2023ರ ವಿಶ್ವಕಪ್‌ನಲ್ಲಿ (ICC World Cup 2023) ಭಾರತ ಮತ್ತು ನ್ಯೂಜಿಲೆಂಡ್ (India Vs New Zealand) ತಂಡಗಳು ಇಂದು ಧರ್ಮಶಾಲಾದಲ್ಲಿ ಮುಖಾಮುಖಿಯಾಗಿವೆ. ಸೋಲು-ಗೆಲುವಿನ ಫಲಿತಾಂಶದ ಹೊರತಾಗಿ, ಈ ಪಂದ್ಯದ ಗೆಲುವು ಉಭಯ ತಂಡಗಳಿಗೂ ಮುಖ್ಯವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಸಿಗಲಿದೆ. ವಿಶೇಷವೆಂದರೆ ಟೂರ್ನಿಯಲ್ಲಿ ಎರಡೂ ತಂಡಗಳು ಅಜೇಯವಾಗಿವೆ. ಅಂದರೆ ಇಂದು ಯಾವ ತಂಡ ಸೋತರೂ ಅದು ಆ ತಂಡದ ಮೊದಲ ಸೋಲಾಗಲಿದೆ. ಅದೇನೇ ಇರಲಿ, ಈ ಪಂದ್ಯದ ಟಾಸ್ ಈಗಾಗಲೇ ನಡೆದಿದ್ದು, ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಟಾಸ್ ಮುಗಿದ ನಂತರ ಎರಡೂ ತಂಡಗಳು ತಮ್ಮ ಪ್ಲೇಯಿಂಗ್ ಇಲೆವೆನ್ ಅನ್ನು ಘೋಷಿಸಿದ್ದು, ಭಾರತ ತಂಡದಲ್ಲಿ ಬದಲಾವಣೆಗಳಾಗಿದ್ದರೆ, ಕಿವೀಸ್ ತಂಡ ಯಾವುದೇ ಬದಲಾವಣೆ ಮಾಡದೆ ಕಣಕ್ಕಿಳಿದಿದೆ.
ಈ ವಿಶ್ವಕಪ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ಗೆ ಇದು 5 ನೇ ಪಂದ್ಯವಾಗಿದೆ. ಇದಕ್ಕೂ ಮುನ್ನ ಉಭಯ ತಂಡಗಳು ತಲಾ 4 ಪಂದ್ಯಗಳನ್ನು ಆಡಿದ್ದು, ನಾಲ್ಕರಲ್ಲೂ ಗೆಲುವು ಸಾಧಿಸಿವೆ. ಉತ್ತಮ ರನ್ ರೇಟ್ ಆಧಾರದ ಮೇಲೆ ನ್ಯೂಜಿಲೆಂಡ್ ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪ್ರಸ್ತುತ ಭಾರತ ತಂಡ ಎರಡನೇ ಸ್ಥಾನದಲ್ಲಿದೆ. ಆದರೆ ಇಂದಿನ ಪಂದ್ಯದ ನಂತರ ಪಾಯಿಂಟ್ ಪಟ್ಟಿಯಲ್ಲಿ ಬದಲಾವಣೆ ಕಾಣುವುದು ಖಚಿತವಾಗಿದೆ.
IND vs NZ ICC World Cup 2023 Live Score: ಟೀಮ್ ಇಂಡಿಯಾಗೆ ಮೊದಲ ಯಶಸ್ಸು
ಪ್ಲೇಯಿಂಗ್ ಇಲೆವೆನ್ ಬಗ್ಗೆ ಹೇಳುವುದಾದರೆ, ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳಾಗಿದ್ದರೆ, ನ್ಯೂಜಿಲೆಂಡ್‌ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಿವೀಸ್ ತಂಡವು ತನ್ನ ಗೆಲುವಿನ ಸಂಯೋಜನೆಯೊಂದಿಗೆ ಅಖಾಡಕ್ಕಿಳಿದಿದ್ದರೆ, ಅದೇ ಸಮಯದಲ್ಲಿ, ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಹಾರ್ದಿಕ್ ಪಾಂಡ್ಯ ಮತ್ತು ಶಾರ್ದೂಲ್ ಠಾಕೂರ್ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಹಾರ್ದಿಕ್ ಬದಲಿಗೆ ಸೂರ್ಯಕುಮಾರ್ ಯಾದವ್ ಮತ್ತು ಶಾರ್ದೂಲ್ ಬದಲಿಗೆ ಶಮಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸೂರ್ಯಕುಮಾರ್ ಯಾದವ್ ಕೂಡ ಈ ಪಂದ್ಯದೊಂದಿಗೆ ವಿಶ್ವಕಪ್‌ಗೆ ಪಾದಾರ್ಪಣೆ ಮಾಡಲಿದ್ದಾರೆ.
ಭಾರತದ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.
🚨 Toss and Team Update 🚨
Rohit Sharma wins the toss and #TeamIndia have elected to bowl first in Dharamsala!
Two changes in the side as Suryakumar Yadav & Mohd. Shami are named in the eleven 👌
Follow the match ▶️ https://t.co/Ua4oDBM9rn#CWC23 | #MenInBlue | #INDvNZ pic.twitter.com/6dy150WC1S
— BCCI (@BCCI) October 22, 2023
ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಟಾಮ್ ಲೇಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:10 pm, Sun, 22 October 23