೆಲುವಿನ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಭಾರತ ತಂಡ, ಶುಕ್ರವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧ ಎರಡನೇ ಟಿ20 ಪಂದ್ಯವನ್ನು ಗೆಲುವ ಮೂಲಕ ತನ್ನ ಅಜೇಯ ಓಟವನ್ನು ಮುಂದುವರೆಸುವ ಗುರಿ ಹೊಂದಿದೆ. ಆದಾಗ್ಯೂ ಮೊದಲ ಪಂದ್ಯದಲ್ಲಿ ರನ್ ಗಳಿಸುವಲ್ಲಿ ಎಡವಿದ್ದ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಅವರ ಪ್ರದರ್ಶನದ ಮೇಲೆ ಮೇಲೆ ಎಲ್ಲರ ಕಣ್ಣುಗಳಿರಲಿವೆ. ಇವರ ಜೊತೆಗೆ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಒಂದು ದೊಡ್ಡ ಇನ್ನಿಂಗ್ಸ್ ಆಡುವ ಒತ್ತಡದಲ್ಲಿದ್ದಾರೆ. ಉಳಿದಂತೆ ತಂಡದ ಇತರ ಆಟಗಾರರು ತಮ್ಮ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿರುವುದರಿಂದ ಟಿ20 ವಿಶ್ವಕಪ್​ಗೂ ಮೊದಲು ಆಡಳಿತ ಮಂಡಳಿಗೆ ಕೊಂಚ ಸಮಾಧಾನ ತಂದಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಶುಕ್ರವಾರ, ಜನವರಿ 23 ರಂದು ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಸಂಜೆ 7:00 ಗಂಟೆಗೆ ಪ್ರಾರಂಭವಾಗುತ್ತದೆ. ಟಾಸ್ ಅದಕ್ಕೂ ಅರ್ಧ ಗಂಟೆ ಮೊದಲು, ಅಂದರೆ ಸಂಜೆ 6:30 ಕ್ಕೆ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ಪ್ರಸಾರ ಮಾಡುತ್ತಿದೆ ಮತ್ತು ವೀಕ್ಷಕರು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ಪಂದ್ಯಗಳನ್ನು ವೀಕ್ಷಿಸಲು ಸಾಧ್ಯವಾಗುತ್ತದೆ. ಹೆಚ್ಚುವರಿಯಾಗಿ, ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಪಂದ್ಯಗಳನ್ನು ನೇರ ಪ್ರಸಾರ ಮಾಡಲಾಗುತ್ತದೆ.

ಭಾರತದ ಸಂಭಾವ್ಯ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ