AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಡಗಿಸುವುದೇ ನಮ್ಮ ಗುರಿ: ಮಿಚೆಲ್ ಸ್ಯಾಂಟ್ನರ್

IND vs NZ: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅಂದರೆ ಮೂರನೇ ಬಾರಿ ವಿಶ್ವಕಪ್ ಗೆದ್ದ ವಿಶ್ವದ ಮೊದಲ ತಂಡ ಎನಿಸಿಕೊಳ್ಳಲಿದೆ.

ಸದ್ದಡಗಿಸುವುದೇ ನಮ್ಮ ಗುರಿ: ಮಿಚೆಲ್ ಸ್ಯಾಂಟ್ನರ್
Mitchell Santner
ಝಾಹಿರ್ ಯೂಸುಫ್
|

Updated on:Mar 08, 2026 | 8:34 AM

Share

T20 World Cup 2026: ಟಿ20 ವಿಶ್ವಕಪ್ ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ‘ಸದ್ದಡಗಿಸುವುದು’ ಸಖತ್ ಸದ್ದು ಮಾಡುತ್ತಿದೆ. ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ಪ್ರೇಕ್ಷಕರ ಸದ್ದಗಿಸುವುದೇ ನಮ್ಮ ಗುರಿ ಎಂದಿದ್ದಾರೆ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್.

ಟಿ20 ವಿಶ್ವಕಪ್​ ಫೈನಲ್ ಪಂದ್ಯದ ಪೂರ್ವಭಾವಿಯಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಚೆಲ್ ಸ್ಯಾಂಟ್ನರ್, 2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ಹೇಳಿದಂತೆಯೇ, ಲಕ್ಷಾಂತರ ಭಾರತೀಯ ಅಭಿಮಾನಿಗಳ ಮುಂದೆ ಆಡುವಾಗ “ಸ್ಟೇಡಿಯಂನಲ್ಲಿರುವ ಅಭಿಮಾನಿಗಳನ್ನು ಮೌನಗೊಳಿಸುವುದೇ ನಮ್ಮ ಗುರಿ” ಎಂದಿದ್ದಾರೆ.

ಈ ಮೂಲಕ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಅಭಿಮಾನಿಗಳ ಸದ್ದಡಗಿಸಿ ಟ್ರೋಫಿ ಗೆಲ್ಲುವ ವಿಶ್ವಾಸವನ್ನು ಸಹ ಮಿಚೆಲ್ ಸ್ಯಾಂಟ್ನರ್ ವ್ಯಕ್ತಪಡಿಸಿದ್ದಾರೆ.

ಇನ್ನು ಸ್ವದೇಶದಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಏಕೈಕ ಅವಕಾಶ ಭಾರತಕ್ಕಿದ್ದು, ಆ ಒತ್ತಡವನ್ನೇ ನಾವು ಲಾಭವಾಗಿ ಬಳಸಿಕೊಳ್ಳುತ್ತೇವೆ. ತವರಿನಲ್ಲಿ ಪಂದ್ಯವಾಡುತ್ತಿರುವ ಕಾರಣ ಟೀಮ್ ಇಂಡಿಯಾ ಒತ್ತಡದಲ್ಲಿದೆ. ಇದರ ಸಂಪೂರ್ಣ ಲಾಭ ಪಡೆದು ನಾವು ಮ್ಯಾಚ್ ಗೆಲ್ಲುತ್ತೇವೆ ಎಂದು ನ್ಯೂಝಿಲೆಂಡ್ ನಾಯಕ ಹೇಳಿದ್ದಾರೆ.

ಸೂರ್ಯಕುಮಾರ್ ಯಾದವ್ ತಿರುಗೇಟು:

ನ್ಯೂಝಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ನೀಡಿರುವ ಸದ್ದಡಗಿಸುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಭಾರತ ತಂಡದ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್, ಸಬ್ ಹೀ ಸೇಮ್ ಲೈನ್ ಚಿಪ್ಕಾ ರಹೇ ಹೈ. ಕುಚ್ ತೋ ನಯಾ ಬೋಲೋ” (ಎಲ್ಲರೂ ಈಗ ಅದೇ ಮಾತನ್ನು ಹೇಳುತ್ತಿದ್ದಾರೆ. ಏನಾದರೂ ಹೊಸದನ್ನು ಹೇಳಿ) ಎಂದು ತಿರುಗೇಟು ನೀಡಿದ್ದಾರೆ.

ಒಟ್ಟಿನಲ್ಲಿ ಫೈನಲ್ ಪಂದ್ಯಕ್ಕೂ ಮುನ್ನ ಸದ್ದಡಗಿಸುವ ಸವಾಲು ಹಾಕಿರುವ ನ್ಯೂಝಿಲೆಂಡ್ ತಂಡದ ನಾಯಕನನ್ನು ಟೀಮ್ ಇಂಡಿಯಾ ಸೈಲೆಂಟ್ ಮಾಡಲಿದೆಯಾ ಕಾದು ನೋಡಬೇಕಿದೆ.

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಇದನ್ನೂ ಓದಿ: ಮೂಢನಂಬಿಕೆಯೋ, ಕಾಕತಾಳೀಯವೊ… ಹೋಟೆಲ್ ಬದಲಿಸಿದ ಟೀಮ್ ಇಂಡಿಯಾ

ನ್ಯೂಝಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಜೇಕಬ್ ಡಫಿ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ಆಡಮ್ ಮಿಲ್ನ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ಸೈಫರ್ಟ್​, ಇಶ್ ಸೋಧಿ.

Published On - 8:34 am, Sun, 8 March 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ