IND vs NZ: ಬೆಂಗಳೂರು ಟೆಸ್ಟ್ ಸೋಲು; ಟೀಂ ಇಂಡಿಯಾಗೆ ಶತಕ ವೀರನ ಆಗಮನ

IND vs NZ: ಬೆಂಗಳೂರು ಟೆಸ್ಟ್ ಸೋತಿರುವ ಟೀಂ ಇಂಡಿಯಾ ಇದೀಗ ಪುಣೆಯಲ್ಲಿ ನಡೆಯಲ್ಲಿರುವ ಎರಡನೇ ಟೆಸ್ಟ್​ ಪಂದ್ಯಕ್ಕೆ ತನ್ನ ತಯಾರಿ ಆರಂಭಿಸಿದೆ. ಅದರಂತೆ ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ರಣಿಜಿ ಟ್ರೋಫಿಯಲ್ಲಿ ದೆಹಲಿ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದ ಟೀಂ ಇಂಡಿಯಾದ ಯುವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಎರಡನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಆಯ್ಕೆ ಮಾಡಿದೆ.

IND vs NZ: ಬೆಂಗಳೂರು ಟೆಸ್ಟ್ ಸೋಲು; ಟೀಂ ಇಂಡಿಯಾಗೆ ಶತಕ ವೀರನ ಆಗಮನ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Oct 20, 2024 | 6:23 PM

ನ್ಯೂಜಿಲೆಂಡ್ ವಿರುದ್ಧ ಬೆಂಗಳೂರು ಟೆಸ್ಟ್ ಸೋತಿರುವ ಟೀಂ ಇಂಡಿಯಾ ಇದೀಗ ಪುಣೆಯಲ್ಲಿ ನಡೆಯಲ್ಲಿರುವ ಎರಡನೇ ಟೆಸ್ಟ್​ ಪಂದ್ಯಕ್ಕೆ ತನ್ನ ತಯಾರಿ ಆರಂಭಿಸಿದೆ. ಅದರಂತೆ ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ರಣಿಜಿ ಟ್ರೋಫಿಯಲ್ಲಿ ದೆಹಲಿ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದ ಟೀಂ ಇಂಡಿಯಾದ ಯುವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಉಳಿದಿರುವ ಎರಡನೇ ಮತ್ತು ಮೂರನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಆಯ್ಕೆ ಮಾಡಿದೆ. ಇದರರ್ಥ ಪುಣೆ ಟೆಸ್ಟ್​ಗೆ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಮಾಡುವ ಸೂಚನೆಯನ್ನು ಬಿಸಿಸಿಐ ನೀಡಿದೆ. ಸುಂದರ್ ಆಗಮನದಿಂದಾಗಿ ಆರ್ ಅಶ್ವಿನ್ ತಂಡದಿಂದ ಹೊರನಡೆಯುವ ಸಾಧ್ಯತೆಗಳಿವೆ.

ಸುಂದರ್​ಗೆ ಟೀಂ ಇಂಡಿಯಾದಿಂದ ಬುಲಾವ್

ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಭಾರತೀಯ ಹಿರಿಯ ಆಯ್ಕೆ ಸಮಿತಿಯು ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ನ್ಯೂಜಿಲೆಂಡ್ ವಿರುದ್ಧ ಉಳಿದಿರುವ ಇನ್ನೇರಡು ಟೆಸ್ಟ್ ಪಂದ್ಯಗಳಿಗೆ ತಂಡದಲ್ಲಿ ಆಯ್ಕೆ ಮಾಡಿದ್ದು, ಪ್ರಸ್ತುತ ರಣಜಿಯಲ್ಲಿ ನಿರತರಾಗಿರುವ ಸುಂದರ್ ಇಷ್ಟರಲ್ಲೇ ಟೀಂ ಇಂಡಿಯಾವನ್ನು ಪುಣೆಯಲ್ಲಿ ಕೂಡಿಕೊಳ್ಳಲಿದ್ದಾರೆ ಎಂದಿದೆ.

ವಾಷಿಂಗ್ಟನ್ ಸುಂದರ್ 2021 ರಲ್ಲಿ ಟೀಂ ಇಂಡಿಯಾ ಪರ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಅಂದರೆ ಅವರು ಬಹಳ ದಿನಗಳ ನಂತರ ಭಾರತ ಟೆಸ್ಟ್ ತಂಡದಲ್ಲಿ ಪುನರಾಗಮನ ಮಾಡಲಿದ್ದಾರೆ. ಸುಂದರ್ ಇದುವರೆಗೆ ಟೀಂ ಇಂಡಿಯಾ ಪರ 4 ಟೆಸ್ಟ್ ಪಂದ್ಯಗಳನ್ನಾಡಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು ಆಡಿರುವ ಆರು ಇನ್ನಿಂಗ್ಸ್‌ಗಳಲ್ಲಿ ಮೂರು ಅರ್ಧ ಶತಕ ಸೇರಿದಂತೆ 66.25 ಸರಾಸರಿಯಲ್ಲಿ 265 ರನ್ ಕಲೆಹಾಕಿದ್ದಾರೆ. ಇದಲ್ಲದೇ 6 ವಿಕೆಟ್ ಕೂಡ ಕಬಳಿಸಿದ್ದಾರೆ.

ರಣಜಿ ಟ್ರೋಫಿಯಲ್ಲಿ ಡೆಲ್ಲಿ ವಿರುದ್ಧ ಶತಕ

ವಾಷಿಂಗ್ಟನ್ ಸುಂದರ್ ಪ್ರಸ್ತುತ ರಣಜಿ ಟ್ರೋಫಿಯ ಎಲೈಟ್ ಗ್ರೂಪ್ ಡಿ ನಲ್ಲಿ ತಮಿಳುನಾಡು ಮತ್ತು ದೆಹಲಿ ತಂಡಗಳ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಆಡುತ್ತಿದ್ದಾರೆ. ವಾಷಿಂಗ್ಟನ್ ಸುಂದರ್ ಈ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಶತಕ ಸಿಡಿಸಿದ್ದರು. ಕಳೆದ 7 ವರ್ಷಗಳಲ್ಲಿ ಇದು ಅವರ ಮೊದಲ ಪ್ರಥಮ ದರ್ಜೆ ಶತಕವಾಗಿದೆ. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಅವರು 269 ಎಸೆತಗಳಲ್ಲಿ 19 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 152 ರನ್ ಬಾರಿಸಿದಲ್ಲದೆ, ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಸುಂದರ್ ಎರಡು ವಿಕೆಟ್ ಕೂಡ ಪಡೆದಿದ್ದಾರೆ.

ಸುಂದರ್ ವೃತ್ತಿಜೀವನ

ವಾಷಿಂಗ್ಟನ್ ಸುಂದರ್ ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಆಡುವ ಅವಕಾಶ ಪಡೆದಿದ್ದರು. ಇದಕ್ಕೂ ಮುನ್ನ ಅವರು ಶ್ರೀಲಂಕಾ ಪ್ರವಾಸದಲ್ಲಿ ಏಕದಿನ ತಂಡದ ಭಾಗವಾಗಿದ್ದರು. ವಾಷಿಂಗ್ಟನ್ ಸುಂದರ್ ಇದುವರೆಗೆ ಟೀಂ ಇಂಡಿಯಾ ಪರ 22 ಏಕದಿನ ಹಾಗೂ 52 ಟಿ20 ಪಂದ್ಯಗಳನ್ನು ಆಡಿದ್ದಾರೆ. ಏಕದಿನದಲ್ಲಿ ಅವರು 23 ವಿಕೆಟ್‌ಗಳನ್ನು ಕಬಳಿಸಿದ್ದು, 315 ರನ್‌ಗಳನ್ನು ಸಹ ಬಾರಿಸಿದ್ದಾರೆ. ಮತ್ತೊಂದೆಡೆ, ಟಿ20ಯಲ್ಲಿ, ವಾಷಿಂಗ್ಟನ್ ಸುಂದರ್ ಇದುವರೆಗೆ ಟೀಂ ಇಂಡಿಯಾ ಪರ 47 ವಿಕೆಟ್‌ಗಳನ್ನು ಕಬಳಿಸಿದ್ದು, ಬ್ಯಾಟಿಂಗ್‌ನಲ್ಲಿ 161 ರನ್‌ ಸಹ ಸಿಡಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:18 pm, Sun, 20 October 24

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ