IND vs NZ T20I: ಭಾರತ-ನ್ಯೂಜಿಲೆಂಡ್ ಮೊದಲ ಟಿ20: ಎಷ್ಟು ಗಂಟೆಗೆ, ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ

| Updated By: ಝಾಹಿರ್ ಯೂಸುಫ್

Updated on: Jan 26, 2023 | 6:25 PM

IND vs NZ 1st T20 Live Streaming: ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದು, ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ.

IND vs NZ T20I: ಭಾರತ-ನ್ಯೂಜಿಲೆಂಡ್ ಮೊದಲ ಟಿ20: ಎಷ್ಟು ಗಂಟೆಗೆ, ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
IND vs NZ T20I
Follow us on

India vs New Zealand 1st T20 Live Streaming: ಭಾರತ-ನ್ಯೂಜಿಲೆಂಡ್ ನಡುವಣ ಟಿ20 ಸರಣಿಯು ನಾಳೆಯಿಂದ (ಜ.27) ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ ರಾಂಚಿಯಲ್ಲಿ ನಡೆಯಲಿದೆ. ಈ ಸರಣಿಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರನ್ನು ಆಯ್ಕೆ ಮಾಡಲಾಗಿಲ್ಲ. ಇನ್ನು ಕೆಎಲ್ ರಾಹುಲ್ ಹಾಗೂ ಅಕ್ಷರ್ ಪಟೇಲ್ ವೈಯುಕ್ತಿಕ ಕಾರಣಗಳಿಗೆ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದು, ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ. ಈ ಪಂದ್ಯ ಎಷ್ಟು ಗಂಟೆಗೆ ಶುರುವಾಗಲಿದೆ, ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಭಾರತ vs ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಈ ಪಂದ್ಯವು ಶುಕ್ರವಾರ, ಜನವರಿ 27 ರಂದು ನಡೆಯಲಿದೆ.

ಇದನ್ನೂ ಓದಿ
IPLನ ಒಂದು ಪಂದ್ಯಕ್ಕೆ 107 ಕೋಟಿ ರೂ: PSL ನ 1 ಪಂದ್ಯಕ್ಕೆ ಎಷ್ಟು ಗೊತ್ತಾ?
ಟೀಮ್ ಇಂಡಿಯಾ ಪರ ಅತೀ ಹೆಚ್ಚು ಬಾರಿ 150 ಕ್ಕೂ ಅಧಿಕ ರನ್ ಬಾರಿಸಿದ್ದು ಯಾರು ಗೊತ್ತಾ?
Team India: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Virat Kohli: ಕಿಂಗ್ ಕೊಹ್ಲಿಯ ಅಬ್ಬರಕ್ಕೆ ಸಚಿನ್ ದಾಖಲೆ ಉಡೀಸ್

ಮೊದಲ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯವು ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಪಂದ್ಯವು ಯಾವಾಗ ಶುರುವಾಗಲಿದೆ?

ಭಾರತ vs ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯವು ಸಂಜೆ 07:00 ಗಂಟೆಗೆ ಪ್ರಾರಂಭವಾಗುತ್ತದೆ.

ಈ ಪಂದ್ಯವನ್ನು ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಬಹುತೇಕ ಚಾನೆಲ್‌ಗಳಲ್ಲಿ ಭಾರತ vs ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು. ಇನ್ನು ಡಿಸ್ನಿ ಹಾಟ್​ಸ್ಟಾರ್ ಆ್ಯಪ್​ನಲ್ಲೂ ಲೈವ್ ಸ್ಟ್ರೀಮ್ ಇರಲಿದೆ.

ಇದನ್ನೂ ಓದಿ: Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್

ಭಾರತ-ನ್ಯೂಜಿಲೆಂಡ್ ಟಿ20 ಸರಣಿ ವೇಳಾಪಟ್ಟಿ:

  • 1ನೇ ಟಿ20 ಪಂದ್ಯ (ರಾಂಚಿ) – ಜನವರಿ 27
  • 2ನೇ ಟಿ20 ಪಂದ್ಯ (ಲಕ್ನೋ) – ಜನವರಿ 29
  • 3ನೇ ಟಿ20 ಪಂದ್ಯ (ಅಹಮದಾಬಾದ್) – ಫೆಬ್ರವರಿ 1

ಟೀಮ್ ಇಂಡಿಯಾ ಟಿ20 ತಂಡ:

ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್​ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ನ್ಯೂಜಿಲೆಂಡ್ ಟಿ20 ತಂಡ:

ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್​ವೆಲ್, ಮಾರ್ಕ್ ಚಾಪ್​ಮನ್, ಡೆವೊನ್ ಕಾನ್ವೇ, ಡೇನ್ ಕ್ಲೀವರ್, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬೆಂಜಮಿನ್ ಲಿಸ್ಟರ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರಿಪ್ಪನ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್ನರ್.