IND vs NZ, ICC World Cup: ಗನ್, ಗ್ರೆನೇಡ್ ತೋರಿಸಿ ಟ್ವೀಟ್: ಭಾರತ-ನ್ಯೂಝಿಲೆಂಡ್ ಸೆಮಿಫೈನಲ್ ಪಂದ್ಯಕ್ಕೆ ಉಗ್ರರ ಸಂಚು?
Mumbai Police : ಭಾರತ-ನ್ಯೂಝಿಲೆಂಡ್ ಸೆಮಿಫೈನಲ್ ಪಂದ್ಯಕ್ಕೆ ಉಗ್ರರು ಸಂಚು ರೂಪಿಸಿದ್ದಾರಾ? ಎಂಬ ಅನುಮಾನು ವ್ಯಕ್ತವಾಗಿದೆ. ಯಾಕೆಂದರೆ, ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಪಂದ್ಯದ ನಡುವೆ ಅಮಾನವೀಯ ಘಟನೆಯನ್ನು ನಡೆಸಲಾಗುವುದು ಎಂದು ಅಪರಿಚಿತ ವ್ಯಕ್ತಿಯೊಬ್ಬರು ಮುಂಬೈ ಪೊಲೀಸರಿಗೆ X (ಹಿಂದಿನ ಟ್ವಿಟ್ಟರ್) ನಲ್ಲಿ ಬೆದರಿಕೆ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಭಾರತ ಹಾಗೂ ನ್ಯೂಝಿಲೆಂಡ್ (India vs New Zealand) ನಡುವೆ ಮಹತ್ವದ ಸೆಮಿಫೈನಲ್ ಪಂದ್ಯವನ್ನು ಆಯೋಜಿಸಲಾಗಿದೆ. ಮುಂಬೈನ ಪ್ರಸಿದ್ಧ ವಾಂಖೆಡೆ ಸ್ಟೇಡಿಯಂ ಈ ಹೈವೋಲ್ಟೇಜ್ ಕದನಕ್ಕೆ ಸಜ್ಜಾಗುತ್ತಿದೆ. ಇನ್ನೇನು ಕೆಲವೇ ಹೊತ್ತಿನಲ್ಲಿ ಆಟಗಾರರು ಮೈದಾನಕ್ಕೆ ಆಗಮಿಸಲಿದ್ದಾರೆ. ಅಭಿಮಾನಿಗಳು ಬೆಳಗ್ಗಿನಿಂದಲೇ ಸ್ಟೇಡಿಯಂ ಬಳಿ ಬಂದು ಭಾರತಕ್ಕೆ ಶುಭಕೋರುತ್ತಿದ್ದಾರೆ. ಇದರ ನಡುವೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.
ಭಾರತ-ನ್ಯೂಝಿಲೆಂಡ್ ಸೆಮಿಫೈನಲ್ ಪಂದ್ಯಕ್ಕೆ ಉಗ್ರರು ಸಂಚು ರೂಪಿಸಿದ್ದಾರಾ? ಎಂಬ ಅನುಮಾನ ವ್ಯಕ್ತವಾಗಿದೆ. ಯಾಕೆಂದರೆ, ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಪಂದ್ಯದ ನಡುವೆ ಅಮಾನವೀಯ ಘಟನೆಯನ್ನು ನಡೆಸಲಾಗುವುದು ಎಂದು ಅಪರಿಚಿತ ವ್ಯಕ್ತಿಯೊಬ್ಬರು ಮುಂಬೈ ಪೊಲೀಸರಿಗೆ X (ಹಿಂದಿನ ಟ್ವಿಟ್ಟರ್) ನಲ್ಲಿ ಬೆದರಿಕೆ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. ವಾಂಖೆಡೆ ಸ್ಟೇಡಿಯಂ ಬಳಿ ಇರುವ ಕೆಲ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದ್ದಾರಂತೆ. ವ್ಯಕ್ತಿ ತಾನು ಹಂಚಿಕೊಂಡಿರುವ ಫೋಟೋದಲ್ಲಿ ಗನ್, ಹ್ಯಾಂಡ್ ಗ್ರೆನೇಡ್ ಮತ್ತು ಬುಲೆಟ್‌ಗಳನ್ನು ತೋರಿಸಿ, ಮುಂಬೈ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ.
Mumbai Police say, “An unidentified person posted a threat message to Mumbai Police on X (formerly Twitter) that a nefarious incident would be executed during the India vs New Zealand at Wankhede Stadium today. Strict vigilance is being done in the area around the stadium and…
— ANI (@ANI) November 15, 2023
ಸದ್ಯ ಪೊಲೀಸರು ಮುಂಬೈ ನಗರದಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ. ಬೆದರಿಕೆ ಸಂದೇಶ ಕಳುಹಿಸದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಂದ್ಯಕ್ಕೆ ಹಾಜರಾಗುವ ಪ್ರೇಕ್ಷಕರನ್ನು ಸಂಪೂರ್ಣವಾಗಿ ಪರಿಶೀಲಿಸಿ ನಂತರವೇ ಸ್ಟೇಡಿಯಂ ಒಳಗೆ ಬಿಡಲಿದ್ದಾರೆ. ವಾಂಖೆಡೆ ಸ್ಟೇಡಿಯಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಮುಂಬೈನ ಪ್ರಸಿದ್ಧ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಭಾರತ-ನ್ಯೂಝಿಲೆಂಡ್ ನಡುವೆ ಹೈವೋಲ್ಟೇಜ್ ಪಂದ್ಯ ಮಿರೀಕ್ಷಿಸಲಾಗಿದೆ. ಭಾರತಕ್ಕೆ ಇದೊಂದು ಸೇಡಿನ ಪಂದ್ಯ ಎಂದು ಕೂಡ ಹೇಳಬಹುದು. ಯಾಕೆಂದರೆ, ಕಿವೀಸ್ ವಿರುದ್ಧ 2019 ರ ವಿಶ್ವಕಪ್ ಸೆಮಿ-ಫೈನಲ್ನಲ್ಲಿ ಭಾರತ ಸೋತು ಟೂರ್ನಿಯಿಂದ ನಿರ್ಗಮಿಸಿತ್ತು. ಈಗ ಮತ್ತೊಮ್ಮೆ ಉಭಯ ತಂಡಗಳು ಸೆಮಿಫೈನಲ್ನಲ್ಲಿ ಸೆಣೆಸಾಟ ನಡೆಸಲು ಸಜ್ಜಾಗುತ್ತಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:45 am, Wed, 15 November 23