ಸೂಪರ್​ ವುಮನ್ ಕ್ಯಾಚ್: ಅತ್ಯದ್ಭುತ ಡೈವಿಂಗ್ ಕ್ಯಾಚ್ ಹಿಡಿದ ರಾಧಾ ಯಾದವ್

India Women vs New Zealand Women: ಭಾರತ ಮತ್ತು ನ್ಯೂಝಿಲೆಂಡ್ ಮಹಿಳಾ ತಂಡಗಳ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ್ತಿ ರಾಧಾ ಯಾದವ್ ಅತ್ಯದ್ಭುತ ಡೈವಿಂಗ್ ಕ್ಯಾಚ್ ಹಿಡಿದಿದ್ದಾರೆ. ಈ ಅದ್ಭುತ ಫೀಲ್ಡಿಂಗ್ ವಿಡಿಯೋ ಇದೀಗ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ಪಡೆದುಕೊಳ್ಳುತ್ತಿದೆ.

Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 28, 2024 | 8:21 AM

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ಮಹಿಳಾ ತಂಡದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ್ತಿ ರಾಧಾ ಯಾದವ್ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಪರಿಣಾಮ 31 ಓವರ್​ಗಳ ವೇಳೆ ನ್ಯೂಝಿಲೆಂಡ್ ತಂಡವು 135 ರನ್​ಗಳನ್ನು ಕಲೆಹಾಕಿತ್ತು. ಈ ಹಂತದಲ್ಲಿ ದಾಳಿಗಿಳಿದ ಆರುಂಧತಿ ಪ್ರಿಯಾ ಮಿಶ್ರಾ ಇಂಡಿಯಾಗೆ ಅಮೂಲ್ಯ ಯಶಸ್ಸು ತಂದುಕೊಟ್ಟರು. ಈ ಯಶಸ್ಸಿಗೆ ಕಾರಣಕರ್ತರಾಗಿದ್ದು ರಾಧಾ ಯಾದವ್.

ಪಂದ್ಯದ 32ನೇ ಓವರ್​ನ ಮೂರನೇ ಎಸೆತದಲ್ಲಿ ಬ್ರೂಕ್ ಹಾಲ್ಲಿಡೆ ಆಫ್ ಸೈಡ್​ನತ್ತ ಬಾರಿಸಿದ್ದರು. ಚೆಂಡು 30-ಯಾರ್ಡ್-ಸರ್ಕಲ್‌ನ ಹೊರಗೆ ಬೀಳಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಇನ್​ ಫೀಲ್ಡ್​ನಲ್ಲಿದ್ದ ರಾಧಾ ಯಾದವ್ ಹಿಮ್ಮುಖವಾಗಿ ಓಡಿ ಹೋಗಿ ಅದ್ಭುತ ಡೈವಿಂಗ್​​ನೊಂದಿಗೆ ಕ್ಯಾಚ್ ಹಿಡಿದರು.

ರಾಧಾ ಯಾದವ್ ಅವರ ಈ ಸ್ಟನ್ನಿಂಗ್ ಕ್ಯಾಚ್ ನೋಡಿ ಪ್ರೇಕ್ಷಕರು ಕೂಡ ನಿಬ್ಬೆರಗಾದರು. ಇದೀಗ ಟೀಮ್ ಇಂಡಿಯಾ ಆಟಗಾರ್ತಿಯ ಅತ್ಯುತ್ತಮ ಫೀಲ್ಡಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 259 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 47.1 ಓವರ್​ಗಳಲ್ಲಿ 183 ರನ್​ಗಳಿಗೆ ಆಲೌಟ್ ಆಗಿ 76 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ