ರೋಹಿತ್ ಶರ್ಮಾ (Rohit Sharma) ನಾಯಕತ್ವದ ಭಾರತ ಕ್ರಿಕೆಟ್ ತಂಡ ಒಂದೇ ಒಂದು ಸೋಲು ಕಾಣದೆ ಐಸಿಸಿ ಏಕದಿನ ವಿಶ್ವಕಪ್ 2023 ಲೀಗ್ ಪಂದ್ಯಗಳನ್ನು ಕೊನೆಗೊಳಿಸಿದೆ. ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನೆದರ್ಲೆಂಡ್ಸ್ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲೂ 160 ರನ್ಗಳ ಅಮೋಘ ಜಯ ಕಂಡು ಈ ಬಾರಿಯ ಟೂರ್ನಿಯಲ್ಲಿ ಆಡಿದ ಒಂಬತ್ತು ಪಂದ್ಯಗಳ ಪೈಕಿ ಒಂಬತ್ತರಲ್ಲೂ ಗೆಲುವು ಸಾಧಿಸಿದೆ. ಇದೀಗ ಟೀಮ್ ಇಂಡಿಯಾ ಮುಂದಿನ ಮಹತ್ವದ ಪಂದ್ಯಕ್ಕೆ ಸಜ್ಜಾಗಬೇಕಿದೆ. ಮುಂದಿನ ಪಂದ್ಯ ಭಾರತಕ್ಕೆ ಸೆಮಿ ಫೈನಲ್ ಆಗಿದ್ದು, ಇದರಲ್ಲಿ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹಾಗಾದರೆ, ಸೆಮೀಸ್ ಪಂದ್ಯ ಯಾವಾಗ?, ಯಾರ ವಿರುದ್ಧ? ಹಾಗೂ ಎಲ್ಲಿ ನಡೆಯಲಿದೆ? ನೋಡೋಣ.
ವಿಶ್ವಕಪ್ ಸೆಮಿ ಫೈನಲ್ನಲ್ಲಿ ಭಾರತದ ಎದುರಾಳಿ ಯಾರು?
ವಿಶ್ವಕಪ್ ಸೆಮಿ ಫೈನಲ್ನಲ್ಲಿ ಭಾರತದ ಎದುರಾಳಿ ನ್ಯೂಝಿಲೆಂಡ್ ತಂಡವಾಗಿದೆ.
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಸೆಮಿ ಫೈನಲ್ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಸೆಮೀಸ್ ಪಂದ್ಯ ನವೆಂಬರ್ 15 ರಂದು (ಬುಧವಾರ) ನಡೆಯಲಿದೆ.
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಸೆಮಿ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಸೆಮಿ ಫೈನಲ್ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
ಏಕದಿನದಲ್ಲಿ 4284 ದಿನಗಳ ನಂತರ ವಿಕೆಟ್ ಪಡೆದ ಹಿಟ್‌ಮ್ಯಾನ್ ರೋಹಿತ್..! ವಿಡಿಯೋ ನೋಡಿ
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಸೆಮಿ ಫೈನಲ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಸೆಮಿ ಫೈನಲ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಸೆಮಿ ಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಸೆಮಿ ಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಸೆಮಿ ಫೈನಲ್ ಪಂದ್ಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಸೆಮಿ ಫೈನಲ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ.
ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ವಿಲ್ ಯಂಗ್ , ಕೈಲ್ ಜಾಮಿಸನ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:28 am, Mon, 13 November 23