ಟಾಸ್ ಗೆದ್ದ ಟೀಂ ಇಂಡಿಯಾ; ಸಿರಾಜ್‌ಗೆ ಮತ್ತೆ ಕೊಕ್, ಗುರ್‌ನೂರ್ ಬ್ರಾರ್‌ಗೆ ಪಾದಾರ್ಪಣೆ ಭಾಗ್ಯ
ಭಾರತ vs ನ್ಯೂಜಿಲೆಂಡ್ 2ನೇ ಟೆಸ್ಟ್ ಕ್ರೈಸ್ಟ್‌ಚರ್ಚ್‌ನಲ್ಲಿ ಆರಂಭವಾಗಿದೆ. ಶುಭ್‌ಮನ್ ಗಿಲ್ ಟಾಸ್ ಗೆದ್ದು ಬೌಲಿಂಗ್ ಆಯ್ದರು. ಯುವ ವೇಗಿ ಗುರ್‌ನೂರ್ ಬ್ರಾರ್ ಪದಾರ್ಪಣೆ ಮಾಡಿದ್ದು, ಸಿರಾಜ್‌ಗೆ ಸ್ಥಾನ ಸಿಕ್ಕಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಲು ಈ ಪಂದ್ಯದ ಗೆಲುವು ಭಾರತಕ್ಕೆ ನಿರ್ಣಾಯಕವಾಗಿದೆ. ಸರಣಿ ಮುನ್ನಡೆಗೆ ಉಭಯ ತಂಡಗಳು ಹೋರಾಡಲಿವೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಕ್ರೈಸ್ಟ್‌ಚರ್ಚ್‌ನಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್‌ಮನ್ ಗಿಲ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಭಾರತ ತಂಡದಲ್ಲಿ ಮತ್ತೊಮ್ಮೆ ವೇಗಿ ಮೊಹಮ್ಮದ್ ಸಿರಾಜ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಕ್ಕಿಲ್ಲ. ಮತ್ತೊಂದೆಡೆ, ಯುವ ವೇಗಿ ಗುರ್‌ನೂರ್ ಬ್ರಾರ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.
ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದ್ದರಿಂದ ಉಭಯ ತಂಡಗಳು ಸರಣಿಯಲ್ಲಿ ಮುನ್ನಡೆ ಸಾಧಿಸಲು ಈ ಪಂದ್ಯದಲ್ಲಿ ಗೆಲುವಿನ ನಿರೀಕ್ಷೆಯಲ್ಲಿವೆ. ಹೀಗಾಗಿ ಎರಡನೇ ಟೆಸ್ಟ್‌ನಲ್ಲಿ ಉತ್ತಮ ಕ್ರಿಕೆಟ್‌ಗೆ ಪೂರಕವಾದ ಪಿಚ್ ಸಿಗುವ ವಿಶ್ವಾಸದಲ್ಲಿವೆ. ಇದರ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವ ಅವಕಾಶವನ್ನು ಬಲಪಡಿಸಿಕೊಳ್ಳುವುದು ಕೂಡ ಭಾರತ ತಂಡದ ಪ್ರಮುಖ ಗುರಿಯಾಗಿದೆ.
Test Cap No. 321
Gurnoor Brar is all set to make his debut in whites for #TeamIndia
He gets his Test cap from @Jaspritbumrah93 🤝
#NZvIND https://t.co/9AIeizgFm8
— BCCI (@BCCI) November 26, 2026
ಟಾಸ್ ಗೆದ್ದ ಟೀಂ ಇಂಡಿಯಾ
ಟಾಸ್ ವೇಳೆ ಮಾತನಾಡಿದ ನಾಯಕ ಶುಭ್‌ಮನ್ ಗಿಲ್, ‘ನಾವು ಮೊದಲು ಬೌಲಿಂಗ್ ಮಾಡಲಿದ್ದೇವೆ. ಆಟಗಾರರು ಉತ್ತಮ ಲಯದಲ್ಲಿದ್ದು, ಪಂದ್ಯಕ್ಕೆ ಸಿದ್ಧರಾಗಿದ್ದಾರೆ. ವೆಲ್ಲಿಂಗ್ಟನ್ ಟೆಸ್ಟ್‌ನಲ್ಲಿ ನಾವು ಬಹುತೇಕ ಎಲ್ಲ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ನೀಡಿದ್ದೆವು. ನಮ್ಮ ಯೋಜನೆಗಳನ್ನು ಸಮರ್ಥವಾಗಿ ಕಾರ್ಯಗತಗೊಳಿಸಿದ್ದೆವು. ಪ್ರಸಿದ್ಧ್ ಕೃಷ್ಣ ಬದಲಿಗೆ ಗುರ್‌ನೂರ್ ಬ್ರಾರ್ ತಂಡದಲ್ಲಿ ಸ್ಥಾನ ಪಡೆದಿದ್ದು, ಅವರು ಟೆಸ್ಟ್‌ಗೆ ಪದಾರ್ಪಣೆ ಮಾಡಲಿದ್ದಾರೆ’ ಎಂದು ತಿಳಿಸಿದರು.
One final Toss in the series and Captain @ShubmanGill calls it right!
We’re bowling first.
A look at our Playing XI for the 2nd Test
Live – https://t.co/6iCwvH4Zap #NzvIND https://t.co/mILmxXKhC5
— BCCI (@BCCI) November 26, 2026
ಉಭಯ ತಂಡಗಳ ಆಡುವ ಹನ್ನೊಂದರ ಬಳಗ
ಟೀಂ ಇಂಡಿಯಾ: ಕೆ.ಎಲ್. ರಾಹುಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಶುಭ್‌ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್, ಆಕಾಶ್ ದೀಪ್, ಅಂಶುಲ್ ಕಾಂಬೋಜ್, ಗುರ್‌ನೂರ್ ಬ್ರಾರ್, ಜಸ್ಪ್ರೀತ್ ಬುಮ್ರಾ.
ನ್ಯೂಜಿಲೆಂಡ್ ತಂಡ: ಟಾಮ್ ಲೇಥಮ್ (ನಾಯಕ), ಡೆವೊನ್ ಕಾನ್ವೆ, ಹೆನ್ರಿ ನಿಕೋಲ್ಸ್, ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ನಾಥನ್ ಸ್ಮಿತ್, ಕೈಲ್ ಜೇಮಿಸನ್, ಮ್ಯಾಟ್ ಹೆನ್ರಿ, ಜೇಕಬ್ ಡಫಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:31 am, Fri, 27 November 26




