IND vs NZ: ಕಿವೀಸ್ ವಿರುದ್ಧದ ಮೊದಲ ಟೆಸ್ಟ್​ಗೆ ಭಾರತದ ಮಧ್ಯಮ ಕ್ರಮಾಂಕಕ್ಕೆ ಹೊಸ ಮುಖ

IND vs NZ: ಮಧ್ಯಮ ಕ್ರಮಾಂಕದಲ್ಲಿ ಆಡುವ ಬಲಗೈ ಬ್ಯಾಟ್ಸ್‌ಮನ್ ಮುಂಬೈ ರಣಜಿ ತಂಡ ಮತ್ತು ಭಾರತ-ಎ ಪರ 54 ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ.

IND vs NZ: ಕಿವೀಸ್ ವಿರುದ್ಧದ ಮೊದಲ ಟೆಸ್ಟ್​ಗೆ ಭಾರತದ ಮಧ್ಯಮ ಕ್ರಮಾಂಕಕ್ಕೆ ಹೊಸ ಮುಖ
ಶ್ರೇಯಸ್ ಅಯ್ಯರ್
Follow us
TV9 Web
| Updated By: ಪೃಥ್ವಿಶಂಕರ

Updated on: Nov 24, 2021 | 2:30 PM

ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂ ನವೆಂಬರ್ 25 ಗುರುವಾರದಿಂದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಟೀಂ ಇಂಡಿಯಾದ ಹಲವು ಸಾಮಾನ್ಯ ಆಟಗಾರರ ಅನುಪಸ್ಥಿತಿಯಿಂದಾಗಿ ಈ ಪಂದ್ಯವೂ ಟೆಸ್ಟ್ ಪದಾರ್ಪಣೆಗೆ ಸಾಕ್ಷಿಯಾಗಲಿದೆ. ಭಾರತ ತಂಡದ ಮಧ್ಯಮ ಕ್ರಮಾಂಕದಲ್ಲಿ ಈ ಟೆಸ್ಟ್​ಗೆ ಹೊಸ ಮುಖವೊಂದು ಬರಲಿದ್ದು, ಮುಂದಿನ ವರ್ಷಗಳಲ್ಲಿ ಈ ತಂಡದ ಪ್ರಮುಖ ಪಾತ್ರಧಾರಿಯಾಗಬಹುದು. ಸೀಮಿತ ಓವರ್‌ಗಳ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅವರು ಕಾನ್ಪುರ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಪರ ದೀರ್ಘ ಸ್ವರೂಪದಲ್ಲಿ ಪಾದಾರ್ಪಣೆ ಮಾಡಲಿದ್ದಾರೆ. ಈ ಪಂದ್ಯಕ್ಕೆ ತಂಡದ ನಾಯಕರಾಗಿರುವ ಅಜಿಂಕ್ಯ ರಹಾನೆ ಅವರು ಟೆಸ್ಟ್ ಪಂದ್ಯಕ್ಕೂ ಒಂದು ದಿನ ಮುಂಚಿತವಾಗಿ ನವೆಂಬರ್ 24 ರ ಬುಧವಾರ ಇದನ್ನು ಖಚಿತಪಡಿಸಿದ್ದಾರೆ. ಆದರೆ, ಸದ್ಯಕ್ಕೆ ಈ ಟೆಸ್ಟ್‌ಗಾಗಿ ಆಡುವ XI ನ ಉಳಿದ ಸದಸ್ಯರ ಹೆಸರನ್ನು ರಹಾನೆ ಬಹಿರಂಗಪಡಿಸಿಲ್ಲ.

ವಿರಾಟ್ ಕೊಹ್ಲಿ (1ನೇ ಟೆಸ್ಟ್), ರೋಹಿತ್ ಶರ್ಮಾ, ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಅವರಂತಹ ಟೀಮ್ ಇಂಡಿಯಾದ ಸ್ಟಾರ್ ಸದಸ್ಯರಿಗೆ ಈ ಟೆಸ್ಟ್ ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿದೆ. ಅದೇ ವೇಳೆ ಸರಣಿ ಆರಂಭಕ್ಕೂ ಮುನ್ನ ಆರಂಭಿಕ ಆಟಗಾರ ಕೆಎಲ್ ರಾಹುಲ್ ಗಾಯಗೊಂಡು ಸರಣಿಯಿಂದ ಔಟಾದರು. ಅವರ ಬದಲಿಗೆ ಮುಂಬೈ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರನ್ನು ಟೆಸ್ಟ್ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಹೀಗಿರುವಾಗ ಕಾನ್ಪುರ ಟೆಸ್ಟ್​ನಲ್ಲಿ ಆಡುವ ಇಲೆವೆನ್​ನಲ್ಲಿ ಸ್ಥಾನಕ್ಕಾಗಿ ಮುಂಬೈನ ಇಬ್ಬರು ದಿಗ್ಗಜರಾದ ಶ್ರೇಯಸ್ ಮತ್ತು ಸೂರ್ಯಕುಮಾರ್ ನಡುವೆ ಪೈಪೋಟಿ ನಡೆದಿದ್ದು, ಇದರಲ್ಲಿ ತಂಡದ ಮ್ಯಾನೇಜ್ ಮೆಂಟ್ ಶ್ರೇಯಸ್​ಗೆ ಆದ್ಯತೆ ನೀಡಿದೆ.

ಶ್ರೇಯಸ್ ಅಯ್ಯರ್ ಅವರ ಅತ್ಯುತ್ತಮ ಪ್ರಥಮ ದರ್ಜೆ ದಾಖಲೆ ಡಿಸೆಂಬರ್ 6ಕ್ಕೆ 27ನೇ ವರ್ಷಕ್ಕೆ ಕಾಲಿಡಲಿರುವ ಶ್ರೇಯಸ್ ಅಯ್ಯರ್ ದೇಶೀಯ ಕ್ರಿಕೆಟ್ ಸೇರಿದಂತೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಆಡುವ ಬಲಗೈ ಬ್ಯಾಟ್ಸ್‌ಮನ್ ಮುಂಬೈ ರಣಜಿ ತಂಡ ಮತ್ತು ಭಾರತ-ಎ ಪರ 54 ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ. ಈ ಪಂದ್ಯಗಳಲ್ಲಿ ಅಯ್ಯರ್ ಅವರ ದಾಖಲೆ ಅದ್ಭುತವಾಗಿದೆ. ಅವರು 52 ರ ಸರಾಸರಿಯಲ್ಲಿ 4592 ರನ್ ಗಳಿಸಿದ್ದಾರೆ, ಇದರಲ್ಲಿ ಅವರು 12 ಶತಕಗಳು ಮತ್ತು 23 ಅರ್ಧ ಶತಕಗಳನ್ನು ಸಹ ಗಳಿಸಿದ್ದಾರೆ. ಆದರೆ, ಕಾನ್ಪುರ ಟೆಸ್ಟ್‌ನಲ್ಲಿ ಅವರು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಾರೆಯೇ ಅಥವಾ ಐದನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಈ ವರ್ಷ ಆಸ್ಟ್ರೇಲಿಯಾ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಮರಳಿದ ನಂತರ ರಹಾನೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರು ಮತ್ತು ಅಂತಹ ಪರಿಸ್ಥಿತಿಯಲ್ಲಿ ಅವರು ಕಾನ್ಪುರದಲ್ಲಿ ಮತ್ತೆ ಈ ಜವಾಬ್ದಾರಿಯನ್ನು ನಿರ್ವಹಿಸಬಹುದು.

ಭುಜದ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಈ ವರ್ಷ ಶ್ರೇಯಸ್‌ಗೆ ಏರಿಳಿತದ ವರ್ಷವಾಗಿದೆ. ಮಾರ್ಚ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸ್ವದೇಶಿ ಏಕದಿನ ಸರಣಿಯ ವೇಳೆ ಗಾಯಗೊಂಡಿದ್ದರು. ಭುಜದ ನೋವಿನಿಂದಾಗಿ ಅವರು ಸರಣಿಯಿಂದ ಹೊರಗುಳಿದಿದ್ದಲ್ಲದೆ, ನಂತರ ಅವರು ಐಪಿಎಲ್‌ನ ಮೊದಲ ಭಾಗದಲ್ಲಿ ಆಡಲು ಸಾಧ್ಯವಾಗಲಿಲ್ಲ. ಈ ಸಮಯದಲ್ಲಿ ಅವರು ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಕೆಲವು ತಿಂಗಳುಗಳ ಕಾಲ ಮೈದಾನದಿಂದ ಹೊರಗಿದ್ದರು. ಇದರ ನಂತರ, ಅವರು ಸೆಪ್ಟೆಂಬರ್‌ನಲ್ಲಿ ಯುಎಇಯಲ್ಲಿ ನಡೆದ ಐಪಿಎಲ್‌ನ ಎರಡನೇ ಭಾಗಕ್ಕೆ ಮರಳಿದರು, ಆದರೆ ಅಲ್ಲಿ ಅವರ ಪ್ರದರ್ಶನವು ವಿಶೇಷವಾಗಿರಲಿಲ್ಲ. ಇದರ ಹೊರತಾಗಿಯೂ ಇದೀಗ ವರ್ಷಾಂತ್ಯದಲ್ಲಿ ಟೆಸ್ಟ್ ಪದಾರ್ಪಣೆಯ ಕನಸನ್ನು ನನಸಾಗಿಸಿಕೊಳ್ಳಲಿದ್ದಾರೆ.

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು