AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಕೇವಲ 9 ದಿನಗಳಲ್ಲಿ ಮೂರನೇ ಶತಕ ಬಾರಿಸಿದ ಶುಭ್​ಮನ್ ಗಿಲ್..!

IND vs NZ: ಸತತ ಮೂರನೇ ಏಕದಿನ ಪಂದ್ಯದಲ್ಲೂ ನ್ಯೂಜಿಲೆಂಡ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಟೀಂ ಇಂಡಿಯಾದ ಮತ್ತೊಬ್ಬ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಮತ್ತೊಂದು ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ.

IND vs NZ: ಕೇವಲ 9 ದಿನಗಳಲ್ಲಿ ಮೂರನೇ ಶತಕ ಬಾರಿಸಿದ ಶುಭ್​ಮನ್ ಗಿಲ್..!
ಶುಭ್​ಮನ್ ಗಿಲ್
Follow us
TV9 Web
| Updated By: ಪೃಥ್ವಿಶಂಕರ

Updated on:Jan 24, 2023 | 4:31 PM

ಸತತ ಮೂರನೇ ಏಕದಿನ ಪಂದ್ಯದಲ್ಲೂ ನ್ಯೂಜಿಲೆಂಡ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಟೀಂ ಇಂಡಿಯಾದ (India Vs New Zealand) ಮತ್ತೊಬ್ಬ ಆರಂಭಿಕ ಆಟಗಾರ ಶುಭ್​ಮನ್ ಗಿಲ್ (Shubman Gill) ಮತ್ತೊಂದು ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ. ಇಂದೋರ್‌ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ತಮ್ಮ ಏಕದಿನ ವೃತ್ತಿ ಜೀವನದ ನಾಲ್ಕನೇ ಶತಕವನ್ನು ಗಿಲ್ ಪೂರೈಸಿದ್ದಾರೆ. ಕಳೆದ 9 ದಿನಗಳಲ್ಲಿ ಗಿಲ್ ಅವರ ಮೂರನೇ ದೊಡ್ಡ ಇನ್ನಿಂಗ್ಸ್ ಇದಾಗಿದೆ. ಇದಕ್ಕೂ ಮೊದಲು ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 208 ರನ್ ಗಳಿಸಿದ್ದ ಗಿಲ್, ಅದಕ್ಕೂ ಮೊದಲು ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 116 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದರು. ಇಂದೋರ್‌ನಲ್ಲಿ ರೋಹಿತ್ ಶರ್ಮಾ (Rohit Sharma) ಜೊತೆಗೂಡಿ ಕಿವೀಸ್ ಬೌಲರ್‌ಗಳನ್ನು ಛಿದ್ರಗೊಳಿಸಿದ ಗಿಲ್ ದಾಖಲೆಯ ಜೊತೆಯಾಟವನ್ನು ಹಂಚಿಕೊಂಡರು.

ಬೌಂಡರಿ ಬಾರಿಸುವ ಮೂಲಕ ಶತಕ

26ನೇ ಓವರ್​ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಶತಕ ಪೂರೈಸಿದ ಗಿಲ್, ಒಟ್ಟಾರೆ 72 ಎಸೆತಗಳಲ್ಲಿ 13 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ, 100 ರನ್ ಪೂರೈಸಿದರು. ಅಲ್ಲದೆ 3 ಏಕದಿನ ಸರಣಿಯಲ್ಲಿ 2 ಶತಕ ಸಿಡಿಸಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಶುಭ್​ಮನ್ ಗಿಲ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಕೂಡ ಈ ಸಾಧನೆ ಮಾಡಿದ್ದಾರೆ. ಇಂದಿನ ಪಂದ್ಯದಲ್ಲಿ 112 ರನ್‌ಗಳ ಇನ್ನಿಂಗ್ಸ್ ಆಡಿದ ಗಿಲ್, 78 ಎಸೆತಗಳಲ್ಲಿ 13 ಬೌಂಡರಿ ಹಾಗೂ 5 ಸಿಕ್ಸರ್‌ಗಳನ್ನು ಸಿಡಿಸಿ, ತಮ್ಮ ವಿಕೆಟ್ ಒಪ್ಪಿಸಿದರು. ಈ ಶತಕದೊಂದಿಗೆ ಗಿಲ್, ಈ ವರ್ಷ 3 ಅಂತಾರಾಷ್ಟ್ರೀಯ ಶತಕ ಬಾರಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

IND vs NZ: ಬರೋಬ್ಬರಿ 1100 ದಿನಗಳ ಬಳಿಕ ಶತಕದ ಬರ ನೀಗಿಸಿಕೊಂಡ ರೋಹಿತ್ ಶರ್ಮಾ..!

ಬಾಬರ್ ಅಜಂ ದಾಖಲೆ ಸರಿಗಟ್ಟಿದ ಗಿಲ್

ಈ ಹಿಂದೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬಾಬರ್ ಅಜಮ್ ಅವರ ದಾಖಲೆಯನ್ನು ಈ ಶತಕದೊಂದಿಗೆ ಗಿಲ್ ಸರಿಗಟ್ಟಿದ್ದಾರೆ. ಈ ಸರಣಿಯಲ್ಲಿ ಗಿಲ್ ಒಟ್ಟು 360 ರನ್ ಗಳಿಸಿದರೆ, 2016 ರಲ್ಲಿ, ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಬಾಬರ್ ಅದೇ ಸಂಖ್ಯೆಯ ರನ್ಗಳನ್ನು ಬಾರಿಸಿದ್ದರು. ಅಲ್ಲದೆ ಕೇವಲ 21 ಇನ್ನಿಂಗ್ಸ್​ಗಳಲ್ಲಿ ವೇಗವಾಗಿ 4 ಏಕದಿನ ಶತಕಗಳನ್ನು ಗಳಿಸಿದ ಭಾರತದ ಮೊದಲ ಆಟಗಾರ ಹಾಗೂ ವಿಶ್ವದ ನಾಲ್ಕನೇ ಆಟಗಾರ ಎಂಬ ದಾಖಲೆಯೂ ಗಿಲ್ ಮೂಡಿ ಸೇರಿದೆ. ಮತ್ತೊಂದೆಡೆ, ಶಿಖರ್ ಧವನ್ ಈ ಹಿಂದೆ ಕೇವಲ 24 ಇನ್ನಿಂಗ್ಸ್​ಗಳಲ್ಲಿ 4 ಏಕದಿನ ಶತಕ ಸಿಡಿಸಿ ಭಾರತದ ಪರ ವೇಗಿವಾಗಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Tue, 24 January 23

ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP