IND vs NZ: ಯುವ ಆಟಗಾರನನ್ನು ತಂಡದಿಂದ ಕೈಬಿಟ್ಟ ಟೀಮ್ ಇಂಡಿಯಾ

India vs New Zealand 3rd T20: ಭಾರತ-ನ್ಯೂಜಿಲೆಂಡ್ ನಡುವಣ 3ನೇ ಟಿ20 ಪಂದ್ಯವು ಬುಧವಾರ ನಡೆಯಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ನಿರ್ಣಾಯಕವಾಗಿದೆ.

IND vs NZ: ಯುವ ಆಟಗಾರನನ್ನು ತಂಡದಿಂದ ಕೈಬಿಟ್ಟ ಟೀಮ್ ಇಂಡಿಯಾ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 31, 2023 | 5:30 PM

India vs New Zealand 3rd T20: ಭಾರತ-ನ್ಯೂಜಿಲೆಂಡ್ ನಡುವಣ 3ನೇ ಟಿ20 ಪಂದ್ಯವು ಬುಧವಾರ ಅಹಮದಾಬಾದ್​ನಲ್ಲಿ ನಡೆಯಲಿದೆ.  ಈ ಪಂದ್ಯಕ್ಕೂ ಮುನ್ನ ಭಾರತ ತಂಡದಿಂದ ಬಲಗೈ ವೇಗಿ ಮುಖೇಶ್ ಕುಮಾರ್ ಅವರನ್ನು ಕೈ ಬಿಡಲಾಗಿದೆ. ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಮುಖೇಶ್ ಇದುವರೆಗೆ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿಲ್ಲ. ಇತ್ತ ಮೂರನೇ ಪಂದ್ಯದಲ್ಲಿ ಚೊಚ್ಚಲ ಅವಕಾಶದ ನಿರೀಕ್ಷೆಯಲ್ಲಿದ್ದ ಯುವ ವೇಗಿಯನ್ನು ತಂಡದಿಂದ ಕೈ ಬಿಟ್ಟಿದ್ದಾರೆ. ಅಲ್ಲದೆ ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ.

ಅದರಂತೆ ಇದೀಗ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ಮುಖೇಶ್ ಕುಮಾರ್ ಮತ್ತೆ ಕಣಕ್ಕಿಳಿದಿದ್ದಾರೆ. ಇತ್ತ ಟೀಮ್ ಇಂಡಿಯಾ ಪರ ಮೊದಲೆರಡು ಮ್ಯಾಚ್​ನಲ್ಲಿ ಬೆಂಚ್ ಕಾದಿದ್ದ ಆಟಗಾರನಿಗೆ ಮೂರನೇ ಪಂದ್ಯಕ್ಕೂ ಮುನ್ನ ರಣಜಿ ಟೂರ್ನಿ ಆಡುವಂತೆ ತಿಳಿಸಲಾಗಿದೆ. ಹೀಗಾಗಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬೆಂಗಾಲ್ ಪರ ಕಣಕ್ಕಿಳಿದಿದ್ದಾರೆ.

ಮುಖೇಶ್ ಕುಮಾರ್

ಮಂಗಳವಾರದಿಂದ ಶುರುವಾಗಿರುವ ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ಮುಖೇಶ್ ಕುಮಾರ್ ಕಣಕ್ಕಿಳಿದಿದ್ದು, ಮೊದಲ ದಿನದಾಟದಲ್ಲಿ 21 ಓವರ್​ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 61 ರನ್ ನೀಡಿ 3 ವಿಕೆಟ್ ಕಬಳಿಸಿದ್ದಾರೆ. ಹೀಗಾಗಿ ಫೆಬ್ರವರಿ 1 ರಂದು ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಮುಖೇಶ್ ಕುಮಾರ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

ಇದನ್ನೂ ಓದಿ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
Image
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Image
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
Image
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

Also Read: ICC Rankings 2023: ಐಸಿಸಿ ರ‍್ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾದ ಮೂವರು ನಂಬರ್ 1

ಇತ್ತ ಮುಖೇಶ್ ಕುಮಾರ್ ಅವರ ಅನುಪಸ್ಥಿತಿಯ ನಡುವೆಯೂ ತಂಡದಲ್ಲಿ ವೇಗಿಗಳಾಗಿ ಅರ್ಷದೀಪ್ ಸಿಂಗ್, ಶಿವಂ ಮಾವಿ ಹಾಗೂ ಉಮ್ರಾನ್ ಮಲಿಕ್ ಇದ್ದಾರೆ. ಇದಾಗ್ಯೂ ಭಾರತ ತಂಡವು ಮೂರನೇ ಪಂದ್ಯದಲ್ಲೂ ಉಮ್ರಾನ್ ಮಲಿಕ್​ಗೆ ಅವಕಾಶ ಸಿಗುವುದು ಅನುಮಾನ. ಏಕೆಂದರೆ ಕಳೆದ ಪಂದ್ಯದಲ್ಲಿ ಮೂವರು ಸ್ಪಿನ್ನರ್ ಹಾಗೂ ಹಾರ್ದಿಕ್ ಪಾಂಡ್ಯ ಸೇರಿದಂತೆ ಮೂವರು ವೇಗಿಗಳು ಕಣಕ್ಕಿಳಿದಿದ್ದರು. ಇದೀಗ ಮೂರನೇ ಪಂದ್ಯ ನಡೆಯಲಿರುವ ಅಹಮದಾಬಾದ್​ ಪಿಚ್​ ಸ್ಪಿನ್​ಗೆ ಸಹಕಾರಿಯಾಗಿರುವ ಕಾರಣ ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ಬೌಲರ್​ಗಳೇ 3ನೇ ಪಂದ್ಯದಲ್ಲೂ ಮುಂದುವರೆಯುವ ಸಾಧ್ಯತೆಯಿದೆ. ಇತ್ತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ. ಇದೇ ಕಾರಣದಿಂದಾಗಿ ಮುಖೇಶ್ ಕುಮಾರ್​ ಅವರಿಗೆ ರಣಜಿ ಟೂರ್ನಿ ಆಡುವಂತೆ ಸೂಚಿಸಲಾಗಿದೆ.

ಟೀಮ್ ಇಂಡಿಯಾ ಟಿ20 ತಂಡ:

ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್​ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್.