ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium in Mumbai) ನಡೆಯುತ್ತಿರುವ ವಿಶ್ವಕಪ್ 2023ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ತಂಡ 398 ರನ್ಗಳ ಟಾರ್ಗೆಟ್ ನೀಡಿದೆ. ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ 50ನೇ ಶತಕ ದಾಖಲಿಸಿದ್ದಾರೆ. ಅದೇ ರೀತಿಯಾಗಿ ಮತ್ತೊಂದೆಡೆ ಬಿರುಸಿನ ಬ್ಯಾಟಿಂಗ್ ನಡೆಸುತ್ತಿದ್ದ ಶ್ರೇಯಸ್ ಅಯ್ಯರ್ 67 ಎಸೆತದಲ್ಲಿ ತಮ್ಮ 5ನೇ ಶತಕ ದಾಖಲಿಸಿದ್ದಾರೆ.
ಶ್ರೇಯಸ್ ಅಯ್ಯರ್ ತಮ್ಮ ಚೊಚ್ಚಲ ವಿಶ್ವಕಪ್ ಆವೃತ್ತಿಯಲ್ಲಿ 500 ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ ಕ್ರಿಕೆಟಿಗರಾಗಿದ್ದು, ರೋಹಿತ್ ಶರ್ಮಾ ಬಳಿಕ ODI ವಿಶ್ವಕಪ್ ಇತಿಹಾಸದಲ್ಲಿ ಬ್ಯಾಕ್ ಟು ಬ್ಯಾಕ್ ಶತಕಗಳನ್ನು ಸಿಡಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಇದನ್ನೂ ಓದಿ: IND vs NZ: ವಾಂಖೆಡೆಯಲ್ಲಿ ರನ್ಗಳ ಸುನಾಮಿ ಎಬ್ಬಿಸಿದ ಭಾರತ; ಕಿವೀಸ್ಗೆ 398 ರನ್ ಟಾರ್ಗೆಟ್
ಶ್ರೇಯಸ್ ಅಯ್ಯರ್ ಈ ಬಾರಿಯ ವಿಶ್ವಕಪ್‌ನಲ್ಲಿ ಮೂರು ಅರ್ಧಶತಕ ಮತ್ತು ಎರಡು ಶತಕಗಳೊಂದಿಗೆ ಏಕದಿನದಲ್ಲಿ ತಮ್ಮ ಅತ್ಯುತ್ತಮ ಆಟವನ್ನು ಕಾಯ್ದುಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ ಈ ಹಿಂದಿನ ನೆದರ್ಲ್ಯಾಂಡ್ಸ್ ವಿರುದ್ಧ ಪಂದ್ಯದಲ್ಲಿ ಶತಕವನ್ನು ಗಳಿಸಿದ್ದರು. ಆದರೆ ಇದೀಗ ಅವರು ಮಾಡಿರುವ ಸಾಧನೆ ಮತ್ತೊಂದು ಮೈಲಿಗಲ್ಲು ಸೃಷ್ಟಿಸಲಿದೆ.
ಚೊಚ್ಚಲ ODI ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರು
ಇದನ್ನೂ ಓದಿ: Virat Kohli Century: 50ನೇ ಏಕದಿನ ಶತಕ; ಕ್ರಿಕೆಟ್ ದೇವರ ದಾಖಲೆ ಮುರಿದ ಕಿಂಗ್..!
ಶ್ರೇಯಸ್ ಅಯ್ಯರ್ ವಿಶ್ವಕಪ್ ಇತಿಹಾಸದಲ್ಲಿ 4ನೇ ಕ್ರಮಾಂಕದಲ್ಲಿ ಅತಿ ಹೆಚ್ಚು ರನ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
4ನೇ ಕ್ರಮಾಂಕದಲ್ಲಿ ಅತಿ ಹೆಚ್ಚು ರನ್ ಗಳಿಸಿದವರು
ಶ್ರೇಯಸ್ ಅಯ್ಯರ್ 70 ಎಸೆತಗಳಲ್ಲಿ 4 ಬೌಂಡರಿ, 8 ಸಿಕ್ಸರ್ನೊಂದಿಗೆ 105 ರನ್ ಗಳಿಸಿ ಔಟಾದರು. ಬಳಿಕ ಭಾರತ ತಂಡ 50 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಸಿಡಿಸಿತು. ಈ ಪಂದ್ಯ ಗೆದ್ದವರು ಫೈನಲ್ ಪ್ರವೇಶಿಸಲಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:05 pm, Wed, 15 November 23