AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ವಿಶ್ವಕಪ್ ಸೆಮಿಫೈನಲ್​​ನಲ್ಲಿ 5ನೇ ಶತಕ ದಾಖಲಿಸಿದ ಶ್ರೇಯಸ್ ಅಯ್ಯರ್

World Cup Semi Final: ಅಭಿಮಾನಿಗಳ ನಿರೀಕ್ಷೆಯಂತೆ ವಿರಾಟ್​ ಕೊಹ್ಲಿ 50ನೇ ಶತಕ ಬಾರಿಸಿದ್ದಾರೆ. ಅದೇ ರೀತಿಯಾಗಿ ಮತ್ತೊಂದೆಡೆ ಬಿರುಸಿನ ಬ್ಯಾಟಿಂಗ್ ನಡೆಸಿದ್ದ ಶ್ರೇಯಸ್ ಅಯ್ಯರ್ 67 ಎಸೆತದಲ್ಲಿ ತಮ್ಮ ಭರ್ಜರಿ 5ನೇ ಶತಕ ದಾಖಲಿಸಿದ್ದಾರೆ. ರೋಹಿತ್ ಶರ್ಮಾ ಬಳಿಕ ODI ವಿಶ್ವಕಪ್ ಇತಿಹಾಸದಲ್ಲಿ ಬ್ಯಾಕ್ ಟು ಬ್ಯಾಕ್ ಶತಕಗಳನ್ನು ಸಿಡಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಶ್ರೇಯಸ್ ಅಯ್ಯರ್​ ಪಾತ್ರರಾಗಿದ್ದಾರೆ.     

IND vs NZ: ವಿಶ್ವಕಪ್ ಸೆಮಿಫೈನಲ್​​ನಲ್ಲಿ 5ನೇ ಶತಕ ದಾಖಲಿಸಿದ ಶ್ರೇಯಸ್ ಅಯ್ಯರ್
ಶ್ರೇಯಸ್ ಅಯ್ಯರ್
ಗಂಗಾಧರ​ ಬ. ಸಾಬೋಜಿ
|

Updated on:Nov 15, 2023 | 7:18 PM

Share

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium in Mumbai) ನಡೆಯುತ್ತಿರುವ ವಿಶ್ವಕಪ್ 2023ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ತಂಡ 398 ರನ್​ಗಳ ಟಾರ್ಗೆಟ್ ನೀಡಿದೆ. ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ 50ನೇ ಶತಕ ದಾಖಲಿಸಿದ್ದಾರೆ. ಅದೇ ರೀತಿಯಾಗಿ ಮತ್ತೊಂದೆಡೆ ಬಿರುಸಿನ ಬ್ಯಾಟಿಂಗ್ ನಡೆಸುತ್ತಿದ್ದ ಶ್ರೇಯಸ್ ಅಯ್ಯರ್ 67 ಎಸೆತದಲ್ಲಿ ತಮ್ಮ 5ನೇ ಶತಕ ದಾಖಲಿಸಿದ್ದಾರೆ.

ಶ್ರೇಯಸ್ ಅಯ್ಯರ್​ ತಮ್ಮ ಚೊಚ್ಚಲ ವಿಶ್ವಕಪ್ ಆವೃತ್ತಿಯಲ್ಲಿ 500 ಕ್ಕೂ ಹೆಚ್ಚು ರನ್​ ಗಳಿಸಿದ ಮೊದಲ ಭಾರತೀಯ ಕ್ರಿಕೆಟಿಗರಾಗಿದ್ದು, ರೋಹಿತ್ ಶರ್ಮಾ ಬಳಿಕ ODI ವಿಶ್ವಕಪ್ ಇತಿಹಾಸದಲ್ಲಿ ಬ್ಯಾಕ್ ಟು ಬ್ಯಾಕ್ ಶತಕಗಳನ್ನು ಸಿಡಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಇದನ್ನೂ ಓದಿ: IND vs NZ: ವಾಂಖೆಡೆಯಲ್ಲಿ ರನ್​ಗಳ ಸುನಾಮಿ ಎಬ್ಬಿಸಿದ ಭಾರತ; ಕಿವೀಸ್​ಗೆ 398 ರನ್ ಟಾರ್ಗೆಟ್

ಶ್ರೇಯಸ್ ಅಯ್ಯರ್ ಈ ಬಾರಿಯ ವಿಶ್ವಕಪ್‌ನಲ್ಲಿ ಮೂರು ಅರ್ಧಶತಕ ಮತ್ತು ಎರಡು ಶತಕಗಳೊಂದಿಗೆ ಏಕದಿನದಲ್ಲಿ ತಮ್ಮ ಅತ್ಯುತ್ತಮ ಆಟವನ್ನು ಕಾಯ್ದುಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ ಈ ಹಿಂದಿನ ನೆದರ್ಲ್ಯಾಂಡ್ಸ್ ವಿರುದ್ಧ ಪಂದ್ಯದಲ್ಲಿ ಶತಕವನ್ನು ಗಳಿಸಿದ್ದರು. ಆದರೆ ಇದೀಗ ಅವರು ಮಾಡಿರುವ ಸಾಧನೆ ಮತ್ತೊಂದು ಮೈಲಿಗಲ್ಲು ಸೃಷ್ಟಿಸಲಿದೆ.

ಚೊಚ್ಚಲ ODI ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್​ ಗಳಿಸಿದವರು 

  • ರಚಿನ್ ರವೀಂದ್ರ: 9 ​​ಇನ್ನಿಂಗ್ಸ್‌ಗಳಲ್ಲಿ 565 ರನ್, 2023
  • ಜಾನಿ ಬೈರ್‌ಸ್ಟೋ: 11 ಇನ್ನಿಂಗ್ಸ್‌ನಲ್ಲಿ 532 ರನ್, 2019
  • ಶ್ರೇಯಸ್ ಅಯ್ಯರ್: 10 ಇನ್ನಿಂಗ್ಸ್‌ಗಳಲ್ಲಿ 522 ರನ್, 2023

ಇದನ್ನೂ ಓದಿ: Virat Kohli Century: 50ನೇ ಏಕದಿನ ಶತಕ; ಕ್ರಿಕೆಟ್ ದೇವರ ದಾಖಲೆ ಮುರಿದ ಕಿಂಗ್..!

ಶ್ರೇಯಸ್ ಅಯ್ಯರ್ ವಿಶ್ವಕಪ್ ಇತಿಹಾಸದಲ್ಲಿ 4ನೇ ಕ್ರಮಾಂಕದಲ್ಲಿ ಅತಿ ಹೆಚ್ಚು ರನ್​ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

4ನೇ ಕ್ರಮಾಂಕದಲ್ಲಿ ಅತಿ ಹೆಚ್ಚು ರನ್​ ಗಳಿಸಿದವರು 

  • ಶ್ರೇಯಸ್ ಅಯ್ಯರ್: 10 ಇನ್ನಿಂಗ್ಸ್‌ಗಳಲ್ಲಿ 522 ರನ್, 2023
  • ಸ್ಕಾಟ್ ಸ್ಟೈರಿಸ್: 499 ರನ್, 2007
  • ಎಬಿ ಡಿವಿಲಿಯರ್ಸ್: 482 runs, 2015
  • ಬೆನ್ ಸ್ಟೋಕ್ಸ್: 465 runs in 2019

ಶ್ರೇಯಸ್ ಅಯ್ಯರ್ 70 ಎಸೆತಗಳಲ್ಲಿ 4 ಬೌಂಡರಿ, 8 ಸಿಕ್ಸರ್​ನೊಂದಿಗೆ 105 ರನ್​ ಗಳಿಸಿ ಔಟಾದರು. ಬಳಿಕ ಭಾರತ ತಂಡ 50 ಓವರ್​​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಸಿಡಿಸಿತು. ಈ ಪಂದ್ಯ ಗೆದ್ದವರು ಫೈನಲ್ ಪ್ರವೇಶಿಸಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:05 pm, Wed, 15 November 23

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ