ಟಾಸ್ ಗೆದ್ದವರೇ ಬಾಸ್: ಆದರೆ 15 ಓವರ್​ಗಳ ಬಳಿಕ ಪಂದ್ಯದ ಚಿತ್ರಣ ಬದಲಿಸಬಹುದು..!

India vs New Zealand: ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸುವ ತಂಡಗಳು ಗೆಲ್ಲಬೇಕಿದ್ದರೆ ತನ್ನ ರಣತಂತ್ರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕಿರುವುದು ಅನಿವಾರ್ಯ. ಏಕೆಂದರೆ ಈ ಮೈದಾನದಲ್ಲಿ ಮೊದಲು ಬ್ಯಾಟ್​ ಮಾಡಿದ ತಂಡವು ಪವರ್​ಪ್ಲೇನಲ್ಲಿ ಒಟ್ಟು 209 ರನ್ಸ್ ಕಲೆಹಾಕಿದೆ. ಈ ವೇಳೆ 5 ವಿಕೆಟ್​ಗಳನ್ನು ಕಬಳಿಸಲಷ್ಟೇ ಬೌಲರ್​ಗಳು ಯಶಸ್ವಿಯಾಗಿದ್ದಾರೆ.

ಟಾಸ್ ಗೆದ್ದವರೇ ಬಾಸ್: ಆದರೆ 15 ಓವರ್​ಗಳ ಬಳಿಕ ಪಂದ್ಯದ ಚಿತ್ರಣ ಬದಲಿಸಬಹುದು..!
India vs New Zealand
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 14, 2023 | 5:58 PM

ಏಕದಿನ ವಿಶ್ವಕಪ್​ನ ನಾಕೌಟ್ ಪಂದ್ಯಕ್ಕೆ ಅಖಾಡ ಸಿದ್ಧವಾಗಿದೆ. ಬುಧವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತ-ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇಲ್ಲಿ ಉಭಯ ತಂಡಗಳು ಸಮಬಲ ಹೊಂದಿದ್ದರೂ, ಗೆಲುವಿನಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಏಕೆಂದರೆ ಈ ಬಾರಿಯ ವಿಶ್ವಕಪ್​ನಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಒಟ್ಟು 4 ಪಂದ್ಯಗಳನ್ನಾಡಲಾಗಿದೆ. ಈ 4 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದ್ದು ಮೊದಲು ಬ್ಯಾಟ್ ಮಾಡಿದ ತಂಡ ಎಂಬುದು ವಿಶೇಷ. ಅದರಲ್ಲೂ ಈ ನಾಲ್ಕು ಪಂದ್ಯಗಳಲ್ಲಿ ಮೂರು ಮ್ಯಾಚ್​ಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 300 ಕ್ಕೂ ಅಧಿಕ ರನ್ ಕಲೆಹಾಕಿದೆ.

ಇನ್ನು 4ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ 291 ರನ್​ ಕಲೆಹಾಕಿತ್ತು. ಅಂದರೆ ಇಲ್ಲಿ ಮೊದಲು ಬ್ಯಾಟ್ ಮಾಡುವ ತಂಡವು ಪಿಚ್​ನ ಸಂಪೂರ್ಣ ನೆರವು ಪಡೆಯಬಹುದು. ಏಕೆಂದರೆ ಮೊದಲು ಬ್ಯಾಟ್ ಮಾಡಿದ ತಂಡದ ಇಲ್ಲಿನ ಸರಾಸರಿ ಸ್ಕೋರ್ 357 ರನ್​ಗಳು.

ಇದಾಗ್ಯೂ ದ್ವಿತೀಯ ಇನಿಂಗ್ಸ್​ ಆಡುವ ತಂಡಕ್ಕೂ ಗೆಲ್ಲುವ ಅವಕಾಶವಿದೆ. ಇದಕ್ಕೆ ಸಾಕ್ಷಿಯೇ 91 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾ ತಂಡ ಅಫ್ಘಾನಿಸ್ತಾನ್ ವಿರುದ್ಧ 3 ವಿಕೆಟ್​ಗಳ ರೋಚಕ ಜಯ ಸಾಧಿಸಿರುವುದು.

ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸುವ ತಂಡಗಳು ಗೆಲ್ಲಬೇಕಿದ್ದರೆ ತನ್ನ ರಣತಂತ್ರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕಿರುವುದು ಅನಿವಾರ್ಯ. ಏಕೆಂದರೆ ಈ ಮೈದಾನದಲ್ಲಿ ಮೊದಲು ಬ್ಯಾಟ್​ ಮಾಡಿದ ತಂಡವು ಪವರ್​ಪ್ಲೇನಲ್ಲಿ ಒಟ್ಟು 209 ರನ್ಸ್ ಕಲೆಹಾಕಿದೆ. ಈ ವೇಳೆ 5 ವಿಕೆಟ್​ಗಳನ್ನು ಕಬಳಿಸಲಷ್ಟೇ ಬೌಲರ್​ಗಳು ಯಶಸ್ವಿಯಾಗಿದ್ದಾರೆ.

ಇದೇ ವೇಳೆ ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ತಂಡಗಳು ಪವರ್​ಪ್ಲೇನಲ್ಲಿ ಕಲೆಹಾಕಿದ್ದು 168 ರನ್​ಗಳು ಮಾತ್ರ. ಈ ವೇಳೆ 17 ವಿಕೆಟ್​ ಉರುಳಿಸುವಲ್ಲಿ ಬೌಲರ್​ಗಳು ಯಶಸ್ವಿಯಾಗಿದ್ದಾರೆ. ಅಂದರೆ ದ್ವಿತೀಯ ಇನಿಂಗ್ಸ್​ನ ಆರಂಭದಲ್ಲಿ ಸೀಮ್ ಬೌಲಿಂಗ್ ಚೆನ್ನಾಗಿ ನಡೆಯುತ್ತದೆ. ಹಾಗೆಯೇ  ಹೆಚ್ಚು ಸ್ವಿಂಗ್​ ಪಡೆಯುತ್ತದೆ. ಇದನ್ನೇ ಬಳಸಿಕೊಂಡು ದ್ವಿತೀಯ ಇನಿಂಗ್ಸ್​ನಲ್ಲಿ ಬೌಲರ್​ಗಳು ಯಶಸ್ಸು ಸಾಧಿಸಿದ್ದಾರೆ.

ಆದರೆ ದ್ವಿತೀಯ ಇನಿಂಗ್ಸ್​ನ 15 ಓವರ್​ಗಳ ಬಳಿಕ ಇದೇ ಪಿಚ್​ನಲ್ಲಿ ಬ್ಯಾಟಿಂಗ್ ಮಾಡುವುದು ಸುಲಭ. ಹೀಗಾಗಿಯೇ ವಾಂಖೆಡೆಯಲ್ಲಿ ಸೆಕೆಂಡ್ ಇನಿಂಗ್ಸ್ ಆಡುವ ತಂಡವು ಆರಂಭದಲ್ಲಿ ಟೆಸ್ಟ್ ಕ್ರಿಕೆಟ್ ಆಡುವುದು ಸೂಕ್ತ. ಒಂದು ಹಂತದವರೆಗೆ ವಿಕೆಟ್ ಬೀಳದಂತೆ ಕ್ರೀಸ್ ಕಚ್ಚಿ ನಿಂತರೆ ಆ ಬಳಿಕ ಪಂದ್ಯದ ಚಿತ್ರಣವನ್ನೇ ಬದಲಿಸಬಹುದು.

ಇದನ್ನೂ ಓದಿ: ಏಕದಿನ ವಿಶ್ವಕಪ್​ನಲ್ಲಿ ಹೊಸ ಇತಿಹಾಸ ಬರೆದ ರಚಿನ್ ರವೀಂದ್ರ

ಹೀಗಾಗಿ ವಾಂಖೆಡೆ ಮೈದಾನದಲ್ಲಿ ಟಾಸ್ ಸೋತರೂ ಗೆಲ್ಲುವ ಅವಕಾಶವಂತು ಎದುರಾಳಿ ತಂಡಕ್ಕಿದೆ. ಆದರೆ ಅದಕ್ಕಾಗಿ ಆರಂಭಿಕ ಓವರ್​ಗಳ ವೇಳೆ ತಾಳ್ಮೆಯುತ ಬ್ಯಾಟಿಂಗ್ ಪ್ರದರ್ಶಿಸಬೇಕಷ್ಟೇ. ಹೀಗೆ ತಾಳ್ಮೆಯುತ ಬ್ಯಾಟಿಂಗ್​ನೊಂದಿಗೆ 2011 ರಲ್ಲಿ ಇದೇ ಮೈದಾನದಲ್ಲಿ ಶ್ರೀಲಂಕಾ ನೀಡಿದ 275 ರನ್​ಗಳ ಗುರಿಯನ್ನು ಬೆನ್ನತ್ತಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿತ್ತು ಎಂಬುದು ಮರೆಯುವಂತಿಲ್ಲ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ