IND vs NZ: ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಜೇಬಿಗೆ ಕತ್ತರಿ ಹಾಕಿದ ಐಸಿಸಿ!

IND vs NZ: ಐಸಿಸಿ ವಿಧಿಸಿರುವ ದಂಡದ ಪ್ರಕಾರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಪಂದ್ಯ ಶುಲ್ಕ ಶೇ.60ರಷ್ಟು ಕಡಿತವಾಗಲಿದೆ. ಅದೇ ಸಮಯದಲ್ಲಿ, ಉಳಿದ ಆಟಗಾರರ ಪಂದ್ಯದ ಶುಲ್ಕದಿಂದ ಶೇಕಡಾ 20 ರಷ್ಟು ಮೊತ್ತವನ್ನು ಕಡಿತಗೊಳಿಸಲಾಗುತ್ತದೆ.

IND vs NZ: ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಜೇಬಿಗೆ ಕತ್ತರಿ ಹಾಕಿದ ಐಸಿಸಿ!
ಟೀಂ ಇಂಡಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on:Jan 20, 2023 | 3:04 PM

ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ (Team India) ದೊಡ್ಡ ಹೊಡೆತ ಬಿದ್ದಿದೆ. ಸ್ಲೋ ಓವರ್ ರೇಟ್​ನಿಂದಾಗಿ ಟೀಂ ಇಂಡಿಯಾಕ್ಕೆ ಐಸಿಸಿ ದಂಡ ವಿಧಿಸಿದೆ. ಹೈದರಾಬಾದ್​ನಲ್ಲಿ ನಡೆದ ಮೊದಲ ಏಕದಿನ ಪಂದ್ಯಕ್ಕೆದಲ್ಲಿ ರೋಹಿತ್ (Rohit Sharma) ಬಳಗ ನಿಗಧಿತ ಸಮಯಕ್ಕೆ ಓವರ್ ಮುಗಿಸದ ಕಾರಣ ಈ ದಂಡ ಹಾಕಲಾಗಿದೆ. ಹೈದರಾಬಾದ್ ಏಕದಿನ ಪಂದ್ಯದಲ್ಲಿ ಭಾರತ ತಂಡ ನಿಗದಿತ ಸಮಯಕ್ಕೆ 3 ಓವರ್ ಕಡಿಮೆ ಬೌಲಿಂಗ್ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಐಸಿಸಿ ನೀತಿ ಸಂಹಿತೆಯ (ICC Code of Conduct) ಕಲಂ 2.22ರ ಅಡಿಯಲ್ಲಿ ಭಾರತ ತಂಡಕ್ಕೆ ದಂಡ ವಿಧಿಸಲಾಗಿದೆ.

ಐಸಿಸಿ ವಿಧಿಸಿರುವ ದಂಡದ ಪ್ರಕಾರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಪಂದ್ಯ ಶುಲ್ಕ ಶೇ.60ರಷ್ಟು ಕಡಿತವಾಗಲಿದೆ. ಅದೇ ಸಮಯದಲ್ಲಿ, ಉಳಿದ ಆಟಗಾರರ ಪಂದ್ಯದ ಶುಲ್ಕದಿಂದ ಶೇಕಡಾ 20 ರಷ್ಟು ಮೊತ್ತವನ್ನು ಕಡಿತಗೊಳಿಸಲಾಗುತ್ತದೆ.

3 ಓವರ್ ಕಡಿಮೆ ಬೌಲ್ ಮಾಡಿದ ಭಾರತ

ಹೈದರಾಬಾದ್‌ನಲ್ಲಿ ಮೊದಲ ಏಕದಿನ ಪಂದ್ಯ ಮುಗಿದಾಗ ಟೀಂ ಇಂಡಿಯಾ ನಿಗದಿತ ಸಮಯದಲ್ಲಿ 3 ಓವರ್ ಕಡಿಮೆ ಬೌಲ್ ಮಾಡಿರುವುದರ ಬಗ್ಗೆ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ಐಸಿಸಿ ಗಮನಕ್ಕೆ ತಂದ ಬಳಿಕ ದಂಡ ವಿಧಿಸಲಾಗಿದೆ. ವಾಸ್ತವವಾಗಿ, ಐಸಿಸಿ ನಿಯಮಗಳ ಪ್ರಕಾರ, ಆಟಗಾರರು ನಿಗದಿತ ಸಮಯದಲ್ಲಿ ಬೌಲ್ ಮಾಡದ ಪ್ರತಿ ಓವರ್‌ಗೆ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯ ಪಂದ್ಯ ಶುಲ್ಕವನ್ನು ಕಡಿತಗೊಳಿಸಲಾಗುತ್ತದೆ.

15 ಸಿಕ್ಸರ್, 15 ಬೌಂಡರಿ, 192 ರನ್‌ಗಳ ಜೊತೆಯಾಟ! ವಿಶ್ವದಾಖಲೆ ಮುರಿದ ಶಕೀಬ್-ಇಫ್ತಿಕರ್

ತಪ್ಪು ಒಪ್ಪಿಕೊಂಡ ರೋಹಿತ್ ಶರ್ಮಾ

ಆನ್ ಫೀಲ್ಡ್ ಅಂಪೈರ್​ಗಳಾದ ಅನಿಲ್ ಚೌಧರಿ, ನಿತಿನ್ ಮೆನನ್, ಮೂರನೇ ಅಂಪೈರ್ ಕೆಎನ್ ಅನಂತಪದ್ಮನಾಭನ್ ಮತ್ತು ನಾಲ್ಕನೇ ಅಂಪೈರ್ ಜಯರಾಮನ್ ಮದನಗೋಪಾಲ್ ಟೀಂ ಇಂಡಿಯಾ ಸ್ಲೋ ಓವರ್ ಮಾಡಿರುವುದಾಗಿ ದೂರು ನೀಡಿದ್ದರು. ಅಂಪೈರ್‌ಗಳ ದೂರಿನ ನಂತರ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಆದ್ದರಿಂದ ಈ ಬಗ್ಗೆ ಯಾವುದೇ ವಿಚಾರಣೆಯ ಅಗತ್ಯವಿಲ್ಲ ಎಂದು ಐಸಿಸಿ ಹೇಳಿದೆ.

ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಗೆಲುವು

ಹೈದರಾಬಾದ್​ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 12 ರನ್‌ಗಳಿಂದ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಆಡಿದ ಟೀಂ ಇಂಡಿಯಾ 50 ಓವರ್‌ಗಳಲ್ಲಿ 349 ರನ್ ಗಳಿಸಿತು. ಭಾರತದ ಪರ ಶುಭ್​ಮನ್ ಗಿಲ್ 146 ಎಸೆತಗಳಲ್ಲಿ 19 ಬೌಂಡರಿ ಮತ್ತು 9 ಸಿಕ್ಸರ್‌ಗಳ ನೆರವಿನಿಂದ ದಾಖಲೆಯ 208 ರನ್ ಬಾರಿಸಿದರು. ಭಾರತ ನೀಡಿದ್ದ 350 ರನ್ ಗಳ ಗುರಿ ಬೆನ್ನತ್ತಿದ್ದ ಕಿವೀಸ್ ತಂಡ ಕೂಡ ಉತ್ತಮ ಹೋರಾಟ ನಡೆಸಿತು. ತಂಡದ ಪರವಾಗಿ ಮೈಕಲ್ ಬ್ರೇಸ್‌ವೆಲ್ ಬಿರುಸಿನ ಶತಕ ಗಳಿಸಿದರು. ಆದರೆ ಗೆಲುವಿಗೆ ಕೇವಲ 12 ರನ್‌ಗಳ ಬೇಕಿದ್ದಾಗ ಕಿವೀಸ್ ತಂಡ ಆಲೌಟ್ ಆಗುವ ಮೂಲಕ ಪಂದ್ಯವನ್ನು ಕಳೆದುಕೊಂಡಿತು.

ಇದೀಗ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಜನವರಿ 21 ರಂದು ರಾಯ್‌ಪುರದಲ್ಲಿ ನಡೆಯಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Fri, 20 January 23

ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್