ನ್ಯೂಜಿಲ್ಯಾಂಡ್‌ ವಿರುದ್ಧ ಟೆಸ್ಟ್​​ ಸರಣಿಗೆ ಭಾರತ ತಂಡ ಪ್ರಕಟ, ಜಸ್‌ಪ್ರಿತ್ ಬುಮ್ರಾ ಉಪನಾಯಕ

ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟವಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂದು(ಕಅ್ಟೋಬರ್ 11) 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಹಾಗಾದ್ರೆ, ಕಿವೀಸ್ ವಿರುದ್ಧ ಟೆಸ್ಟ್​​ ಸರಣಿಗೆ ಯಾರ್ಯಾರು ಆಯ್ಕೆಯಾಗಿದ್ದಾರೆ ಎನ್ನುವ ಪಟ್ಟಿ ಇಲ್ಲಿದೆ.

ನ್ಯೂಜಿಲ್ಯಾಂಡ್‌ ವಿರುದ್ಧ ಟೆಸ್ಟ್​​ ಸರಣಿಗೆ ಭಾರತ ತಂಡ ಪ್ರಕಟ, ಜಸ್‌ಪ್ರಿತ್ ಬುಮ್ರಾ ಉಪನಾಯಕ
ಕಿವೀಸ್​ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ
Follow us
|

Updated on:Oct 11, 2024 | 11:35 PM

ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂದು (ಅಕ್ಟೋಬರ್ 11) 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ ಭಾರತ 2-0 ಅಂತರದಿಂದ ಗೆದ್ದ ಅದೇ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದೆ.  ಕೇವಲ ಒಂದು ಬದಲಾವಣೆ ಮಾಡಿದ್ದರಿಂದ ತಂಡದಲ್ಲಿ ವಿಶೇಷವಾದ ಬದಲಾವಣೆಗಳು ಇಲ್ಲ.

ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ವೇಗಿ ಜಸ್‌ಪ್ರೀತ್ ಬುಮ್ರಾ (Jasprit Bumrah) ತಂಡ ಉಪನಾಯಕರಾಗಿದ್ದಾರೆ.  ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್‌ಗಳಲ್ಲಿ ಆಡುವ 11ರ ಬಳಗದಲ್ಲಿ ಅವಕಾಶ ಪಡೆಯಲು ವಿಫಲವಾದ ಯುವ ವೇಗಿ ಯಶ್ ದಯಾಲ್ ಅವರನ್ನು ಕೈಬಿಡಲಾಗಿದೆ. ಇನ್ನು ನ್ಯೂಜಿಲೆಂಡ್ ಸರಣಿಗೆ ಮೂವರು ವೇಗದ ಬೌಲರ್​ಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಆಕಾಶ್ ದೀಪ್ ಅವರನ್ನು ಆಯ್ಕೆ ಮಾಡಿರುವುದು ವಿಶೇಷ. ಆದರೆ ಅನುಭವಿ ಬೌಲರ್ ಮೊಹಮ್ಮದ್ ಶಮಿ ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದರಿಂದ ಅವರನ್ನು ಕೈಬಿಡಲಾಗಿದೆ.

ಅಕ್ಟೋಬರ್ 17 ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಮೊದಲ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇದನ್ನೂ ಓದಿ: IND vs AUS: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಅನುಮಾನ..!

ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಜಸ್‌ಪ್ರಿತ್‌ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ಆಕಾಶ್ ದೀಪ್.

ಜಸ್ಪ್ರೀತ್ ಬುಮ್ರಾ ಇತ್ತೀಚೆಗೆ ಐಸಿಸಿ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ತಮ್ಮ ಸಹ ಆಟಗಾರ ರವಿಚಂದ್ರನ್ ಅಶ್ವಿನ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನ ಮರಳಿ ಪಡೆದಿದ್ದರು. ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಎರಡು ಪಂದ್ಯಗಳಿಂದ 12.81ರ ಸರಾಸರಿಯಲ್ಲಿ 11 ವಿಕೆಟ್ ಪಡೆದ ವೇಗಿ ಜಂಟಿಯಾಗಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಹೀಗೆ ಬುಮ್ರಾ ಹಲವಾರು ವರ್ಷಗಳಿಂದ ಸುದೀರ್ಘ ಸ್ವರೂಪದಲ್ಲಿ ಅದ್ಭುತ ಪ್ರದರ್ಶನ ನೀಡಿದ ಕಾರಣ ಟೆಸ್ಟ್ ತಂಡದ ಉಪನಾಯಕರಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:31 pm, Fri, 11 October 24

ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ