AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಕಿವೀಸ್ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 1 ಬದಲಾವಣೆ

India vs New Zealand T20: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿರುವ ಭಾರತ ಈಗಾಗಲೇ ಸರಣಿ ಗೆದ್ದಿದೆ. ಟಾಸ್ ಗೆದ್ದ ನಾಯಕ ಸೂರ್ಯಕುಮಾರ್ ಯಾದವ್ ಇಬ್ಬನಿ ಕಾರಣದಿಂದ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಶಾನ್ ಕಿಶನ್ ಗಾಯಗೊಂಡಿದ್ದು, ಅವರ ಸ್ಥಾನಕ್ಕೆ ಅರ್ಷದೀಪ್ ಸಿಂಗ್ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಎರಡೂ ತಂಡಗಳ ಆಡುವ ಹನ್ನೊಂದರ ಬಳಗ ಘೋಷಿಸಲಾಗಿದೆ.

IND vs NZ: ಕಿವೀಸ್ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 1 ಬದಲಾವಣೆ
Ind Vs Nz
ಪೃಥ್ವಿಶಂಕರ
|

Updated on:Jan 28, 2026 | 6:42 PM

Share

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಎರಡೂ ತಂಡಗಳು ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪರಸ್ಪರ ಮುಖಾಮುಖಿಯಾಗಿವೆ. ಟೀಂ ಇಂಡಿಯಾ ಪ್ರಸ್ತುತ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದ್ದು ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಿದೆ. ಇತ್ತ ಸರಣಿ ಸೋತಿರುವ ನ್ಯೂಜಿಲೆಂಡ್ ಉಳಿದೆರಡು ಪಂದ್ಯಗಳನ್ನು ಗೆದ್ದು ಸೋಲಿನ ಅಂತರವನ್ನು ಕಡಿಮೆ ಮಾಡಲು ಯತ್ನಿಸಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ಎಂದಿನಂತೆ ಮೊದಲು ಬ್ಯಾಟಿಂಗ್‌ ಮಾಡಲಿದೆ.

ಟಾಸ್ ಗೆದ್ದ ಟೀಂ ಇಂಡಿಯಾ

ವಿಶಾಖಪಟ್ಟಣದಲ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವುದರಿಂದ ಮೊದಲು ಬೌಲಿಂಗ್ ಮಾಡುತ್ತಿರುವುದಾಗಿ ಸೂರ್ಯ ಹೇಳಿದರು. ಟಾಸ್ ಬಳಿಕ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಟೀಂ ಇಂಡಿಯಾದಲ್ಲಿ 1 ಬದಲಾವಣೆ ಮಾಡಲಾಗಿದೆ. ಸ್ಟಾರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್​ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಅವರನ್ನು ಈ ಪಂದ್ಯದಿಂದ ಹೊರಗಿಡಲಾಗಿದೆ. ಅವರ ಬದಲಿಗೆ ಬೌಲರ್ ಅರ್ಷದೀಪ್​ ಸಿಂಗ್​ಗೆ ಆಡುವ ಅವಕಾಶ ನೀಡಲಾಗಿದೆ. ಇತ್ತ ನ್ಯೂಜಿಲೆಂಡ್ ತಂಡದಲ್ಲೂ 1 ಬದಲಾವಣೆ ಮಾಡಲಾಗಿದೆ.

ಉಭಯ ತಂಡಗಳು

ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜಕಾರಿ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಜಾಕೋಬ್ ಡಫಿ.

ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Wed, 28 January 26