AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ವಾಂಖೆಡೆಯಲ್ಲಿ ರನ್​ಗಳ ಸುನಾಮಿ ಎಬ್ಬಿಸಿದ ಭಾರತ; ಕಿವೀಸ್​ಗೆ 398 ರನ್ ಟಾರ್ಗೆಟ್

IND vs NZ: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್ 2023ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ಕಿವೀಸ್ ಬೌಲರ್​ಗಳ ಮೇಲೆ ಸವಾರಿ ಮಾಡಿ ನಿಗದಿತ 50 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು ಬರೋಬ್ಬರಿ 398 ರನ್​ಗಳ ಟಾರ್ಗೆಟ್ ನೀಡಿದೆ.

IND vs NZ: ವಾಂಖೆಡೆಯಲ್ಲಿ ರನ್​ಗಳ ಸುನಾಮಿ ಎಬ್ಬಿಸಿದ ಭಾರತ; ಕಿವೀಸ್​ಗೆ 398 ರನ್ ಟಾರ್ಗೆಟ್
ಪೃಥ್ವಿಶಂಕರ
|

Updated on:Nov 15, 2023 | 6:18 PM

Share

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium in Mumbai) ನಡೆಯುತ್ತಿರುವ ವಿಶ್ವಕಪ್ 2023ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ (India Vs New Zealand), ಕಿವೀಸ್ ಬೌಲರ್​ಗಳ ಮೇಲೆ ಸವಾರಿ ಮಾಡಿ ನಿಗದಿತ 50 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು ಬರೋಬ್ಬರಿ 398 ರನ್​ಗಳ ಟಾರ್ಗೆಟ್ ನೀಡಿದೆ. ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (Rohit Sharma) 47 ರನ್​ಗಳ ಇನ್ನಿಂಗ್ಸ್ ಆಡಿದರೆ, ಮತ್ತೊಬ್ಬ ಆರಂಭಿಕ ಶುಭ್​ಮನ್ ಗಿಲ್ (Shubman Gill) ಅಜೇಯ 80 ರನ್ ಬಾರಿಸಿದರು. ಹಾಗೆಯೇ ವಿರಾಟ್ ಕೊಹ್ಲಿ (Virat Kohli) 117 ರನ್ ಹಾಗೂ ಶ್ರೇಯಸ್ ಅಯ್ಯರ್ (Shreyas Iyer) 105 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದರು. ನ್ಯೂಜಿಲೆಂಡ್ ಪರ ಟಿಮ್ ಸೌಥಿ 3 ವಿಕೆಟ್ ಪಡೆದರೆ, ಟ್ರೆಂಟ್ ಬೌಲ್ಟ್ ಏಕೈಕ ವಿಕೆಟ್ ಪಡೆದರು.

ಭಾರತದ ಇನ್ನಿಂಗ್ಸ್

ಮೇಲೆ ಹೇಳಿದಂತೆ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಎಂದಿನಂತೆ ರೋಹಿತ್ ಅಬ್ಬರದ ಆರಂಭ ನೀಡಿದರು. ರೋಹಿತ್ ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ಮಾಡಿದರೆ, ಇನ್ನೊಂದು ತುದಿಯಲ್ಲಿ ಗಿಲ್ ಅವರಿಗೆ ಉತ್ತಮ ಬೆಂಬಲ ನೀಡಿದರು. ರೋಹಿತ್ ದೊಡ್ಡ ಶಾಟ್ ಬಾರಿಸುವ ಯತ್ನದಲ್ಲಿ 47 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಕೊಹ್ಲಿ ಹಾಗೂ ಗಿಲ್ ಭಾರತದ ಇನ್ನಿಂಗ್ಸ್ ಅನ್ನು ಸಮರ್ಥವಾಗಿ ನಿಭಾಯಿಸಿದರು.

Virat Kohli: ಏಕದಿನದಲ್ಲಿ ರಿಕಿ ಪಾಂಟಿಂಗ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ ಕಿಂಗ್ ಕೊಹ್ಲಿ..!

ಕೊಹ್ಲಿ ಶತಕ

ಶುಭಮನ್ ಗಿಲ್ 79 ರನ್‌ಗಳಿಸಿದ್ದಾಗ ಕಾಲಿನ ಸೆಳೆತಕ್ಕೆ ಒಳಗಾಗಿ ಮೈದಾನದಿಂದ ಹೊರ ನಡೆದರು. ಗಿಲ್ ನಿರ್ಗಮನದ ಬಳಿಕ ಮೈದಾನಕ್ಕಿಳಿದ ಶ್ರೇಯಸ್ ಅಯ್ಯರ್ ಭಾರತದ ರನ್ ರೇಟ್​ಗೆ ವೇಗ ನೀಡಿ ತಂಡದ ಸ್ಕೋರ್ ವೇಗವನ್ನು ಹೆಚ್ಚಿಸಿದರು. ಇಬ್ಬರೂ ಶತಕದ ಜೊತೆಯಾಟವನ್ನು ಹಂಚಿಕೊಂಡರು ನಂತರ ಇಬ್ಬರೂ ತಮ್ಮ ವೈಯಕ್ತಿಕ ಶತಕಗಳನ್ನು ಪೂರ್ಣಗೊಳಿಸಿದರು. ಈ ಇನ್ನಿಂಗ್ಸ್‌ನಲ್ಲಿ ಕೊಹ್ಲಿ 113 ಎಸೆತಗಳಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್‌ನೊಂದಿಗೆ 117 ರನ್ ಗಳಿಸಿದರು.

ಶ್ರೇಯಸ್ ಶತಕ

ವಿರಾಟ್ ನಂತರ, ಶ್ರೇಯಸ್ ಅಯ್ಯರ್ ಕೂಡ ಕೇವಲ 70 ಎಸೆತಗಳಲ್ಲಿ 105 ರನ್ ಗಳಿಸಿ ತಂಡದ ಸ್ಕೋರ್ ಅನ್ನು 400 ರ ಸಮೀಪಕ್ಕೆ ಕೊಂಡೊಯ್ದರು. ಅಯ್ಯರ್ ಅವರ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 8 ಸಿಕ್ಸರ್‌ಗಳು ಸೇರಿದ್ದವು. ಈ ಇಬ್ಬರ ಇನ್ನಿಂಗ್ಸ್ ಜೊತೆಗೆ ಭಾರತದ ಇನ್ನಿಂಗ್ಸ್​ಗೆ ಅಂತಿಮ ಟಚ್ ನೀಡಿದ ಕನ್ನಡಿಗೆ ಕೆ. ಎಲ್. ರಾಹುಲ್ 20 ಎಸೆತಗಳಲ್ಲಿ ಅಜೇಯ 39 ರನ್ ಗಳಿಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Wed, 15 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ