IND vs NZ: ಮೂರನೇ ಟೆಸ್ಟ್ಗೂ ಮುನ್ನ ಟೀಂ ಇಂಡಿಯಾಕ್ಕೆ ಸ್ಟಾರ್ ಆಲ್‌ರೌಂಡರ್ ಆಗಮನ
IND vs NZ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಬುಮ್ರಾ ಅವರಿಗೆ ವಿಶ್ರಾಂತಿ ನೀಡಿದರೆ ರಾಣಾ ಅವರು ಚೊಚ್ಚಲ ಪಂದ್ಯವನ್ನು ಆಡುವ ಸಾಧ್ಯತೆಯಿದೆ. ರಾಣಾ ಅವರು ಅತ್ಯುತ್ತಮ ವೇಗದ ಬೌಲಿಂಗ್ ಮತ್ತು ಬ್ಯಾಟಿಂಗ್ ಸಾಮರ್ಥ್ಯ ಹೊಂದಿದ್ದು, ಇತ್ತೀಚೆಗೆ ಅಸ್ಸಾಂ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ, ಸಿರಾಜ್ ಕೂಡ ಬುಮ್ರಾ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ನವೆಂಬರ್ 1 ರಿಂದ ಮುಂಬೈನಲ್ಲಿ ಆರಂಭವಾಗಲಿದೆ. ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದಲ್ಲಿ ದೊಡ್ಡ ಬದಲಾವಣೆಯಾಗಿದೆ. ಅದರಂತೆ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ಮೂರನೇ ಟೆಸ್ಟ್ ಪಂದ್ಯಕ್ಕಾಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದೀಗ ಅಚ್ಚರಿಯ ಆಯ್ಕೆಯಾಗಿ ತಂಡ ಸೇರಿಕೊಂಡಿರುವ ರಾಣಾ ಮುಂಬೈ ಟೆಸ್ಟ್‌ನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಬಹುದು ಎಂದು ಹೇಳಲಾಗುತ್ತಿದೆ. ಏಕೆಂದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗುತ್ತಿದೆ ಎಂಬ ವರದಿಗಳಿವೆ. ಆದರೆ, ಈ ಬಗ್ಗೆ ಯಾವುದೇ ದೃಢೀಕರಣ ಸಿಕ್ಕಿಲ್ಲ. ಒಂದು ವೇಳೆ ಈ ವದಂತಿ ನಿಜವಾದರೆ ಅತ್ಯುತ್ತಮ ಫಾರ್ಮ್‌ನಲ್ಲಿರುವ ದೆಹಲಿಯ ವೇಗದ ಬೌಲರ್ ಹರ್ಷಿತ್ ರಾಣಾ ಚೊಚ್ಚಲ ಅಂತರಾಷ್ಟ್ರೀಯ ಪಂದ್ಯವನ್ನು ಆಡುವ ಅವಕಾಶ ಪಡೆಯಲ್ಲಿದ್ದಾರೆ.
ಹರ್ಷಿತ್ ರಾಣಾ ವಿಶೇಷತೆ ಏನು?
ಹರ್ಷಿತ್ ರಾಣಾ ಅವರ ವಯಸ್ಸು ಕೇವಲ 22 ವರ್ಷ. ಇಷ್ಟು ಚಿಕ್ಕ ವಯಸ್ಸಿನಲ್ಲೇ ರಾಣಾ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಹರ್ಷಿತ್ ರಾಣಾ ವೇಗದ ಬೌಲಿಂಗ್ ಜೊತೆಗೆ ಬ್ಯಾಟಿಂಗ್ ಕೂಡ ಮಾಡಬಲ್ಲರು ಎಂಬುದು ಅವರ ವಿಶೇಷತೆ. ಇತ್ತೀಚೆಗೆ, ಹರ್ಷಿತ್ ರಾಣಾ, ಅಸ್ಸಾಂ ವಿರುದ್ಧ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸುವುದರ ಜೊತೆಗೆ, ಅದ್ಭುತ ಅರ್ಧಶತಕವನ್ನೂ ಸಿಡಿಸಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರಿಗೆ ಅವಕಾಶ ಸಿಕ್ಕಿದ್ದು ಇದೇ ವಿಶೇಷತೆಯಿಂದಾಗಿ.
ಹರ್ಷಿತ್ ರಾಣಾಗೆ ಅವಕಾಶ ಸಿಗುತ್ತಾ?
ಇದೀಗ ಮುಂಬೈ ಟೆಸ್ಟ್‌ನಲ್ಲಿ ಹರ್ಷಿತ್ ರಾಣಾಗೆ ಟೀಂ ಇಂಡಿಯಾ ಅವಕಾಶ ನೀಡುವುದೇ? ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ. ಮೇಲೆ ಹೇಳಿದಂತೆ ಮುಂಬೈ ಟೆಸ್ಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಿದರೆ, ಹರ್ಷಿತ್ ರಾಣಾ ತಂಡಕ್ಕೆ ಆಯ್ಕೆಯಾಗಬಹುದು ಎಂದು ಹೇಳಲಾಗುತ್ತಿದೆ. ಆದರೆ, ಪುಣೆ ಟೆಸ್ಟ್‌ನಲ್ಲಿ ವಿಶ್ರಾಂತಿ ಪಡೆದಿರುವ ಮೊಹಮ್ಮದ್ ಸಿರಾಜ್ ಕೂಡ ಬುಮ್ರಾ ಸ್ಥಾನಕ್ಕೆ ಬರುವ ಸಾಧ್ಯತೆಗಳಿವೆ. ಆದರೆ, ಆಸ್ಟ್ರೇಲಿಯಕ್ಕೆ ತೆರಳುವ ಮುನ್ನ ಹರ್ಷಿತ್ ರಾಣಾಗೆ ಅವಕಾಶ ನೀಡಿದರೆ ಅವರಿಗೆ ಉತ್ತಮ ಅನುಭವವಾಗಲಿದೆ.
ಹರ್ಷಿತ್ ರಾಣಾ ವೃತ್ತಿಜೀವನ
ಹರ್ಷಿತ್ ರಾಣಾ ಅವರ ದೇಶೀಯ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. ಈ ಆಟಗಾರ 9 ಪ್ರಥಮ ದರ್ಜೆ ಪಂದ್ಯಗಳಲ್ಲಿ 36 ವಿಕೆಟ್ ಪಡೆದಿದ್ದಾರೆ. ಅವರು ಒಮ್ಮೆ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆದ ಸಾಧನೆಯನ್ನು ಮಾಡಿದ್ದಾರೆ. ಇದಲ್ಲದೇ ಈ ಪಂದ್ಯದಲ್ಲಿ 10 ವಿಕೆಟ್ ಸಹ ಕಬಳಿಸಿದ್ದಾರೆ. ಅಷ್ಟೇ ಅಲ್ಲ, ಹರ್ಷಿತ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 41ರ ಸರಾಸರಿಯಲ್ಲಿ 410 ರನ್ ಗಳಿಸಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:58 pm, Tue, 29 October 24