ಕಿವೀಸ್ ವಿರುದ್ಧ ಈ ಅಸ್ತ್ರ ಬಳಸಿದರೆ ಭಾರತಕ್ಕೆ ಗೆಲುವು ಖಚಿತ! ಧರ್ಮಶಾಲಾದ ಪಿಚ್ ಯಾರಿಗೆ ಹೆಚ್ಚು ಸಹಕಾರಿ ಗೊತ್ತಾ?

IND vs NZ Pitch Report: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯ ನಡೆಯಲಿದೆ. ಇಲ್ಲಿನ ಪಿಚ್ ವೇಗದ ಬೌಲರ್‌ಗಳಿಗೆ ಸಹಾಯಕವಾಗಿದೆ ಎಂದು ಪರಿಗಣಿಸಲಾಗಿದ್ದರೂ, ಈ ಪಿಚ್‌ನಲ್ಲಿ ಕುಲ್ದೀಪ್ ಮತ್ತು ಜಡೇಜಾ ಮಾರಕವಾಗಬಹುದು.

ಕಿವೀಸ್ ವಿರುದ್ಧ ಈ ಅಸ್ತ್ರ ಬಳಸಿದರೆ ಭಾರತಕ್ಕೆ ಗೆಲುವು ಖಚಿತ! ಧರ್ಮಶಾಲಾದ ಪಿಚ್ ಯಾರಿಗೆ ಹೆಚ್ಚು ಸಹಕಾರಿ ಗೊತ್ತಾ?
ಧರ್ಮಶಾಲಾದ ಪಿಚ್ ವರದಿ
Follow us
ಪೃಥ್ವಿಶಂಕರ
|

Updated on: Oct 21, 2023 | 8:47 AM

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ (ICC World Cup 2023) ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಇದುವರೆಗೆ ನಾಲ್ಕು ಪಂದ್ಯಗಳನ್ನು ಆಡಿದ್ದು, ನಾಲ್ಕರಲ್ಲೂ ಗೆಲುವು ಸಾಧಿಸಿದೆ. ಆದರೆ ಟೀಂ ಇಂಡಿಯಾಕ್ಕೆ (Team India) ನಿಜವಾದ ಸವಾಲು ಈಗ ಎದುರಾಗಿದೆ. ಏಕೆಂದರೆ ರೋಹಿತ್ ಪಡೆ ತನ್ನ ಮುಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ (India vs New zealand) ತಂಡವನ್ನು ಎದುರಿಸಲಿದೆ. ವಾಸ್ತವವಾಗಿ ಐಸಿಸಿ ಈವೆಂಟ್‌ಗಳಲ್ಲಿ ಟೀಂ ಇಂಡಿಯಾ ಕಿವೀಸ್ ವಿರುದ್ಧ ಹೆಚ್ಚು ಗೆಲುವು ಸಾಧಿಸಿಲ್ಲ. ಹೀಗಾಗಿ ಈ ಬಾರಿಯಾದರೂ ಕಿವೀಸ್ ಪಡೆಯನ್ನು ಮಣಿಸುವ ಇರಾದೆಯೊಂದಿಗೆ ರೋಹಿತ್ ಬಳಗ ಕಣಕ್ಕಿಳಿಯುತ್ತಿದೆ. ಇದೇ ಭಾನುವಾರದಂದು ಉಭಯ ತಂಡಗಳ ನಡುವೆ ಪಂದ್ಯ ನಡೆಯಲ್ಲಿದೆ.

ಭಾರತ ಕೊನೆಯ ಬಾರಿಗೆ 2003ರಲ್ಲಿ ನ್ಯೂಜಿಲೆಂಡ್ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯವನ್ನು ಗೆದ್ದಿತ್ತು. ಇದಾದ ಬಳಿಕ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ. ಕಳೆದ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಸೆಮಿಫೈನಲ್‌ನಲ್ಲಿ ಭಾರತವನ್ನು ಸೋಲಿಸಿ ಫೈನಲ್​ಗೆ ಲಗ್ಗೆ ಇಟ್ಟಿತ್ತು. ಆದಾದ ಬಳಿಕ ನಡೆದ 2021ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿಯೂ ಭಾರತ, ನ್ಯೂಜಿಲೆಂಡ್ ವಿರುದ್ಧ ಸೋತಿತ್ತು. ಹೀಗಾಗಿ ಭಾರತಕ್ಕೆ ನ್ಯೂಜಿಲೆಂಡ್ ದೊಡ್ಡ ತಲೆನೋವಾಗಿದೆ.

IND vs NZ: ಕಿವೀಸ್ ವಿರುದ್ಧ ಕಣಕ್ಕಿಳಿಯಲು ಧರ್ಮಶಾಲಾಗೆ ತೆರಳಿದ ಟೀಂ ಇಂಡಿಯಾ

ಪಿಚ್ ವರದಿ ಹೀಗಿದೆ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯ ನಡೆಯಲಿದೆ. ಇಲ್ಲಿನ ಪಿಚ್ ವೇಗದ ಬೌಲರ್‌ಗಳಿಗೆ ಸಹಾಯಕವಾಗಿದೆ ಎಂದು ಪರಿಗಣಿಸಲಾಗಿದ್ದರೂ, ಈ ಪಿಚ್‌ನಲ್ಲಿ ಕುಲ್ದೀಪ್ ಮತ್ತು ಜಡೇಜಾ ಮಾರಕವಾಗಬಹುದು. ಜಡೇಜಾ ಅತ್ಯಂತ ಅನುಭವಿ ಬೌಲರ್. ಈ ಪಿಚ್‌ನಲ್ಲಿ ಯಾವ ರೀತಿಯ ಬೌಲಿಂಗ್ ಮಾಡಬೇಕೆಂದು ಅವರಿಗೆ ತಿಳಿದಿದೆ. ಅವರು ವಿಕೆಟ್‌ ಟು ವಿಕೆಟ್‌ಗೆ ಬೌಲ್ ಮಾಡುತ್ತಾರೆ ಮತ್ತು ಸ್ವಲ್ಪ ತಿರುವು ಪಡೆದರೂ ಬ್ಯಾಟ್ಸ್‌ಮನ್‌ಗಳನ್ನು ಬಲೆಗೆ ಬೀಳುವುದು ಖಚಿತ. ಅದೇ ವೇಳೆ ಕುಲ್ದೀಪ್ ಅವರ ಸ್ಪಿನ್ ತಂತ್ರ ಅರಿಯುವುದು ಕಿವೀಸ್ ಬ್ಯಾಟರ್​ಗಳಿಗೆ ಸುಲಭವಲ್ಲ. ಈ ಪಿಚ್‌ನಲ್ಲಿ ಸ್ಪಿನ್ನರ್‌ಗಳಿಗೆ ಸ್ವಲ್ಪ ಸಹಾಯ ಸಿಗುತ್ತದೆ.

ಈ ಪಿಚ್​ನಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 231 ಆಗಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ 199 ರನ್ ಕಲೆಹಾಕಿರುವುದೇ ಇಲ್ಲಿನವರೆಗಿನ ದಾಖಲೆಯಾಗಿದೆ. ಆದಾಗ್ಯೂ, ಮೊದಲ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಹೋಲಿಸಿದರೆ ಎರಡನೇ ಬ್ಯಾಟಿಂಗ್ ಮಾಡುವ ತಂಡಗಳಿಗೆ ಹೆಚ್ಚಿನ ಯಶಸ್ಸು ಲಭಿಸಿದೆ ಎಂಬುದನ್ನು ಈ ಹಿಂದೆ ನಡೆದ ಪಂದ್ಯಗಳಿಂದ ತಿಳಿದುಬರುತ್ತದೆ.

ಕಿವೀಸ್ ವಿರುದ್ಧ ಸ್ಪಿನ್ ಉಪಯುಕ್ತ

ವಾಸ್ತವವಾಗಿ ಅಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯ ಅಕ್ಟೋಬರ್ 18 ರಂದು ಚೆನ್ನೈನಲ್ಲಿ ನಡೆಯಿತು. ಸಹಜವಾಗಿಯೇ ನ್ಯೂಜಿಲೆಂಡ್ ಈ ಪಂದ್ಯವನ್ನು 149 ರನ್‌ಗಳಿಂದ ಗೆದ್ದಿರಬಹುದು, ಆದರೆ ಈ ಪಂದ್ಯದಲ್ಲಿ ಅಫ್ಘಾನಿಸ್ತಾನದ ಸ್ಪಿನ್ನರ್‌ಗಳು ನ್ಯೂಜಿಲೆಂಡ್‌ನ ಬ್ಯಾಟ್ಸ್‌ಮನ್‌ಗಳಿಗೆ ತೊಂದರೆ ನೀಡಿದ್ದರು. ಮುಜೀಬ್ ಉರ್ ರೆಹಮಾನ್, ಮೊಹಮ್ಮದ್ ನಬಿ ಮತ್ತು ರಶೀದ್ ಖಾನ್ ಅವರ ಮುಂದೆ ನ್ಯೂಜಿಲೆಂಡ್‌ನ ಬ್ಯಾಟ್ಸ್‌ಮನ್‌ಗಳು ಸಾಕಷ್ಟು ತೊಂದರೆಗೀಡಾದರು. ಈ ಮೂವರು ಎಸೆದ 28 ಓವರ್‌ಗಳಲ್ಲಿ ನ್ಯೂಜಿಲೆಂಡ್ ತಂಡ ಕೇವಲ 141 ರನ್ ಗಳಿಸಿ ಎರಡು ವಿಕೆಟ್ ಕಳೆದುಕೊಂಡಿತು. ಹೀಗಾಗಿ ಭಾರತ ಕೂಡ ಅತ್ಯುತ್ತಮ ಸ್ಪಿನ್ನರ್‌ಗಳನ್ನು ಹೊಂದಿದ್ದು, ಕಿವೀಸ್ ವಿರುದ್ಧ ಸ್ಪಿನ್ ತಂತ್ರ ಬಳಸಿದರೆ, ಗೆಲುವು ಸುಲಭವಾಗಲಿದೆ. ಸದ್ಯ ಚೈನಾಮನ್ ಕುಲ್ದೀಪ್ ಯಾದವ್ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ರವೀಂದ್ರ ಜಡೇಜಾ ಕೂಡ ಶ್ರೇಷ್ಠ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಇಬ್ಬರೂ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್‌ಗಳ ದೌರ್ಬಲ್ಯದ ಲಾಭವನ್ನು ಪಡೆಯಬಹುದಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ