Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Breaking: ರೋಹಿತ್ ಪಡೆಯ ಶ್ರೇಷ್ಠ ಪ್ರದರ್ಶನ; ಕಿವೀಸ್ ಮಣಿಸಿ ವಿಶ್ವಕಪ್ ಫೈನಲ್​ಗೇರಿದ ಭಾರತ..!

IND vs NZ, ICC World Cup 2023: ಟೀಂ ಇಂಡಿಯಾ ವಿಶ್ವವನ್ನು ಗೆಲ್ಲಲು ಕೇವಲ ಇನ್ನೊಂದು ಹೆಜ್ಜೆ ಹಿಂದೆ ಇದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ 2023 ರ ಏಕದಿನ ವಿಶ್ವಕಪ್​ನ ಫೈನಲ್​ಗೇರಿದೆ.

Big Breaking: ರೋಹಿತ್ ಪಡೆಯ ಶ್ರೇಷ್ಠ ಪ್ರದರ್ಶನ; ಕಿವೀಸ್ ಮಣಿಸಿ ವಿಶ್ವಕಪ್ ಫೈನಲ್​ಗೇರಿದ ಭಾರತ..!
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Nov 15, 2023 | 10:48 PM

ಕೋಟ್ಯಾಂತರ ಭಾರತೀಯರ ಅದೊಂದು ಕನಸು ನನಸಾಗಿದೆ. ಬರೋಬ್ಬರಿ 12 ವರ್ಷಗಳಿಂದ ಟೀಂ ಇಂಡಿಯಾ ಅಭಿಮಾನಿಗಳು ಕಾಯುತ್ತಿದ್ದ ಕ್ಷಣ ಕೊನೆಗೂ ಸನಿಹವಾಗಿದೆ. ಟೀಂ ಇಂಡಿಯಾ ವಿಶ್ವವನ್ನು ಗೆಲ್ಲಲು ಕೇವಲ ಇನ್ನೊಂದು ಹೆಜ್ಜೆ ಹಿಂದೆ ಇದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium in Mumbai) ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India Vs New Zealand) ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ 2023 ರ ಏಕದಿನ ವಿಶ್ವಕಪ್​ನ ಫೈನಲ್​ಗೇರಿದೆ. ಈ ಮೂಲಕ 2019ರ ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಸೆಮಿಫೈನಲ್​ನಲ್ಲಿ ಸೋಲಿಸಿ ಟೂರ್ನಿಯಿಂದ ಹೊರಹಾಕಿದ್ದ ನ್ಯೂಜಿಲೆಂಡ್​ಗೆ ರೋಹಿತ್​ ಪಡೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅವರ ಶತಕದ ನೆರವಿನಿಂದ 50 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 398 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಡೇರೆಲ್ ಮಿಚೆಲ್ ಅವರ ಏಕಾಂಗಿ ಹೋರಾಟದ ಶತಕದ ಹೊರತಾಗಿಯೂ 48.5 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 327 ರನ್​ಗಳಿಸಲಷ್ಟೇ ಶಕ್ತವಾಯಿತು.

ರೋಹಿತ್ ಅಬ್ಬರದ ಆರಂಭ

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅರ್ಧಶತಕದ ಜೊತೆಯಾಟದೊಂದಿಗೆ ಉತ್ತಮ ಆರಂಭ ನೀಡಿದರು. ಈ ವೇಳೆ ಎಂದಿನಂತೆ ಸ್ಫೋಟಕ ಬ್ಯಾಟಿಂಗ್ ನಡೆಸಿದ ರೋಹಿತ್ ಶರ್ಮಾ 47 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ವಿರಾಟ್ ಕೊಹ್ಲಿ ಜೊತೆಯಾದ ಶುಭ್​ಮನ್ ಗಿಲ್ ಶತಕದ ಜೊತೆಯಾಟವನ್ನು ನಡೆಸಿದರು. ಈ ಹಂತದಲ್ಲಿ ಇಂಜುರಿಗೆ ತುತ್ತಾದ ಗಿಲ್ ಆಟದ ಮಧ್ಯದಲ್ಲೇ ಮೈದಾನ ತೊರೆದರು. ಅಂತಿಮವಾಗಿ ಅವರು ಅಜೇಯ 80 ರನ್ ಸಿಡಿದರು.

ಕೊಹ್ಲಿ- ಶ್ರೇಯಸ್ ಶತಕ

ಶುಭ್​ಮನ್ ಗಿಲ್ ನಂತರ ಕಿಂಗ್ ಕೊಹ್ಲಿ ಜೊತೆಯಾದ ಲೋಕಲ್ ಬಾಯ್ ಶ್ರೇಯಸ್ ಅಯ್ಯರ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಇಬ್ಬರು ಶತಕದ ಜೊತೆಯಾಟ ನಡೆಸಿದಲ್ಲದೆ, ವೈಯಕ್ತಿಕವಾಗಿ ಶತಕ ಸಿಡಿಸಿ ಮಿಂಚಿದರು. ಈ ವೇಳೆ ವಿರಾಟ್ ಕೊಹ್ಲಿ 113 ಎಸೆತಗಳಲ್ಲಿ 117 ರನ್ ಸಿಡಿಸಿ ಏಕದಿನ ಕ್ರಿಕೆಟ್​ನಲ್ಲಿ 50ನೇ ಶತಕವನ್ನು ಪೂರ್ಣಗೊಳಿಸಿದರೆ, ಮುಂಬೈಕರ್ ಶ್ರೇಯಸ್ ಅಯ್ಯರ್ 105 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಕೊನೆಯಲ್ಲಿ ವಿಕೆಟ್ ಕೀಪರ್ ಕೆಎಲ್ ರಾಹುಲ್ ಅಜೇಯ 39 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ 1 ರನ್ ಗಳಿಸಿ ಔಟಾದರು. ನ್ಯೂಜಿಲೆಂಡ್ ಪರ ಟಿಮ್ ಸೌಥಿ 3 ವಿಕೆಟ್ ಪಡೆದರು. ಟ್ರೆಂಟ್ ಬೌಲ್ಟ್ 1 ವಿಕೆಟ್ ಪಡೆದರು.

ಮಿಚೆಲ್ ಏಕಾಂಗಿ ಹೋರಾಟ

ಭಾರತ ನೀಡಿದ ಬೃಹತ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್​ಗೆ ಉತ್ತಮ ಆರಂಭ ಸಿಗಲಿಲ್ಲ. ತಂಡ 40 ರನ್​ ದಾಖಲಿಸುವಷ್ಟರಲ್ಲಿ ಆರಂಭಿಕರಿಬ್ಬರನ್ನು ಕಳೆದುಕೊಂಡಿತು. ಆರಂಭಿಕ ಆಘಾತದ ಬಳಿಕ ಜೊತೆಯಾದ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡ್ಯಾರೆಲ್ ಮಿಚೆಲ್ ಶತಕದ ಜೊತೆಯಾಟ ಹಂಚಿಕೊಂಡರು. ಕೊನೆಯವರೆಗೂ ಏಕಾಂಗಿ ಹೋರಾಟ ನಡೆಸಿದ ಮಿಚೆಲ್ 134 ರನ್ ಸಿಡಿಸಿದರೆ, ನಾಯಕ ಕೇನ್ ವಿಲಿಯಮ್ಸನ್ 69 ರನ್​ಗಳ ಕೊಡುಗೆ ನೀಡಿದರು. ಗ್ಲೆನ್ ಫಿಲಿಪ್ಸ್ 41 ರನ್ ಗಳಿಸಿ ಔಟಾದರೆ, ಆರಂಭಿಕ ಜೋಡಿ ಡೆವೊನ್ ಕಾನ್ವೆ ಮತ್ತು ರಚಿನ್ ರವೀಂದ್ರ ಇಬ್ಬರೂ ತಲಾ 13 ರನ್ ಗಳಿಸಿದರು. ಟಾಮ್ ಲಾಥ್‌ಮನ್‌ಗೆ ಖಾತೆ ಕೂಡ ತೆರೆಯಲು ಸಾಧ್ಯವಾಗಲಿಲ್ಲ. ಕಿವೀಸ್ ಬಾಲಂಗೋಚಿಗಳು ಭಾರತದ ದಾಳಿಯ ಮುಂದೆ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ಮೊಹಮ್ಮದ್ ಶಮಿ ಟೀಂ ಇಂಡಿಯಾ ಪರ ಅತಿ ಹೆಚ್ಚು 6 ವಿಕೆಟ್ ಕಬಳಿಸಿದ್ದಾರೆ. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಕುಲ್ದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:27 pm, Wed, 15 November 23

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ