IND vs NZ: ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ

India vs New Zealand 5th T20: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ T20 ಸರಣಿಯ ಅಂತಿಮ ಪಂದ್ಯ ತಿರುವನಂತಪುರದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈಗಾಗಲೇ ಸರಣಿ ಗೆದ್ದಿರುವ ಭಾರತಕ್ಕೆ ಇದು T20 ವಿಶ್ವಕಪ್‌ಗೂ ಮುನ್ನ ಅಂತಿಮ ಪಂದ್ಯವಾಗಿದೆ. ಉಭಯ ತಂಡಗಳಲ್ಲಿ ಮಹತ್ವದ ಬದಲಾವಣೆಗಳೊಂದಿಗೆ ಕಣಕ್ಕಿಳಿದಿದ್ದು, ರೋಮಾಂಚಕ ಪಂದ್ಯ ನಿರೀಕ್ಷಿಸಲಾಗಿದೆ.

IND vs NZ: ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ
Ind Vs Nz

Updated on: Jan 31, 2026 | 6:50 PM

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತಿಮ ಹಂತವನ್ನು ತಲುಪಿದೆ. ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಈಗಾಗಲೇ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಆದರೆ ಕಿವೀಸ್ ತಂಡವು ನಾಲ್ಕನೇ ಟಿ20ಯಲ್ಲಿ ಭಾರತವನ್ನು 50 ರನ್‌ಗಳಿಂದ ಸೋಲಿಸಿತ್ತು. ಇದೀಗ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಸೋಲಿನ ಅಂತರವನ್ನು ಕಡಿಮೆ ಮಾಡಲು ನೋಡುತ್ತಿದೆ. ಸರಣಿಯ ಅಂತಿಮ ಮತ್ತು ಐದನೇ ಪಂದ್ಯವು ಈಗ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯವು ಟಿ20 ವಿಶ್ವಕಪ್‌ಗೆ ಮುನ್ನ ಟೀಂ ಇಂಡಿಯಾದ ಕೊನೆಯ ಪಂದ್ಯವಾಗಿದೆ.

ಟಾಸ್ ಗೆದ್ದ ಟೀಂ ಇಂಡಿಯಾ

ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ. ಅದರಂತೆ ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದ್ದು, ಅಕ್ಷರ್ ಪಟೇಲ್ ಮತ್ತು ಇಶಾನ್ ಕಿಶನ್ ತಂಡಕ್ಕೆ ಮರಳಿದ್ದಾರೆ. ವರುಣ್ ಚಕ್ರವರ್ತಿ ಕೂಡ ಆಡಲಿದ್ದಾರೆ. ನ್ಯೂಜಿಲೆಂಡ್ ಕಳೆದ ಪಂದ್ಯಕ್ಕೆ ಹೋಲಿಸಿದರೆ ಈ ಪಂದ್ಯಕ್ಕೆ ನಾಲ್ಕು ಬದಲಾವಣೆಗಳನ್ನು ಮಾಡಿದೆ. ಡೆವೊನ್ ಕಾನ್ವೇ ಬದಲಿಗೆ ಫಿನ್ ಅಲೆನ್, ಜಾಕೋಬ್ ಡಫಿ ಬದಲಿಗೆ ಮಾರ್ಕ್ ಚಾಪ್ಮನ್ ಮತ್ತು ಮ್ಯಾಟ್ ಹೆನ್ರಿ ಬದಲಿಗೆ ಲಾಕಿ ಫರ್ಗುಸನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಕೈಲ್ ಜೇಮಿಸನ್ ಕೂಡ ಈ ಪಂದ್ಯದಲ್ಲಿ ಆಡಲಿದ್ದಾರೆ.

ಉಭಯ ತಂಡಗಳು

ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ನ್ಯೂಜಿಲೆಂಡ್ ತಂಡ: ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಫಿನ್ ಅಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡ್ಯಾರಿಲ್ ಮಿಚೆಲ್, ಬೆವನ್ ಜಾಕೋಬ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ಇಶ್ ಸೋಧಿ, ಲಾಕಿ ಫರ್ಗುಸನ್, ಜಾಕೋಬ್ ಡಫಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Sat, 31 January 26