IND vs NZ: 89 ವರ್ಷಗಳ ಭಾರತ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ವಿಶಿಷ್ಟ ದಾಖಲೆ ಬರೆದ ಟೀಂ ಇಂಡಿಯಾ ಆರಂಭಿಕರು!

IND vs NZ: 89 ವರ್ಷಗಳ ಭಾರತೀಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ನಡೆಯದಂತಹ ಘಟನೆ ಮುಂಬೈ ಟೆಸ್ಟ್‌ನಲ್ಲಿ ನಡೆದಿರುವುದು ಇದೇ ಮೊದಲು. ಭಾರತೀಯ ಆರಂಭಿಕರ ಈ ವಿಭಿನ್ನ ಶೈಲಿಯ ಲಿಂಕ್ ಅವರ ಬ್ಯಾಟ್‌ನಿಂದ ಹೊರಹೊಮ್ಮಿದ ಸಿಕ್ಸರ್‌ಗಳಿಗೆ ಸಂಬಂಧಿಸಿದೆ.

IND vs NZ: 89 ವರ್ಷಗಳ ಭಾರತ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ವಿಶಿಷ್ಟ ದಾಖಲೆ ಬರೆದ ಟೀಂ ಇಂಡಿಯಾ ಆರಂಭಿಕರು!
ಟೀಂ ಇಂಡಿಯಾ ಆರಂಭಿಕರು
Follow us
TV9 Web
| Updated By: ಪೃಥ್ವಿಶಂಕರ

Updated on: Dec 05, 2021 | 4:47 PM

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿದೆ. ಈ ಟೆಸ್ಟ್ ಪಂದ್ಯದಲ್ಲಿ ಭಾರತ ತನ್ನ ಹಿಡಿತವನ್ನು ಸಂಪೂರ್ಣವಾಗಿ ಬಿಗಿಗೊಳಿಸಿದೆ. ಆದರೆ, ಪಂದ್ಯದ ಫಲಿತಾಂಶ ಹೊರಬೀಳುವ ಮುನ್ನವೇ ಈ ಟೆಸ್ಟ್ ಪಂದ್ಯದಲ್ಲಿ ಭಾರತದ ಆರಂಭಿಕರು ಕೊಂಚ ವಿಭಿನ್ನ ಪ್ರದರ್ಶನ ನೀಡಿದ್ದಾರೆ. ವಾಸ್ತವವಾಗಿ, 89 ವರ್ಷಗಳ ಭಾರತೀಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ನಡೆಯದಂತಹ ಘಟನೆ ಮುಂಬೈ ಟೆಸ್ಟ್‌ನಲ್ಲಿ ನಡೆದಿರುವುದು ಇದೇ ಮೊದಲು. ಭಾರತೀಯ ಆರಂಭಿಕರ ಈ ವಿಭಿನ್ನ ಶೈಲಿಯ ಲಿಂಕ್ ಅವರ ಬ್ಯಾಟ್‌ನಿಂದ ಹೊರಹೊಮ್ಮಿದ ಸಿಕ್ಸರ್‌ಗಳಿಗೆ ಸಂಬಂಧಿಸಿದೆ.

ಮುಂಬೈ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಭಾರತ ಎರಡು ಆರಂಭಿಕ ಪಾಲುದಾರಿಕೆಗಳನ್ನು ಹೊಂದಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ, ಮಯಾಂಕ್ ಅಗರ್ವಾಲ್ ಅವರೊಂದಿಗೆ ಶುಭಮನ್ ಗಿಲ್ ಅವರು ಓಪನಿಂಗ್ ಮಾಡಿದರು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಚೇತೇಶ್ವರ ಪೂಜಾರ ಮಯಾಂಕ್ ಅಗರ್ವಾಲ್‌ಗೆ ಬೆಂಬಲ ನೀಡಿದರು. ವಾಸ್ತವವಾಗಿ, ಮೊದಲ ಇನ್ನಿಂಗ್ಸ್‌ನಲ್ಲಿ ಸ್ಕ್ವೇರ್ ಲೆಗ್‌ನಲ್ಲಿ ಫೀಲ್ಡಿಂಗ್ ಮಾಡುವಾಗ, ಗಿಲ್ ಅವರ ಕೈಗೆ ಗಾಯವಾಯಿತು. ಇದರಿಂದಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ ಆರಂಭಿಕರಾಗಿ ಕಣಕ್ಕಿಳಿಯಲು ಸಾಧ್ಯವಾಗಲಿಲ್ಲ. ಆದರೆ ಇದರ ಹೊರತಾಗಿಯೂ ಭಾರತದ ಮೊದಲ ಆರಂಭಿಕ ಆಟಗಾರನ ಹೆಸರಿಗೆ ಸೇರ್ಪಡೆಯಾಗಬೇಕಿದ್ದ ದಾಖಲೆ ಸೇರ್ಪಡೆಯಾಗಿದೆ.

ಭಾರತದ ಆರಂಭಿಕರು ಎರಡೂ ಇನ್ನಿಂಗ್ಸ್‌ಗಳಲ್ಲಿ ಸಿಕ್ಸರ್ ಬಾರಿಸಿದರು ಮುಂಬೈ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಭಾರತದ ಆರಂಭಿಕರು ಸಿಕ್ಸರ್ ಗಳಿಸುವಲ್ಲಿ ಯಶಸ್ವಿಯಾದರು. ಮೊದಲ ಇನ್ನಿಂಗ್ಸ್‌ನಲ್ಲಿ ಅವರ 150 ರನ್‌ಗಳ ಇನ್ನಿಂಗ್ಸ್‌ನಲ್ಲಿ, ಮಯಾಂಕ್ ಅಗರ್ವಾಲ್ 4 ಸಿಕ್ಸರ್‌ಗಳನ್ನು ಹೊಡೆದರೆ, ಗಿಲ್ 1 ಸಿಕ್ಸರ್ ಬಾರಿಸಿದರು. ಅದೇ ಎರಡನೇ ಇನ್ನಿಂಗ್ಸ್‌ನಲ್ಲಿ 62 ರನ್ ಗಳಿಸುವ ವೇಳೆ ಮಯಾಂಕ್ ಅಗರ್ವಾಲ್ ಸಿಕ್ಸರ್ ಬಾರಿಸಿದರೆ, ಅರ್ಧಶತಕ ವಂಚಿತ ಪೂಜಾರ ಕೂಡ ಸಿಕ್ಸರ್ ಬಾರಿಸುವಲ್ಲಿ ಯಶಸ್ವಿಯಾದರು. ಭಾರತೀಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದು ಮೊದಲ ಬಾರಿಗೆ ಸಂಭವಿಸಿದೆ.

ಮಯಾಂಕ್ ಅಗರ್ವಾಲ್ ಅವರ ಬಲವಾದ ಪ್ರದರ್ಶನ ಮಯಾಂಕ್ ಅಗರ್ವಾಲ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಎರಡೂ ಇನ್ನಿಂಗ್ಸ್‌ಗಳಲ್ಲಿ 50 ಪ್ಲಸ್ ಸ್ಕೋರ್ ಗಳಿಸಿದ್ದು ಇದೇ ಮೊದಲು. ಮೊದಲ ಇನಿಂಗ್ಸ್‌ನಲ್ಲಿ ಶತಕ ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಸಿಡಿಸಿದ ಭಾರತದ 14ನೇ ಆಟಗಾರ. ಅದೇ ಸಮಯದಲ್ಲಿ, ಮುಂಬೈನಲ್ಲಿ ನಡೆದ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಐವತ್ತು ಪ್ಲಸ್ ಸ್ಕೋರ್ ಗಳಿಸಿದ ಚೇತನ್ ಚೌಹಾಣ್, ಸುನಿಲ್ ಗವಾಸ್ಕರ್ ಮತ್ತು ಶ್ರೀಕಾಂತ್ ನಂತರ ಭಾರತದ ನಾಲ್ಕನೇ ಆರಂಭಿಕ ಆಟಗಾರರಾಗಿದ್ದಾರೆ.

ಮಯಾಂಕ್ ಅಗರ್ವಾಲ್ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು 242 ರನ್ ಗಳಿಸುವ ಮೂಲಕ ಅಂತ್ಯಗೊಳಿಸಿದರು. 2 ಟೆಸ್ಟ್‌ಗಳ 4 ಇನ್ನಿಂಗ್ಸ್‌ಗಳಲ್ಲಿ, ಅವರು 1 ಶತಕ ಮತ್ತು 1 ಅರ್ಧಶತಕವನ್ನು ಗಳಿಸಿದರು. ಈ ಸಮಯದಲ್ಲಿ ಅವರ ಸರಾಸರಿ 60.50 ಆಗಿತ್ತು.

ಇದನ್ನೂ ಓದಿ:IND vs NZ: ಟೀಂ ಇಂಡಿಯಾ ಬೌಲರ್​ಗಳ ಅಬ್ಬರ; 62 ರನ್​ಗಳಿಗೆ ಮಂಡಿಯೂರಿದ ಕಿವೀಸ್

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್