AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ರೋಹಿತ್ ಸಿಡಿಲಬ್ಬರ; ಮೊದಲ 5 ಓವರ್​ಗಳಲ್ಲಿ 47 ರನ್ ಚಚ್ಚಿದ ಭಾರತ

IND vs NZ, ICC World Cup 2023 Semi Final: ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿರುವ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಕೇವಲ ಬೌಂಡರಿ ಸಿಕ್ಸರ್​ಗಳಿಂದಲೇ ಡೀಲ್ ಮಾಡುತ್ತಿದ್ದಾರೆ. ಅದರಲ್ಲೂ ನಾಯಕನ ಆಟ ಆಡುತ್ತಿರುವ ರೋಹಿತ್ ತಂಡಕ್ಕೆ ಸ್ಫೋಟಕ ಆರಂಭ ತಂದುಕೊಟ್ಟಿದ್ದಾರೆ. ಈ ಇಬ್ಬರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದಾಗಿ ಟೀಂ ಇಂಡಿಯಾ ಕೇವಲ 5 ಓವರ್​ಗಳಲ್ಲಿ 47 ರನ್ ಕಲೆಹಾಕಿದೆ.

IND vs NZ: ರೋಹಿತ್ ಸಿಡಿಲಬ್ಬರ; ಮೊದಲ 5 ಓವರ್​ಗಳಲ್ಲಿ 47 ರನ್ ಚಚ್ಚಿದ ಭಾರತ
ರೋಹಿತ್- ಗಿಲ್
ಪೃಥ್ವಿಶಂಕರ
|

Updated on:Nov 15, 2023 | 2:41 PM

Share

ವಾಂಖೆಡೆ ಮೈದಾನದಲ್ಲಿ (Wankhede Stadium in Mumbai) ನಡೆಯುಯತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ (India Vs New Zealand) ನಡುವಿನ ವಿಶ್ವಕಪ್ (World Cup 2023) ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಅಬ್ಬರದ ಆರಂಭ ಪಡೆದುಕೊಂಡಿದೆ. ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿರುವ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಶುಭ್​ಮನ್ ಗಿಲ್ (Shubman Gill) ಕೇವಲ ಬೌಂಡರಿ ಸಿಕ್ಸರ್​ಗಳಿಂದಲೇ ಡೀಲ್ ಮಾಡುತ್ತಿದ್ದಾರೆ. ಅದರಲ್ಲೂ ನಾಯಕನ ಆಟ ಆಡುತ್ತಿರುವ ರೋಹಿತ್ ತಂಡಕ್ಕೆ ಸ್ಫೋಟಕ ಆರಂಭ ತಂದುಕೊಟ್ಟಿದ್ದಾರೆ. ಈ ಇಬ್ಬರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದಾಗಿ ಟೀಂ ಇಂಡಿಯಾ ಕೇವಲ 5 ಓವರ್​ಗಳಲ್ಲಿ 47 ರನ್ ಕಲೆಹಾಕಿದೆ.

ಪ್ರತಿ ಓವರ್​ನಲ್ಲೂ ಬೌಂಡರಿ

ಕಿವೀಸ್ ಪರ ದಾಳಿ ಆರಂಭಿಸಿದ ಟ್ರೆಂಟ್ ಬೌಲ್ಟ್​ಗೆ ಮೊದಲ ಓವರ್​ನಲ್ಲೇ ರೋಹಿತ್ ಶರ್ಮಾ 2 ಬೌಂಡರಿಗಳ ಸ್ವಾಗತ ನೀಡಿದರು. ಎರಡನೇ ಓವರ್​ ಬೌಲ್ ಮಾಡಲು ಬಂದ ಟೀಮ್​ ಸೌಥಿಗೂ ಸಹ ಸಮನಾದ ಗೌರವ ಸಿಕ್ಕಿತು. ಈ ಓವರ್​ನಲ್ಲಿ ಶುಭ್​ಮನ್ ಗಿಲ್ 2 ಬೌಂಡರಿ ಹೊಡೆದರು. ಮೂರನೇ ಓವರ್​ನಲ್ಲಿ ಮತ್ತಷ್ಟು ಉಗ್ರರೂಪ ತಾಳಿದ ನಾಯಕ ರೋಹಿತ್, ಈ ಓವರ್​ನಲ್ಲಿ ಒಂದು ಭರ್ಜರಿ ಸಿಕ್ಸರ್ ಬಾರಿಸಿದರು. 4ನೇ ಓವರ್​ನಲ್ಲೂ 1 ಬೌಂಡರಿ ಹಾಗೂ 1 ಸಿಕ್ಸರ್ ಬಂತು. ಐದನೇ ಓವರ್​ನಲ್ಲೂ ನಾಯಕ ರೋಹಿತ್ ಇನ್ನೊಂದು ಭರ್ಜರಿ ಸಿಕ್ಸರ್ ಹೊಡೆದರು.

ರೋಹಿತ್ ಅಬ್ಬರ

ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಖೋಟಾದ 7 ಓವರ್​ ಮುಗಿದಿದ್ದು, ಇದರಲ್ಲಿ ತಂಡ ಯಾವುದೇ ವಿಕೆಟ್ ಕಳೆದುಕೊಳ್ಳದೆ 61 ರನ್ ಕಲೆಹಾಕಿದೆ. ಇದರಲ್ಲಿ ನಾಯಕ ರೋಹಿತ್ ಶರ್ಮಾ ಅವರದ್ದೇ ಸಿಂಹಪಾಲಿದ್ದು,  28 ಎಸೆತಗಳನ್ನು ಎದುರಿಸಿರುವ ರೋಹಿತ್ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 48 ರನ್ ಸಿಡಿಸಿದ್ದಾರೆ. ರೋಹಿತ್​ಗೆ ಉತ್ತಮ ಸಾಥ್ ನೀಡುತ್ತಿರುವ ಶುಭ್​ಮನ್ ಗಿಲ್ 14 ಎಸೆತಗಳಲ್ಲಿ 2 ಬೌಂಡರಿ ಸಹಿತ 11 ರನ್ ಬಾರಿಸಿದ್ದಾರೆ.

ಉಭಯ ತಂಡಗಳು ಹೀಗಿವೆ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.

ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲೇಥಮ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:25 pm, Wed, 15 November 23

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!