‘ಅವರ ದಿವಂಗತ ತಂದೆ ಇಂದು ತುಂಬಾ ಹೆಮ್ಮೆಪಡುತ್ತಾರೆ’; ಕೊಹ್ಲಿ ಸಾಧನೆಗೆ ಗಂಭೀರ್ ಮೆಚ್ಚುಗೆಯ ಮಾತು

ICC World Cup 2023: ಕ್ಷಕರ ಗ್ಯಾಲರಿಯಲ್ಲಿ ಉಪಸ್ಥಿತರಿದ್ದ ಸಚಿನ್ ತೆಂಡೂಲ್ಕರ್ ಕೂಡ ಕೊಹ್ಲಿ, ಶತಕ ಪೂರೈಸಿದ ಬಳಿಕ ಎದ್ದು ನಿಂತು ಗೌರವ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ 50ನೇ ಏಕದಿನ ಶತಕ ಸಿಡಿಸಿದ ವಿರಾಟ್ ಕೊಹ್ಲಿಗೆ ಎಲ್ಲೆಡೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದೀಗ ಭಾರತದ ಮಾಜಿ ಆಟಗಾರ ಹಾಗೂ ಸಂಸದ ಗೌತಮ್ ಗಂಭೀರ್ ಕೂಡ ಪ್ರತಿಕ್ರಿಯಿಸಿದ್ದಾರೆ.

‘ಅವರ ದಿವಂಗತ ತಂದೆ ಇಂದು ತುಂಬಾ ಹೆಮ್ಮೆಪಡುತ್ತಾರೆ’; ಕೊಹ್ಲಿ ಸಾಧನೆಗೆ ಗಂಭೀರ್ ಮೆಚ್ಚುಗೆಯ ಮಾತು
ಗೌತಮ್ ಗಂಭೀರ್, ವಿರಾಟ್ ಕೊಹ್ಲಿ
Follow us
|

Updated on:Nov 16, 2023 | 3:11 PM

ಮುಂಬೈನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ (India Vs New Zealand) ಸೆಮಿಫೈನಲ್‌ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) 117 ರನ್‌ಗಳ ಪ್ರಬಲ ಇನ್ನಿಂಗ್ಸ್ ಆಡಿದರು. ಇದು ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿ ಅವರ 50ನೇ ಶತಕವಾಗಿದ್ದು, ಇದರೊಂದಿಗೆ ಸಚಿನ್ ತೆಂಡೂಲ್ಕರ್ (Sachin Tendulkar) ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ. ಈ ಸಂದರ್ಭದಲ್ಲಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಉಪಸ್ಥಿತರಿದ್ದ ಸಚಿನ್ ತೆಂಡೂಲ್ಕರ್ ಕೂಡ ಕೊಹ್ಲಿ, ಶತಕ ಪೂರೈಸಿದ ಬಳಿಕ ಎದ್ದು ನಿಂತು ಗೌರವ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ 50ನೇ ಏಕದಿನ ಶತಕ ಸಿಡಿಸಿದ ವಿರಾಟ್ ಕೊಹ್ಲಿಗೆ ಎಲ್ಲೆಡೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದೀಗ ಭಾರತದ ಮಾಜಿ ಆಟಗಾರ ಹಾಗೂ ಸಂಸದ ಗೌತಮ್ ಗಂಭೀರ್ (Gautam Gambhir) ಕೂಡ ಪ್ರತಿಕ್ರಿಯಿಸಿದ್ದಾರೆ.

ಕೊಹ್ಲಿ ಆಟಕ್ಕೆ ಗಂಭೀರ್ ಮೆಚ್ಚುಗೆ

ಗೌತಮ್ ಗಂಭೀರ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ,  ‘50 ಶತಕಗಳನ್ನು ಬಾರಿಸುವ ಮೂಲಕ ಶ್ರೇಷ್ಠ ಸಚಿನ್ ತೆಂಡೂಲ್ಕರ್ ಅವರನ್ನು ಮೀರಿಸಿ ಸ್ಮರಣೀಯ ಸಾಧನೆ ಮಾಡಿದ ವಿರಾಟ್‌ಗೆ ಅಭಿನಂದನೆಗಳು!! ಅವರ ದಿವಂಗತ ತಂದೆ ಇಂದು ತುಂಬಾ ಹೆಮ್ಮೆಪಡುತ್ತಾರೆ ಮತ್ತು ಅವರ ಮಗನ ಸಾಧನೆಯನ್ನು ನೋಡಿ ತುಂಬ ಸಂತಸಪಟ್ಟಿರುತ್ತಾರೆ ಎಂದು ನನಗೆ ಖಾತ್ರಿಯಿದೆ!!’ ಎಂದು ಬರೆದುಕೊಂಡಿದ್ದಾರೆ.

Virat Kohli: ಏಕದಿನದಲ್ಲಿ ರಿಕಿ ಪಾಂಟಿಂಗ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ ಕಿಂಗ್ ಕೊಹ್ಲಿ..!

ತನಗೆ ಬಂದ ಪ್ರಶಸ್ತಿಯನ್ನು ಕೊಹ್ಲಿಗೆ ನೀಡಿದ್ದ ಗಂಭೀರ್

ಗೌತಮ್ ಗಂಭೀರ್ ಅವರ ಈ ಮೆಚ್ಚುಗೆಯ ಮಾತುಗಳಿಗೆ ಅಭಿಮಾನಿಗಳು ಕೂಡ ಹರ್ಷವ್ಯಕ್ತಪಡಿಸುತ್ತಿದ್ದಾರೆ. ಕೊಹ್ಲಿ 2009ರಲ್ಲಿ ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಶತಕ ದಾಖಲಿಸಿದ್ದರು. ಆ ಪಂದ್ಯದಲ್ಲಿ ಗೌತಮ್ ಗಂಭೀರ್ ಕೂಡ ಶತಕ ಸಿಡಿಸಿದ್ದರು. ಆ ಪಂದ್ಯದಲ್ಲಿ ಗೌತಮ್ ಗಂಭೀರ್​ಗೆ ಮ್ಯಾಜ್​ ಆಫ್​ ದಿ ಮ್ಯಾಚ್ ಪ್ರಶಸ್ತಿ ನೀಡಲಾಗಿತ್ತು. ಆದರೆ ಗಂಭೀರ್ ಆ ಪ್ರಶಸ್ತಿಯನ್ನು ವಿರಾಟ್ ಕೊಹ್ಲಿಗೆ ನೀಡಿದ್ದರು. ಆ ವೇಳೆ ಗೌತಮ್ ಗಂಭೀರ್ ಇದು ವಿರಾಟ್ ಅವರ ಮೊದಲ ಶತಕ. ಹೀಗಾಗಿ ಅವರ ಶತಕವನ್ನು ಇನ್ನಷ್ಟು ಸ್ಪೆಷಲ್ ಮಾಡುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ಅವರಿಗೆ ನೀಡುತ್ತಿದ್ದೇನೆ ಎಂದಿದ್ದರು.

ನವೆಂಬರ್ 19 ರಂದು ಫೈನಲ್

ಇನ್ನು ವಿಶ್ವಕಪ್ ಸೆಮಿಫೈನಲ್‌ ಪಂದ್ಯವನ್ನು ಗೆದ್ದು ಬೀಗಿರುವ ಟೀಂ ಇಂಡಿಯಾ ಫೈನಲ್ ಪಂದ್ಯದಲ್ಲಿ ಯಾರು ಎದುರಾಳಿಯಾಗುತ್ತಾರೆ ಎಂಬುದನ್ನು ಕಾದು ನೋಡುತ್ತಿದೆ. ನವೆಂಬರ್ 19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ತಂಡ ಅಂತಿಮ ಪಂದ್ಯವನ್ನು ಆಡಲಿದೆ. ಭಾರತ ತಂಡ ಮೂರನೇ ಬಾರಿಗೆ ವಿಶ್ವಕಪ್ ಪ್ರಶಸ್ತಿ ಗೆಲ್ಲುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ. ಭಾರತ ಈ ಹಿಂದೆ 1983 ಮತ್ತು 2011ರಲ್ಲಿ ವಿಶ್ವಕಪ್ ಗೆದ್ದಿತ್ತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Thu, 16 November 23

ತಾಜಾ ಸುದ್ದಿ
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು