IND vs NZ 3rd T20 Live Sreaming: ಭಾರತ- ನ್ಯೂಜಿಲೆಂಡ್ ಮೂರನೇ ಟಿ20 ಪಂದ್ಯ ಯಾವಾಗ?, ಎಷ್ಟು ಗಂಟೆಗೆ?, ಎಲ್ಲಿ?: ಇಲ್ಲಿದೆ ಮಾಹಿತಿ
India vs New Zealand Live Streaming: ಭಾನುವಾರ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ ತಂಡ 65 ರನ್ಗಳ ಭರ್ಜರಿ ಗೆಲುವು ಸಾಧಿಸಿ 1-0 ಮುನ್ನಡೆ ಪಡೆದುಕೊಂಡಿದೆ. ಹಾಗಾದರೆ ಭಾರತ- ನ್ಯೂಜಿಲೆಂಡ್ ಮೂರನೇ ಟಿ20 ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ?.
ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಣ ಟಿ20 ಸರಣಿ ರೋಚಕ ಘಟ್ಟದಲ್ಲಿದೆ. ಮೂರು ಪಂದ್ಯಗಳ ಟಿ20 ಸರಣಿ ಪೈಕಿ ಮೊದಲ ಮ್ಯಾಚ್ ಮಳೆಗೆ ಆಹುತಿಯಾಯಿತು. ಭಾನುವಾರ ನಡೆದ ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ 65 ರನ್ಗಳ ಭರ್ಜರಿ ಗೆಲುವು ಸಾಧಿಸಿ 1-0 ಮುನ್ನಡೆ ಪಡೆದುಕೊಂಡಿದೆ. ಹೀಗಾಗಿ ಕೊನೆಯ ಮೂರನೇ ಟಿ20 ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಇದರಲ್ಲಿ ಭಾರತ ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ನ್ಯೂಜಿಲೆಂಡ್ ಗೆದ್ದರೆ ಸರಣಿ ಸಮಬಲವಾಗಲಿದೆ. ಎಲ್ಲಾದರು ಮಳೆ ಬಂದು ಪಂದ್ಯ ರದ್ದಾದರೂ ಹಾರ್ದಿಕ್ ಪಾಂಡ್ಯ (Hardik Pandya) ಪಡೆಗೆ ಟ್ರೋಫಿ ಒಲಿಯಲಿದೆ. ನಾಯಕ ಕೇನ್ ವಿಲಿಯಮ್ಸನ್ (Kane Williamson) ಅವರೇ ತೃತೀಯ ಟಿ20 ಪಂದ್ಯಕ್ಕೆ ಅಲಭ್ಯರಾಗಿರುವುದು ಕಿವೀಸ್ ಪಡೆಗೆ ದೊಡ್ಡ ಹಿನ್ನಡೆ. ಹಾಗಾದರೆ ಮೂರನೇ ಟಿ20 ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ? ಎಂಬ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ತೃತೀಯ ಟಿ20 ಪಂದ್ಯ ಮಂಗಳವಾರ, ನವೆಂಬರ್ 22 ರಂದು ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಪಂದ್ಯವು ನೆಪಯರ್ನ ಮಕ್ಲೆನ್ ಪಾರ್ಕ್ನಲ್ಲಿ ಆಯೋಜಿಸಲಾಗಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯ ಯಾವಾಗ ಆರಂಭವಾಗುತ್ತದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಪಂದ್ಯ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ. ಬೆಳಗ್ಗೆ 11.30ಕ್ಕೆ ಟಾಸ್ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯ ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದ ನೇರ ಪ್ರಸಾರವು ಡಿಡಿ ಸ್ಪೋರ್ಟ್ಸ್‌ನಲ್ಲಿ ಮಾತ್ರ ಇರುತ್ತದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯದ ಲೈವ್ ಸ್ಟ್ರೀಮಿಂಗ್ ಅಮೆಜಾನ್ ಪ್ರೈಮ್‌ನಲ್ಲಿರಲಿದೆ.
ಕೇನ್ ವಿಲಿಯಮ್ಸನ್ ಅಲಭ್ಯ:
ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅಂತಿಮ ಮೂರನೇ ಟಿ20 ಪಂದ್ಯದಿಂದ ಹೊರಬಿದ್ದಿದ್ದಾರೆ. ಪೂರ್ವ ನಿಯೋಜಿತ ವೈದ್ಯಕೀಯ ತಪಾಸಣೆ ಇರುವ ಕಾರಣ ತೃತೀಯ ಟಿ20 ಯಲ್ಲಿ ಕೇನ್ ಕಣಕ್ಕಿಳಿಯುತ್ತಿಲ್ಲ ಎಂದು ಸೋಮವಾರ ನ್ಯೂಜಿಲೆಂಡ್ ಕ್ರಿಕೆಟ್ (NZC) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇವರ ಬದಲು ಆಕ್ಲೆಂಡ್ ಏಸಸ್ ಬ್ಯಾಟ್ಸ್‌ಮನ್ ಮಾರ್ಕ್ ಚಾಪ್‌ಮನ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಏಕದಿನ ಪಂದ್ಯ ಆರಂಭವಾಗುವ ಹೊತ್ತಿಗೆ ವಿಲಿಯಮ್ಸನ್ ತಂಡವನ್ನು ಸೇರಿಕೊಳ್ಳಲಿದ್ದಾರಂತೆ. ಕೇನ್ ಅಲಭ್ಯತೆಯಲ್ಲಿ ನ್ಯೂಜಿಲೆಂಡ್ ತಂಡವನ್ನು ಮೂರನೇ ಟಿ20 ಪಂದ್ಯದಲ್ಲಿ ಟಿಮ್ ಸೌಥೀ ನಾಯಕನಾಗಿ ಮುನ್ನಡೆಸುತ್ತಿದ್ದಾರೆ.
ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ/ ವಿಕೆಟ್‌ಕೀಪರ್), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್.
ನ್ಯೂಜಿಲೆಂಡ್ ತಂಡ: ಟಿಮ್ ಸೌಥೀ (ನಾಯಕ), ಮಾರ್ಕ್ ಚಾಪ್‌ಮನ್, ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಲಾಕಿ ಫರ್ಗುಸನ್, ಡ್ಯಾರಿಲ್ ಮಿಚೆಲ್, ಆಡಮ್ ಮಿಲ್ನೆ, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಬ್ಲೇರ್ ಟಿಕ್ನರ್.