ವಾಂಖೆಡೆ ಮೈದಾನದಲ್ಲಿ (Wankhede Stadium in Mumbai) ನಡೆಯುಯತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ (India Vs New Zealand) ನಡುವಿನ ವಿಶ್ವಕಪ್ (World Cup 2023) ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಅಬ್ಬರದ ಆರಂಭ ಪಡೆದುಕೊಂಡಿದೆ. ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿರುವ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಶುಭ್ಮನ್ ಗಿಲ್ (Shubman Gill) ಕೇವಲ ಬೌಂಡರಿ ಸಿಕ್ಸರ್ಗಳಿಂದಲೇ ಡೀಲ್ ಮಾಡುತ್ತಿದ್ದಾರೆ. ಅದರಲ್ಲೂ ನಾಯಕನ ಆಟ ಆಡುತ್ತಿರುವ ರೋಹಿತ್ ತಂಡಕ್ಕೆ ಸ್ಫೋಟಕ ಆರಂಭ ತಂದುಕೊಟ್ಟಿದ್ದಾರೆ. ಈ ಇಬ್ಬರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದಾಗಿ ಟೀಂ ಇಂಡಿಯಾ ಕೇವಲ 5 ಓವರ್ಗಳಲ್ಲಿ 47 ರನ್ ಕಲೆಹಾಕಿದೆ.
ಕಿವೀಸ್ ಪರ ದಾಳಿ ಆರಂಭಿಸಿದ ಟ್ರೆಂಟ್ ಬೌಲ್ಟ್ಗೆ ಮೊದಲ ಓವರ್ನಲ್ಲೇ ರೋಹಿತ್ ಶರ್ಮಾ 2 ಬೌಂಡರಿಗಳ ಸ್ವಾಗತ ನೀಡಿದರು. ಎರಡನೇ ಓವರ್ ಬೌಲ್ ಮಾಡಲು ಬಂದ ಟೀಮ್ ಸೌಥಿಗೂ ಸಹ ಸಮನಾದ ಗೌರವ ಸಿಕ್ಕಿತು. ಈ ಓವರ್ನಲ್ಲಿ ಶುಭ್ಮನ್ ಗಿಲ್ 2 ಬೌಂಡರಿ ಹೊಡೆದರು. ಮೂರನೇ ಓವರ್ನಲ್ಲಿ ಮತ್ತಷ್ಟು ಉಗ್ರರೂಪ ತಾಳಿದ ನಾಯಕ ರೋಹಿತ್, ಈ ಓವರ್ನಲ್ಲಿ ಒಂದು ಭರ್ಜರಿ ಸಿಕ್ಸರ್ ಬಾರಿಸಿದರು. 4ನೇ ಓವರ್ನಲ್ಲೂ 1 ಬೌಂಡರಿ ಹಾಗೂ 1 ಸಿಕ್ಸರ್ ಬಂತು. ಐದನೇ ಓವರ್ನಲ್ಲೂ ನಾಯಕ ರೋಹಿತ್ ಇನ್ನೊಂದು ಭರ್ಜರಿ ಸಿಕ್ಸರ್ ಹೊಡೆದರು.
ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಖೋಟಾದ 7 ಓವರ್ ಮುಗಿದಿದ್ದು, ಇದರಲ್ಲಿ ತಂಡ ಯಾವುದೇ ವಿಕೆಟ್ ಕಳೆದುಕೊಳ್ಳದೆ 61 ರನ್ ಕಲೆಹಾಕಿದೆ. ಇದರಲ್ಲಿ ನಾಯಕ ರೋಹಿತ್ ಶರ್ಮಾ ಅವರದ್ದೇ ಸಿಂಹಪಾಲಿದ್ದು, 28 ಎಸೆತಗಳನ್ನು ಎದುರಿಸಿರುವ ರೋಹಿತ್ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 48 ರನ್ ಸಿಡಿಸಿದ್ದಾರೆ. ರೋಹಿತ್ಗೆ ಉತ್ತಮ ಸಾಥ್ ನೀಡುತ್ತಿರುವ ಶುಭ್ಮನ್ ಗಿಲ್ 14 ಎಸೆತಗಳಲ್ಲಿ 2 ಬೌಂಡರಿ ಸಹಿತ 11 ರನ್ ಬಾರಿಸಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.
ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲೇಥಮ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:25 pm, Wed, 15 November 23