IND vs NZ: ಸೆಮಿಫೈನಲ್ನಲ್ಲಿ ಟಾಸ್ ಗೆದ್ದ ರೋಹಿತ್; ಕಿವೀಸ್ ಮೊದಲು ಬೌಲಿಂಗ್
IND vs NZ, ICC World Cup 2023 Semi Final: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದ ಟಾಸ್ ಈಗಾಗಲೇ ನಡೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium in Mumbai) ನಡೆಯುತ್ತಿರುವ ಏಕದಿನ ವಿಶ್ವಕಪ್‌ನ ಮೊದಲ ಸೆಮಿಫೈನಲ್ (1st Semi-Final in World Cup 2023) ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ (India Vs New Zealand) ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದ ಟಾಸ್ ಈಗಾಗಲೇ ನಡೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹಾಗೆಯೇ ಈ ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ವಾಸ್ತವವಾಗಿ ನಾಲ್ಕು ವರ್ಷಗಳ ಹಿಂದೆ ಇದೇ ನ್ಯೂಜಿಲೆಂಡ್‌ನ ತಂಡ ಮ್ಯಾಂಚೆಸ್ಟರ್‌ನಲ್ಲಿ ನಡೆದಿದ್ದ ವಿಶ್ವಕಪ್‌ನಲ್ಲಿ ಭಾರತದ ಚಾಂಪಿಯನ್ ಕನಸನ್ನು ಭಗ್ನಗೊಳಿಸಿತ್ತು.
ಐಸಿಸಿ ಈವೆಂಟ್‌ಗಳಲ್ಲಿ ಭಾರತಕ್ಕೆ ಸಮಸ್ಯೆ ಸೃಷ್ಟಿಸುತ್ತಿರುವ ನ್ಯೂಜಿಲೆಂಡ್, ಈ ಹಿಂದೆ ಮೊದಲ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ಭಾರತದ ಕನಸನ್ನೂ ಭಗ್ನಗೊಳಿಸಿತ್ತು. ಮತ್ತೊಮ್ಮೆ ಈ ಕಿವೀಸ್ ತಂಡ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಎದುರಾಳಿಯಾಗಿದೆ. ಈ ಬಾರಿಯ ಟೂರ್ನಿಯಲ್ಲಿ ಭಾರತ ತನ್ನ ಪಾರಮ್ಯ ಮೆರೆದಿದ್ದು, ಇದೀಗ ಸೆಮಿಫೈನಲ್‌ನಲ್ಲೂ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇದೇ ಟ್ರೆಂಡ್ ಮುಂದುವರಿಸಲಿದೆಯೇ ಅಥವಾ ಕಪ್ಪು ಬಟ್ಟೆ ತೊಟ್ಟಿರುವ ನ್ಯೂಜಿಲೆಂಡ್ ಕೆಲಸ ಕೆಡಿಸುತ್ತದೆಯೇ ಎಂಬ ಪ್ರಶ್ನೆ ಎದುರಾಗಿದೆ.
ಏಕದಿನ ವಿಶ್ವಕಪ್‌ನಲ್ಲಿ ಕುಂಬ್ಳೆ, ಯುವರಾಜ್ ದಾಖಲೆ ಮುರಿದ ಸರ್ ರವೀಂದ್ರ ಜಡೇಜಾ..!
ಉಭಯ ತಂಡಗಳು ಹೀಗಿವೆ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.
ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲೇಥಮ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ವಾಂಖೆಡೆಯಲ್ಲಿ ಟಾಸ್ ಗೆದ್ದವರೇ ಬಾಸ್
ಮುಂಬೈನ ವಾಂಖೆಡೆ ಪಿಚ್ನಲ್ಲಿ ಟಾಸ್ ಪ್ರಮುಖ ಪ್ರಭಾವ ಬೀರಲ್ಲಿದೆ. ವಾಸ್ತವವಾಗಿ ಈ ಪಿಚ್ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡಕ್ಕೆ ಇರುತ್ತದೆ. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಲು ಟಾಸ್ ಗೆಲ್ಲುವುದು ಅನಿವಾರ್ಯವಾಗಿತ್ತು. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದೀಗ ಈ ಗೆಲುವು ಸಾಧಿಸಿದ್ದಾರೆ. ಅಲ್ಲದೆ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಈಗ ಭಾರತ ಗೆಲುವು ದಾಖಲಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:34 pm, Wed, 15 November 23