ಸೌರವ್ ಗಂಗೂಲಿ ಅವರ 20 ವರ್ಷಗಳ ಹಳೆಯ ದಾಖಲೆ ಮುರಿದ ರೋಹಿತ್..!
Rohit Sharma, ICC World Cup 2023: ಈ ಪಂದ್ಯವನ್ನು ಗೆಲ್ಲುವ ಮೂಲಕ ರೋಹಿತ್ ಶರ್ಮಾ, ಸೌರವ್ ಗಂಗೂಲಿ ಅವರ 20 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು. 2023 ರ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ 10 ಪಂದ್ಯಗಳನ್ನು ಗೆದ್ದಿದೆ ಮತ್ತು ತಂಡವು ಒಂದೇ ಒಂದು ಪಂದ್ಯವನ್ನು ಸೋತಿಲ್ಲ.
1 / 7
ರೋಹಿತ್ ಶರ್ಮಾ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು 70 ರನ್‌ಗಳಿಂದ ಸೋಲಿಸಿದೆ. ಇದರೊಂದಿಗೆ ನಾಲ್ಕನೇ ಬಾರಿಗೆ ವಿಶ್ವಕಪ್ ಫೈನಲ್‌ಗೆ ಪ್ರವೇಶಿಸಿದ ಸಾಧನೆ ಮಾಡಿದೆ.
2 / 7
ಹಾಗೆಯೇ ಈ ಪಂದ್ಯವನ್ನು ಗೆಲ್ಲುವ ಮೂಲಕ ರೋಹಿತ್ ಶರ್ಮಾ, ಸೌರವ್ ಗಂಗೂಲಿ ಅವರ 20 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು.
3 / 7
2023 ರ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ 10 ಪಂದ್ಯಗಳನ್ನು ಗೆದ್ದಿದೆ ಮತ್ತು ತಂಡವು ಒಂದೇ ಒಂದು ಪಂದ್ಯವನ್ನು ಸೋತಿಲ್ಲ.
4 / 7
20 ವರ್ಷಗಳ ಹಿಂದೆ 2003ರ ಏಕದಿನ ವಿಶ್ವಕಪ್‌ನಲ್ಲಿ ಸೌರವ್ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾ 9 ಪಂದ್ಯಗಳನ್ನು ಗೆದ್ದಿತ್ತು. ಇದೀಗ ಗಂಗೂಲಿ ದಾಖಲೆಯನ್ನು ರೋಹಿತ್ ಮುರಿದಿದ್ದಾರೆ.
5 / 7
ಇನ್ನು ಏಕದಿನ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡಗಳ ಪೈಕಿ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. ಐದು ಬಾರಿಯ ಚಾಂಪಿಯನ್ 2003 ಮತ್ತು 2007 ರ ವಿಶ್ವಕಪ್‌ನಲ್ಲಿ ತಲಾ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು.
6 / 7
ಎರಡನೇ ಸ್ಥಾನದಲ್ಲಿರುವ ಭಾರತ ತಂಡ ಈ ಆವೃತ್ತಿಯಲ್ಲಿ 10 ಪಂದ್ಯಗಳನ್ನು ಗೆದ್ದಿದ್ದರೆ, 2003 ರ ವಿಶ್ವಕಪ್‌ನಲ್ಲಿ ಸತತವಾಗಿ 9 ಪಂದ್ಯಗಳನ್ನು ಗೆದ್ದಿತ್ತು.
7 / 7
ಈ ಎರಡು ತಂಡಗಳ ನಂತರದ ಸ್ಥಾನದಲ್ಲಿರುವ ಶ್ರೀಲಂಕಾ ತಂಡ 2007 ರ ವಿಶ್ವಕಪ್‌ನಲ್ಲಿ ಸತತ 8 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ ಕೂಡ 2015 ರ ವಿಶ್ವಕಪ್‌ನಲ್ಲಿ 8 ಪಂದ್ಯಗಳನ್ನು ಸತತವಾಗಿ ಗೆದ್ದ ದಾಖಲೆ ಮಾಡಿತ್ತು.